ಐದು ವರ್ಷದಲ್ಲಿ ಕಪ್ಪುಚುಕ್ಕಿ ಇಲ್ಲದೇ ಆಡಳಿತ

Team Udayavani, Apr 13, 2019, 4:45 PM IST

chikk-2
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ ವಿವಿಧ ಶಾಲಾ, ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಮುಖವಾಡಗಳನ್ನು ಧರಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡಗೆ ಮತ ನೀಡುವಂತೆ ಪ್ರಚಾರ ನಡೆಸಿ ಗಮನ ಸೆಳೆದರು.
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವಿಭಾಗೀಯ ಸಂಚಾಲಕ ಎನ್‌.ಮಂಜುನಾಥರೆಡ್ಡಿ ನೇತೃತ್ವದಲ್ಲಿ ನಗರದ ವಿಷ್ಣುಪ್ರಿಯ ಹಾಗೂ ಕೃಷ್ಣ ರುಕ್ಮಣಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ನಗರದ ಬಿಬಿ ರಸ್ತೆಯ ಶನಿಮಹಾತ್ಮ ದೇವಾಲಯ ದಿಂದ ಬಿಬಿ ರಸ್ತೆಯ ಮುಖಾಂತರ ಬೃಹತ್‌ ಜಾಥಾ ನಡೆಸಿ ಬಿಜೆಪಿ ಪರ ಘೋಷಣೆ ಕೂಗಿದರಲ್ಲದೇ ಬಿಜೆಪಿ ಬೆಂಬಲಿಸುವಂತೆ ಕರಪತ್ರ ಹಂಚಿದರು.
ನಗರದ ಬಿಬಿ ರಸ್ತೆ, ಅಂಬೇಡ್ಕರ್‌ ವೃತ್ತ, ಖಾಸಗಿ ಬಸ್‌ ನಿಲ್ದಾಣ, ಕೋರ್ಟ್‌ ರಸ್ತೆ, ಹಳೆ ಜಿಲ್ಲಾಸ್ಪತ್ರೆ, ಎಂಜಿ ರಸ್ತೆಗಳಲ್ಲಿ ಸಂಚರಿಸಿದ ವಿದ್ಯಾರ್ಥಿಗಳು ಮೋದಿ ಮತ್ತೂಮ್ಮೆ ಘೋಷಣೆಗಳ ಮೂಲಕ ಮತದಾರರ ಗಮನ ಸೆಳೆದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಸೇನೆ ಬಲಿಷ್ಠ: ಎಬಿವಿಪಿ ವಿಭಾಗದ ಸಂಚಾಲಕ ಮಂಜುನಾಥ್‌ ರೆಡ್ಡಿ ಮಾತನಾಡಿ, ಕಳೆದ ಐದು ವರ್ಷದಲ್ಲಿ ಪ್ರಧಾನಿ ಮೋದಿ ಕಪ್ಪು ಚುಕ್ಕೆ ಇಲ್ಲದೆ ಪಾರದರ್ಶಕತೆ ಆಡಳಿತ ನೀಡಿದ್ದಾರೆ. ದೇಶ ಬಲಿಷ್ಠವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮೋದಿ ಅವರೇ ಕಾರಣ. ಈ ನಿಟ್ಟಿನಲ್ಲಿ ಮತ್ತೂಮ್ಮೆ ಮೋದಿ ಅವರು ಅಧಿಕಾರಕ್ಕೆ ಬರಬೇಕೆಂದು ಹೇಳಿದರು. ಶತ್ರು ದೇಶವನ್ನು ಹಿಮ್ಮೆಟ್ಟಿಸುವ ಸೈನ್ಯ ಸಾಮರ್ಥ್ಯವು ಬಲಗೊಂಡಿತು ಎಂದರು.
ಎಬಿವಿಪಿ ಜಿಲ್ಲಾ ಮುಖಂಡ ಬಾಬುರೆಡ್ಡಿ ಮಾತನಾಡಿ, ದೇಶದ ಭವಿಷ್ಯ ಗಟ್ಟಿಯಾಗಬೇಕಾದರೆ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ಅವರಿಂದ ಮಾತ್ರ ಸುಭದ್ರ ದೇಶ ನಿರ್ಮಾಣ ಸಾಧ್ಯ. ದೇಶದ ಹಿತಕ್ಕಾಗಿ ರಜೆ ಪಡೆಯದೆ ದುಡಿಯುತ್ತಿರುವ ಮೋದಿ ಎಲ್ಲರಿಗೂ ಮಾದರಿ ಎಂದರು.
ವಿದ್ಯಾರ್ಥಿಗಳ ಬಳಕೆ ಸಾರ್ವಜನಿಕರಲ್ಲಿ ಚರ್ಚೆ: ಲೋಕಸಭಾ ಚುನಾವಣಾ ಕಾರ್ಯಕ್ಕೆ ಎಬಿವಿಪಿ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ಚುನಾವಣಾ ಪ್ರಚಾರ ಕಾರ್ಯ ನಡೆಸಿದ್ದಕ್ಕೆ ಜಿಲ್ಲಾ ಕೇಂದ್ರದ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು. ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ. ಆದರೆ ಕೆಲ ಖಾಸಗಿ ಕಾಲೇಜುಗಳು ರಾಜಕೀಯ ಪಕ್ಷಗಳ ಪರ ಚುನಾವಣಾ ಪ್ರಚಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟ ಕ್ರಮ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.
ಎಬಿಪಿ ಕಾರ್ಯಕರ್ತರಾದ ಹರೀಶ್‌, ಮಧು, ಜಯ್‌, ಕಿರಣ್‌, ಮಲ್ಲಿಕಾರ್ಜನ್‌, ಅಮಿತ್‌, ಅಖೀಲ್‌, ಬಿಜೆಪಿ ರಾಜ್ಯ ಕಾರ್ಯಾಕಾರಿಣಿ ಸದಸ್ಯ ಲಕ್ಷ್ಮೀನಾರಾಯಣಗುಪ್ತಾ, ಕನ್ನಡ ಸೇನೆ ರಾಜ್ಯಾಧ್ಯಕ್ಷ ಪ್ರಸನ್ನಗೌಡ ಜಾಥಾದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.