ಪುರುಷೋತ್ತಮ್ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jun 11, 2020, 6:06 AM IST
ಚಿಕ್ಕಬಳ್ಳಾಪುರ: ಮಂಡ್ಯದ ಕೆಆರ್‌ಎಸ್ ಡ್ಯಾಂ ಬಳಿ ವಿಶ್ವ ವಿಖ್ಯಾತ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಸ್ಥಾಪಿಸಿದರೆ ನಾವು ಒಡೆದು ಹುರುಳಿಸುತ್ತೇವೆ ಎಂದು ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ ಎಂ.ವಿ.ಕಾರ್ಮಿಕ ಸೇವಾ ಸಂಘದ ಸದಸ್ಯರು ನಗರ ಜಿಲ್ಲಾಡಳಿತ ಭವನದ ಎದುರು ಬುಧವಾರ ಧರಣಿ ನಡೆಸಿದರು.
ಕೆಆರ್‌ಎಸ್ ಡ್ಯಾಂ ನಿರ್ಮಾಣದಲ್ಲಿ ಜಿಲ್ಲೆಯವರಾದ ವಿಶ್ವೇಶ್ವರಯ್ಯ ಪಾತ್ರ ಅಪಾರವಾಗಿದೆ. ಆದರೆ ಸರ್ ಎಂವಿ ಮೈಸೂರು ರಾಜ್ಯದ ದಿವಾನರಷ್ಟೆ. ದಿವಾನರಿಗೆ ಕೊಡುವ ಸಂಬಳ ರಾಜವಂಶಸ್ಥರು ಕೊಟ್ಟಿದ್ದಾರೆ. ಕೆಆರ್ ಎಸ್ ಡ್ಯಾಂ ಕಟ್ಟುವ ವಿಚಾರ ಮಾತನಾಡುವಾಗ ಸರ್ ಎಂವಿಯವರು ಬರೀ ಗಾರೆ ಕೆಲಸದ ಮೇಸ್ತ್ರೀ. ಮೇಸಿOಉಯ ಹೆಸರು ಮತ್ತು ಪ್ರತಿಮೆಯನ್ನು ಕೆಆರ್ ಎಸ್ ಡ್ಯಾಂ ಬಳಿ ಇಡಲು ಸಾಧ್ಯವೇ ಎಂದು ಮಾಜಿ ಮೇಯರ್ ಮತ್ತಿತರರು ಉದ್ಧಟತನದಿಂದ ಮಾತನಾಡಿದ್ದಾರೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವೇಶ್ವರಯ್ಯ ಅವರಿಗೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿರುವವರನ್ನು ಬಂಧಿಸಬೇಕೆಂದು ಡೀಸಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದರು. ಸರ್ ಎಂ.ವಿ.ಕಾರ್ಮಿಕರ ಸೇವಾ ಸಂಘದ ರಾಜ್ಯಾಧ್ಯಕ್ಷ ಪ್ರಕಾಶ್ ಸಿ., ಸಾಮಾಜಿಕ ಹೋರಾಟಗಾರ ನಂದಿ ಪುರುಷೋತ್ತಮ, ಸರ್ ಎಂ.ವಿ.ಕಾರ್ಮಿಕರ ಸೇವಾ ಸಂಘದ ಜಿಲ್ಲಾಧ್ಯಕ್ಷ ಜಿ.ವಿ.ಮೂರ್ತಿ, ಪ್ರಧಾನ ಕಾರ್ಯದರ್ಶಿ ರಮೇಶ್, ಪದಾಧಿಕಾರಿಗಳಾದ ಮುರಳಿ, ಚೌಡಪ್ಪ, ಅಂಬರೀಶ್, ಸ್ಟುಡಿಯೋ ಮೂರ್ತಿ, ಪ್ರಭಾವತಿ, ಮಂಜು, ಕೃಷ್ಣಪ್ಪ, ಕೃಷ್ಣಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.