ಜಿಲ್ಲಾದ್ಯಾಂತ ಗರಿಗೆದರಿತು ಕೃಷಿ ಚಟುವಟಿಕ
Team Udayavani, May 17, 2018, 12:52 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಾಂತ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ ಕೀಯ ಪಕ್ಷಗಳ ಅಭ್ಯರ್ಥಿಗಳ ಪರ
ಚುನಾವಣಾ ಪ್ರಚಾರದ ಭರಾಟೆಯಲ್ಲಿ ಹಲವು ತಿಂಗಳಿಂದ ತೊಡಗಿದ್ದ ಜಿಲ್ಲೆಯ ರೈತಾಪಿ ಜನ ಹಾಗೂ ಕೂಲಿ ಕಾರ್ಮಿಕರು ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಚುನಾವಣೆಯ ಗುಂಗಿನಿಂದ ನಿದಾನಕ್ಕೆ ಹೊರ ಬರುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ಜಿಲ್ಲಾದ್ಯಾಂತ ಪ್ರಸ್ತಕ ವರ್ಷದ ಕೃಷಿ ಚಟುವಟಿಕೆಗಳು ಬಿರುಸುನಿಂದ ಆರಂಭ ಗೊಂಡಿದ್ದು ಕಳೆದ ಭಾನುವಾರ ಜಿಲ್ಲೆಯಲ್ಲಿ ಬಿದ್ದ ಮಳೆಗೆ ಕೃಷಿ ಭೂಮಿ ಹದ ಗೊಳಿಸುವ ಮೊದಲ ಹಂತದ ಕಾರ್ಯಕ್ಕೆ ರೈತರು ಮುಂದಾಗಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಚುನಾವಣಾ ಕಾರ್ಯಗಳಿಂದ ಮುಕ್ತರಾಗಿ ಕೃಷಿ ಚಟುವಟಿಕೆಗಳತ್ತ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರ ಬಿದಿದ್ದೇ ತಡೆ ಜಿಲ್ಲೆಯ ರೈತಾಪಿ ಕೂಲಿ ಕಾರ್ಮಿಕರು, ವಿಶೇಷವಾಗಿ ನಗರ, ಪಟ್ಟಣಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಳ್ಳುವ ಕಾರ್ಮಿಕರು ಕೆಲಸ ಕಾರ್ಯಗಳಿಗೆ ಬ್ರೇಕ್ ಹಾಕಿ ರಾಜಕೀಯ ಪಕ್ಷಗಳು ಕೈ ತುಂಬ ನೀಡುತ್ತಿದ್ದ ಹಣ ಪಡೆದು ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಇದರಿಂದ ನಗರ ಪಟ್ಟಣದಲ್ಲಿ ಕಾರ್ಮಿಕರ ಇಲ್ಲದೇ ಕಟ್ಟಡ ನಿರ್ಮಾಣ ಕಾರ್ಯ ಸಂಪೂರ್ಣ ಸ್ಥಗಿತ ಗೊಂಡರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾರ್ಯಗಳಿಗೂ ಕೂಲಿ ಕಾರ್ಮಿಕರ ಕೊರತೆ ಎದ್ದು ಕಾಣುತ್ತಿತ್ತು. ಈಗ ಯಥಾಸ್ಥಿತಿ ಕಡೆಗೆ ತಿರುಗುತ್ತಿದೆ.
ಮೋಡಕವಿದ ವಾತಾವರಣ ಸದ್ಯ ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದ್ದು ಬಿಟ್ಟರೆ ಇದು ವರೆಗೂ ಮಳೆಯ ದರ್ಶನ
ವಾಗಿಲ್ಲ. ಆದರೆ ಕಳೆದ ಎರಡು, 3 ದಿನಗಳಿಂದ ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಇದ್ದು ಬಿಸಿಲಿನ ಅರ್ಭಟ ತಗ್ಗಿ ಮಳೆ ಬರುವ ಮನ್ಸೂಚನೆ ಇದೆ. ಜೂನ್, ಜುಲೈ ವೇಳೆಗೆ ವಾಡಿಕೆಯಂತೆ ಜಿಲ್ಲಾ ದ್ಯಂತ ಬಿತ್ತನೆ ಕಾರ್ಯ ಮುಗಿಯಲಿದ್ದು, ಈಗಾಗಲೇ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಬಿತ್ತನೆ ಕಾರ್ಯಕ್ಕೆ ಸಜಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.