ಕಾರ್ಯಕರ್ತರೇ ಕಾಂಗ್ರೆಸ್‌ಗೆ ಬೆನ್ನೆಲುಬು: ಶಿವಶಂಕರರೆಡ್ಡಿ
Team Udayavani, Mar 19, 2020, 3:00 AM IST
ಗೌರಿಬಿದನೂರು: ಯಾವುದೇ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ಬೆನ್ನಲುಬಾಗಿದ್ದು ಪಕ್ಷ ನಿಷ್ಠೆ ಮರೆತರೆ ಅವರಿಗೆ ರಾಜಕೀಯ ಭಷ್ಯ ಶೂನ್ಯ ಖಚಿತ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು. ತಾಲೂಕಿನ ಚಿಕ್ಕಗಂಗಸಂದ್ರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪಕ್ಷಕ್ಕೆ ಮುಖಂಡರಿಗಿಂತ ಕಾರ್ಯಕರ್ತರೇ ಬೆನ್ನಲುಬು. ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ಸೋಲು ಖಚಿತ. ಅದರಲ್ಲೂ ಕೆಲ ಮುಖಂಡರು ಚುನಾವಣೆ ಸಮಯದಲ್ಲಿ ಹಣದ ಆಸೆಗೆ ಪಕ್ಷದ್ರೋಹ ಬಗೆಯವುದು ಸಾಮಾನ್ಯ. ಆದರೆ ಕಾರ್ಯಕರ್ತರು ಮಾತ್ರ ಪಕ್ಷದ ಪರ ನಿಂತು ಕೆಲಸ ಮಾಡಿದರೆ ಮಾತ್ರ ಪಕ್ಷ ಆಡಳಿತಕ್ಕೆ ಬರುವುದು ಎಂದು ತಿಳಿಸಿದರು.
ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ತಳ ಮಟ್ಟದಲ್ಲಿ ಅವರ ಪರಿಶ್ರಮ ಅಗತ್ಯವಾಗಿದೆ ಎಂದು ತಿಳಿಸಿದರು. ಕುರುಬ ಸಮಾಜ ಮುಖಂಡ ಗಂಗಾಧರಗೌಡ, ನಮ್ಮ ಕುರುಬ ಸಮಾಜ ಮೊದಲನಿಂದ ಕಾಂಗ್ರೆಸ್‌ಗೆ ಒಲವು ತೋರುತ್ತಿದ್ದೇವೆ.
ಅದರಂತೆ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ನಮ್ಮ ಸಮುದಾಯಕ್ಕೆ ಹಲವಾರು ಸವಲತ್ತು ನೀಡಿರುವುದು ಶ್ಲಾಘನೀಯ ಎಂದು ತಿಳಿಸಿದರು. ಇದೇ ವೇಳೆ ಕಾಂಗ್ರೆಸ್ ಸಿದ್ಧಾಂತಗಳನ್ನು ಮೆಚ್ಚಿ ಬಿಜೆಪಿಯ ಹಲವಾರು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ನಂಜುಂಡರೆಡ್ಡಿ, ನಾಗರಾಜು, ರಾಮಪ್ಪ, ಹರೀಶ್, ಬಸವ ಹಾಗೂ ಚಿಕ್ಕಗಂಗಸಂದ್ರದ ಹಲವು ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.