ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Team Udayavani, Dec 22, 2017, 1:54 PM IST

airtel.jpg

ಬಾಗೇಪಲ್ಲಿ: ಗ್ರಾಹಕರ ಅಡುಗೆ ಅನಿಲ ಸಬ್ಸಿಡಿ ಹಣವನ್ನು ಏರ್‌ಟೆಲ್‌ ಕಂಪನಿ ಯವರು ತಮ್ಮ ಏರ್‌ಟೆಲ್‌ ಬ್ಯಾಂಕಿಗೆ ಜಮಾವಣೆ ಮಾಡಿಕೊಂಡು, ಗ್ರಾಹಕರಿಗೆ ವಂಚಿಸುತ್ತಿದ್ದಾರೆ. ಮೊದಲಿನಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಜಮಾವಣೆ ಮಾಡಬೇಕು ಎಂದು ಆಗ್ರಹಿಸಿ ಕನ್ನಡ ಸೇನೆ ಕಾರ್ಯಕರ್ತರು ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಕನ್ನಡ ಸೇನೆ ತಾಲೂಕು ಘಟಕದ ಅಧ್ಯಕ್ಷ ಬಿ.ಎ.ಬಾಬಾಜಾನ್‌ ಮಾತನಾಡಿ, ಗ್ರಾಹಕರ ಅಡುಗೆ ಅನಿಲ ಸಹಾಯಧನ ಸುಮಾರು ತಿಂಗಳಿನಿಂದ ಗ್ರಾಹಕರ ಬ್ಯಾಂಕ್‌ಗಳ ಖಾತೆಗೆ ಬರುತ್ತಿಲ್ಲ. ಈ ಕುರಿತು ಗ್ರಾಹಕರು ಬ್ಯಾಂಕ್‌ನಲ್ಲಿ ವಿಚಾರಿಸಿದರೆ, ನೀವು ಆಧಾರ್‌ ಕಾರ್ಡ್‌ ಸಂಖ್ಯೆ ಸಂಯೋಜನೆ ಮಾಡಿಸಿಲ್ಲ ಎಂದು ಹೇಳುತ್ತಾರೆ. ಅಡುಗೆ ಅನಿಲ ಏಜೆನ್ಸಿಯವರನ್ನು ಕೇಳಿದರೆ ನಾವು ಸಹಾಯಧನ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಬ್ಯಾಂಕ್‌ ಖಾತೆಗಳಲ್ಲಿ ಮಾತ್ರ ಅಡುಗೆ ಅನಿಲ ಸಬ್ಸಿಡಿ ಹಣ ಮಾತ್ರ ಬಂದಿಲ್ಲ ಎಂದು ದೂರಿದರು.

ಅಡುಗೆ ಅನಿಲದ ಸಬ್ಸಿಡಿ ಹಣವನ್ನು ಏರ್‌ಟೆಲ್‌ ಪೆಮೆಂಟ್‌ ಬ್ಯಾಂಕ್‌ ಪಡೆದಿದೆ. ಕೇವಲ 10 ರೂ. ಕಮಿಷನ್‌ಗಾಗಿ ಗ್ರಾಹಕರಿಗೆ ಮಾಹಿತಿ ತಿಳಿಸದೇ ಏರ್‌ಟೆಲ್‌ ಪೆಮೆಂಟ್‌ ಖಾತೆಗೆ ಜಮಾಯಿಸಿಕೊಂಡು ಜನಸಾಮಾನ್ಯರ ಬಡ ಕುಟುಂಬಗಳಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು. ನೇರವಾಗಿ ಅಡುಗೆ ಅನಿಲದ ಸಬ್ಸಿಡಿ ಹಣವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಗ್ರಾಹಕರ ಖಾತೆಗೆ ವರ್ಗಾಯಿಸಬೇಕು. ಕೂಡಲೇ ಏರ್‌ಟೆಲ್‌ ಪೆಮೆಂಟ್‌ ಖಾತೆಗೆ ರದ್ದುಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಎಂದರು.

ಏರ್‌ಟೆಲ್‌ ಕಂಪನಿ ಹಿರಿಯ ಅಧಿಕಾರಿಗಳು ಸಮಸ್ಯೆ ಇತ್ಯರ್ಥ ಮಾಡದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ಕನ್ನಡ ಸೇನೆ ಕಾರ್ಯಕರ್ತರು, ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು. ಇದೇ ವೇಳೆ ತಹಶೀಲ್ದಾರ್‌ ಮೂಲಕ ಪೆಟ್ರೋಲಿಯಂ ಸಚಿವರ ಧರ್ಮೆಂದ್ರ ಪ್ರಧಾನ್‌ಗೆ‌ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್‌, ಮುಖಂಡರಾದ ಜಿ.ವಿ.ಪ್ರದೀಪ್‌ ಕುಮಾರ್‌, ವೆಂಕಟಶಿವಪ್ಪ, ಸಮೀವುಲ್ಲಾ, ಷೇಕ್‌ ಹಿದಾಯುತುಲ್ಲಾ, ರಾಮು, ಅಸ್ಲಾಂ ಬಾಷ, ನರೇಶ, ಮುದ್ದುಕೃಷ್ಣ, ಷμàವಲ್ಲಾ, ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.