ಮತ್ತೆ ಕಾಂಗ್ರೆಸ್‌ ಕಡೆ ಮುಖಮಾಡಿದ ಎಂ.ಸಿ.ಸುಧಾಕರ್‌?

ಕ್ಷೇತ್ರದ ಜನರ ಚರ್ಚೆಗೆಕಾರಣವಾದಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌-ಎಂ.ಸಿ.ಸುಧಾಕರ್‌ ಭೇಟಿ

Team Udayavani, Jul 13, 2021, 2:31 PM IST

38071107cmyp2_1107bg_2

ಚಿಂತಾಮಣಿ: ಅವಳಿ ಜಿಲ್ಲೆಯಲ್ಲಿ ಜಿದ್ದಾಜಿದ್ದಿ ರಾಜ ಕಾರಣಕ್ಕೆ ಪ್ರಸಿದ್ಧಿ ಪಡೆದ ಚಿಂತಾಮಣಿ ವಿಧಾನಸಭೆ ಕ್ಷೇತ್ರ ರಾಜಕಾರಣದಲ್ಲಿ ಬದಲಾವಣೆ ಕೂಗು ಕೇಳಿಬರುತ್ತಿದೆ. ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಮರಳಿ ಕಾಂಗ್ರೆಸ್‌ ಕಡೆ ಮುಖಮಾಡುತ್ತಿದ್ದು, ತಾಲೂಕಿನ ಜನರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಾಲೂಕಿನಲ್ಲಿ ತಾಪಂ, ಜಿಪಂ ಚುನಾವಣೆ ಕಾವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ರಾಜಕೀಯ ಕ್ಷೇತ್ರದಲ್ಲಿ ಕಂಡುಬರುತ್ತಿರುವ ಬದಲಾವಣೆಗಳುಕ್ಷೇತ್ರದ ಜನರ ಕುತೂಹಲ ಕೆರಳಿಸಿದೆ. ಅದರಲ್ಲಿಯೂ ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಗೌರಿಬಿದನೂರು ಶಾಸಕ ಶಿವಶಂಕರ್‌ರೆಡ್ಡಿ, ಉಮಾಶ್ರೀ ಅವರ ತಂಡದೊಂದಿಗೆ ಡಿ.ಕೆ.ಶಿವಕುಮಾರ್‌ಅವರನ್ನುಭೇಟಿಮಾಡಿರುವುದು ಸುಧಾಕರ್‌ ಮತ್ತೆ ಕಾಂಗ್ರೆಸ್‌ ಪಕ್ಷ ಸೇರುತ್ತಾರೆಂಬ ಕೂಗಿಗೆ ಪುಷ್ಟಿ ನೀಡಿದಂತಾಗಿದೆ.

ಚಿಂತಾಮಣಿಯ ಎಂ.ಸಿ.ಆಂಜನೇಯರೆಡ್ಡಿ ಕುಟುಂಬವು 1951ರಿಂದಲೂ ಕಾಂಗ್ರೆಸ್‌ ಪಕ್ಷದಲ್ಲೇ ಇದ್ದು, ಶಾಸಕರಾಗಿ ಆಯ್ಕೆ ಆಗಿದ್ದು ವಿಶೇಷ. ಇನ್ನು ಆಂಜನೇಯರೆಡ್ಡಿ ಕುಟುಂಬದವರು ಕಾಂಗ್ರೆಸ್‌ ಪಕ್ಷ ಬಿಟ್ಟು ಸ್ಪರ್ಧೆ ಮಾಡಿದ್ದ ವೇಳೆ ಸೋಲು ಕಂಡಿದ್ದೇ ಹೆಚ್ಚು. ಕಾಂಗ್ರೆಸ್‌ ಪಕ್ಷದಿಂದ 2004, 2008ರ ಚುನಾವಣೆಯಲ್ಲಿ ಶಾಸಕರಾಗಿದ್ದ ಎಂ.ಸಿ.ಸುಧಾಕರ್‌, 2013 ಮತ್ತು 2018ರಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ ಸೋಲನ್ನು ಕಂಡಿದ್ದರು. ಆದ್ದರಿಂದ ಅವರು ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂಬ ಅಂತೆ ಕಂತೆಗಳಿಗೆ ಇತ್ತೀಚಿನ ಬೆಳೆವಣಿಗೆಗಳು ಪುಷ್ಟಿಕರಿಸುತ್ತವೆ.

ಡಿಕೆಶಿ, ಸಿದ್ದುಭೇಟಿ: ಕಳೆದ15 ದಿನಗಳ ಹಿಂದೆಯೂ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದ ಸುಧಾಕರ್‌, ಭಾನುವಾರ ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಫೋಟೋಗಳನ್ನು ಕೆಪಿಸಿಸಿ ಅಧ್ಯಕ್ಷರೇ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇವೆಲ್ಲವನ್ನು ಗಮನಿಸಿದರೆ ಸುಧಾಕರ್‌ ಅವರು ಕಾಂಗ್ರೆಸ್‌ ಪಕ್ಷ ಸೇರುವುದು ಖಚಿತವಾಗಿದೆ ಎಂದು ಕ್ಷೇತ್ರದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಎಂ.ಸಿ.ಸುಧಾಕರ್‌ ಭೇಟಿ ಮಾಡಿದ್ದ ಫೋಟೋಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದನ್ನು ಕಂಡ ಎಂಸಿಎಸ್‌ ಬೆಂಬಲಿಗರು ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್‌ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

ಮುಸುಕಿನ ಗುದ್ದಾಟ ಶಮನವಾಯಿತೇ?: ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ಮುಖಂಡ ಕೆ.ಎಚ್‌.ಮುನಿಯಪ್ಪ ಮತ್ತು ಎಂ.ಸಿ.ಸುಧಾಕರ್‌ ನಡುವಿನ ರಾಜಕೀಯ ಗುದ್ದಾಟ ಹಾವು ಮುಂಗುಸಿಯಂತೆ ಇನ್ನು ಹಲವು ವರ್ಷಗಳಿಂದ ನಡೆಯುತ್ತಿದ್ದು, ಎಂ.ಸಿ.ಸುಧಾಕರ್‌ ಕಾಂಗ್ರೆಸ್‌ ಪಕ್ಷ ಸೇರಲು ನಡೆಯುತ್ತಿರುವ ಬೆಳವಣಿಗೆಗಳು ಕಂಡರೆ ಬಹುಶಃ ಇಬ್ಬರ ನಡುವಿನ ಮುನಿಸು ಶಮನವಾಗಿದಿಯೇ ಅಥವಾ ಇಲ್ಲವೆ ಎಂಬುವುದು ಕ್ಷೇತ್ರದ ಜನರಲ್ಲಿಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

de

Mangaluru: ಅಪರಿಚಿತ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.