ಹೊಸ ಮಾರ್ಗಸೂಚಿ ಪಾಲನೆಗೆ ಕ್ರಮ
Team Udayavani, Apr 23, 2021, 3:53 PM IST
ಚಿಕ್ಕಬಳ್ಳಾಪುರ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಮೇ4ರವರೆಗೆ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ರಾತ್ರಿಕರ್ಫ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6ಗಂಟೆವರೆಗೆ ವೀಕ್ ಎಂಡ್ ಕಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರಆದೇಶ ಹೊರಡಿಸಿದ್ದು, ಈ ಹೊಸ ಮಾರ್ಗಸೂಚಿಗಳನ್ನುಜಿಲ್ಲೆಯಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕುಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಕೋವಿಡ್-19 ಮಾರ್ಗಸೂಚಿ ಅನುಷ್ಠಾನ ಬಗ್ಗೆ ಜಿಲ್ಲಾಡಳಿತಭವನದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ನೋಡಲ್‌ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿ, ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿಪಾಲಿಸಲು ಅಧಿಕಾರಿಗಳು ಅರಿವು ಮೂಡಿಸಬೇಕೆಂದರು.
ಹೊಸ ಮಾರ್ಗಸೂಚಿಯನ್ವಯ ಏನಿರುತ್ತೆ? ಏನಿರಲ್ಲ?ಶಾಲೆಗಳು, ಕಾಲೇಜುಗಳು, ಕೋಚಿಂಗ್ ಕೇಂದ್ರಗಳು(ಆನ್‌ಲೈನ್,ದೂರಶಿಕ್ಷಣ ಮುಂದುವರಿಸಬಹುದು), ಸಿನಿಮಾ ಹಾಲ್‌ಗಳು,ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ,ಕ್ರೀಡಾ ಕಾಂಪ್ಲೆಕ್ಸ್, ಸ್ಟೇಡಿಯಂ, ಈಜುಕೊಳ, ಮನರಂಜನಾಅಮ್ಯೂಸ್‌ಮೆಂಟ್ ಪಾರ್ಕ್, ಬಾರ್, ಆಡಿಟೋರಿಯಂಗಳು ಮತ್ತಿತರ ಸಮಾವೇಶದ ತಾಣ, ಎಲ್ಲ ಸಾಮಾಜಿಕ, ರಾಜಕೀಯ,ಕ್ರೀಡಾ, ಮನರಂಜನೆ, ಶೆ„ಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಮಾವೇಶಸಂಪೂರ್ಣ ಬಂದ್ ಆಗಲಿದೆ.
ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ, ಪ್ರಾರ್ಥನಾ ಮಂದಿರಗಳಿಗೆಭಕ್ತರಿಗೆ ಅವಕಾಶ ಇಲ್ಲ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿಪಾರ್ಸೆಲ್ ಮಾತ್ರ ಒಯ್ಯಲು ಅವಕಾಶ ಇದೆ ಎಂದು ತಿಳಿಸಿದರು.
ಶಾಲಾ, ಕಾಲೇಜು ಸಂಪೂರ್ಣ ಬಂದ್:ಶಾಲೆ ಕಾಲೇಜುಗಳು, ಇತರೆ ವಿದ್ಯಾಸಂಸ್ಥೆಗಳು, ತರಬೇತಿಕೇಂದ್ರಗಳು, ಕ್ರೀಡಾಂಗಣ, ಪಾರ್ಕು ಬಂದ್ ಆಗಲಿದ್ದು, ಎಲ್ಲಾಧಾರ್ಮಿಕ ಕೇಂದ್ರಗಳು ಬಂದ್ ಆಗಲಿದೆ. ಕಟ್ಟಡ ಕಾರ್ಮಿಕರಿಗೆಯಾವುದೇ ಅಡ್ಡಿ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.ಎಲ್ಲ ರೀತಿಯ ನಿರ್ಮಾಣ ಚಟುವಟಿಕೆ, ರಿಪೇರಿ ಚಟುವಟಿಕೆಗಳಿಗೆಅವಕಾಶ ಇದೆ. ಮುಂಗಾರು ಪೂರ್ವ ಕಾಮಗಾರಿ ನಡೆಸಬಹುದು.
ಎಲ್ಲ ಕೈಗಾರಿಕೆಗಳು, ಉತ್ಪಾದನಾ ಘಟಕಗಳನ್ನು ಕೋವಿಡ್ ನಿಯಮಪಾಲಿಸಿ ನಡೆಸಬಹುದು. ಕಾರ್ಮಿಕರು ಮತ್ತು ಸಿಬ್ಬಂದಿ ಸಾಗಣೆಗೆಕೆಲಸದ ಸ್ಥಳದ ಗುರುತಿನ ಚೀಟಿ ಅಗತ್ಯವಾಗಿದೆ.
ನಿರ್ಬಂಧ:ವಾಣಿಜ್ಯ ಚಟುವಟಿಕೆಗಳಾದ ಕಿರಾಣಿ ಅಂಗಡಿ, ನ್ಯಾಯ ಬೆಲೆಅಂಗಡಿ, ಆಹಾರ ಪದಾರ್ಥ, ಹಣ್ಣು, ತರಕಾರಿ, ಡೇರಿ, ಹಾಲುಮತ್ತು ಇತರ ಉತ್ಪನ್ನಗಳು, ಮೀನು- ಮಾಂಸ, ಪ್ರಾಣಿಗಳಆಹಾರಗಳ ಮಾರಾಟಕ್ಕೆ ಅವಕಾಶ ಇದೆ.
ಹೂವು, ಹಣ್ಣು, ತರಕಾರಿಸಗಟು ಮಾರುಕಟ್ಟೆಗಳನ್ನು ಏ.23ರ ಬಳಿಕ ತೆರೆದ ಸ್ಥಳ ಅಥವಾಮೈದಾನಗಳಿಗೆ ಸ್ಥಳಾಂತರ ಮಾಡಬೇಕು. ಲಾಡ್ಜ್ ಮತ್ತು ಹೋಟೆಲ್‌ಗಳಲ್ಲಿ ಉಳಿದುಕೊಂಡ ಅತಿಥಿಗಳಿಗೆ ಆಹಾರ ಪೂರೈಕೆಮಾಡಬಹುದು.
ಮದುವೆಗೆ 50, ಅಂತ್ಯ ಸಂಸ್ಕಾರಕ್ಕೆ 20 ಮಂದಿಗೆಅವಕಾಶವಿದೆ. ಇನ್ನು ಪ್ರತಿದಿನ ರಾತ್ರಿ 9 ರಿಂದ ಮಾರನೇ ದಿನದ ಬೆಳಗ್ಗೆ6ರ ವರೆಗೆ ರಾತ್ರಿ ಕರ್ಫ್ಯೂ ಇರುತ್ತದೆ. ಈ ಸಂದರ್ಭದಲ್ಲಿ ಎಲ್ಲಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಬಂìಧಿ ಸಲಾಗಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ಮಾತನಾಡಿ, ಮದುವೆಗಳು ಈಗಾಗಲೇ ನಿಗದಿಯಾಗಿದ್ದರೆಅವುಗಳಿಗೆ ಗರಿಷ್ಠ 50 ಮಂದಿಗೆ ಮಾತ್ರ ಅವಕಾಶವಿದೆ. ಹೊಸದಾಗಿನಿಗದಿ ಮಾಡಿಕೊಳ್ಳುವವರು ಆಯಾ ತಾಲೂಕು ತಹಶೀಲ್ದಾರ್‌ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕಡ್ಡಾಯ.
ಇನ್ನು ಅಂತ್ಯ ಸಂಸ್ಕಾರಕ್ಕೆ ಕೇವಲ 20 ಮಂದಿಗೆ ಮಾತ್ರ ಅವಕಾಶನೀಡಲಾಗಿದೆ. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಪಾಲಿಸಬೇಕು ಎಂದುಸೂಚಿಸಿದರು. ಜಿಪಂ ಸಿಇಒ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್,ಜಿಲ್ಲೆಯ ಎಲ್ಲಾ ತಾಲೂಕು ನೋಡಲ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.