ಅಪರಾಧ ಪತ್ತೆಗೆ ಸದಾ ಉತ್ಸಾಹ ಇರಲಿ


Team Udayavani, Jan 18, 2020, 3:00 AM IST

aparadha

ಚಿಕ್ಕಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಹಾಗೂ ಅಪರಾಧ ಪತ್ತೆಗೆ ಪೊಲೀಸರಲ್ಲಿ ಸದಾ ಹುರುಪು ಇರಬೇಕಾದರೆ ದೈಹಿಕವಾಗಿ ಸದೃಢವಾಗಿರಬೇಕು. ನಿರಂತರವಾಗಿ ದೈಹಿಕ ಚಟುವಟಿಕೆಗಳು ಇಲ್ಲದಿದ್ದರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ ಎಂದು ಕೇಂದ್ರ ವಲಯದ ಪೊಲೀಸ್‌ ಮಹಾ ನಿರೀಕ್ಷಕ ಕೆ.ವಿ.ಶರತ್‌ ಚಂದ್ರ ತಿಳಿಸಿದರು.

ನಗರದ ಹೊರ ವಲಯದ ಅಣಕನೂರು ಸಮೀಪದ ಜಿಲ್ಲಾ ಮೀಸಲು ಪಡೆಯ ಕವಾಯಿತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್‌ ಇಲಾಖೆ 2019ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪೊಲೀಸರ ಕೆಲಸ ಕಠಿಣವಾದದ್ದು. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಮಾತ್ರ ಕಾರ್ಯನಿರ್ವಹಿಸಲು ಸಾಧ್ಯ ಎಂದರು.

ಕ್ರೀಡಾಭ್ಯಾಸ ಮುಖ್ಯ: ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಮಾನಸಿಕ ಹಾಗೂ ದೈಹಿಕ ಒತ್ತಡ ಹೆಚ್ಚಿರುತ್ತದೆ. ಪೊಲೀಸರು ಮಾನಸಿಕ ಹಾಗೂ ದೈಹಿಕವಾಗಿ ಒತ್ತಡ ನಿವಾರಣೆ ಆಗಬೇಕಾದರೆ ಕ್ರೀಡೆಗಳು ಮುಖ್ಯ. ಸಂಪೂರ್ಣ ಕ್ಷಮತೆ ಇದ್ದರೆ ಮಾತ್ರ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.

ನವ ಚೈತನ್ಯ: ಜಿಲ್ಲೆಯಲ್ಲಿ ಈ ವರ್ಷ ಅನೇಕ ವಿವಿಧ ರೀತಿಯ ಪ್ರಕರಣಗಳನ್ನು ಭೇದಿಸಿ ಮುಂದೆ ಆಗುವಂತಹ ಪ್ರಕರಣಗಳನ್ನು ಸಹ ತಡೆದಿದ್ದು, ಇದೇ ರೀತಿ ಉತ್ಸಾಹದಿಂದ ಕಾರ್ಯ ನಿರ್ವಹಿಸಬೇಕೆಂದರು. ಕ್ರೀಡಾ ಸ್ಫೂರ್ತಿಯಿಂದ ಪ್ರತಿಯೊಬ್ಬರಲ್ಲಿ ನವ ಚೈತನ್ಯ ಮೂಡುತ್ತದೆ. ಪ್ರತಿ ದಿನ ಕ್ರೀಡಾ ಚಟುವಟಿಕೆಗಳನ್ನು ಅಭ್ಯಾಸ ಮಾಡುವುದರಿಂದ ಕುಟುಂಬದ ಮೇಲೆಯು ಪರಿಣಾಮ ಬೀರಿ ಮಕ್ಕಳು ಕ್ರೀಡಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

ಕಳೆದ ವರ್ಷವೇ ಕ್ರೀಡಾಕೂಟ ನಡೆಯಬೇಕಿತ್ತು. ಆದರೆ ಅನೇಕ ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಂದಾಗಿ ತಡವಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ಸಂಸತ್‌ ಚುನಾವಣೆ, ಇತ್ತೀಚೆಗೆ ನಡೆದ ಉಪ ಚುನಾವಣೆ ಯಶಸ್ವಿಯಾಗಿ ನಡೆಸಿದ್ದಕ್ಕೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳಿಗೆ, ಸಿಬ್ಬಂದಿಗೆ ವಿಶೇಷವಾಗಿ ಕೇಂದ್ರ ವಲಯದ ಪೊಲೀಸ್‌ ಮಹಾ ನಿರೀಕ್ಷಕರಾದ ಕೆ.ವಿ.ಶರತ್‌ಚಂದ್ರ ಅಭಿನಂದನೆ ಸಲ್ಲಿಸಿದರು.

ಕ್ರೀಡಾಕೂಟವೇ ಹಬ್ಬ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ ಮಾತನಾಡಿ, ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಯಾವುದೇ ಹಬ್ಬ, ಹರಿದಿನಗಳು ಬಂದರೂ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿಂದ ಹಬ್ಬಗಳಲ್ಲಿ ಕುಟುಂಬಸ್ಥರ ಜೊತೆಗೆ ಪಾಲ್ಗೊಳ್ಳಲು ಸಾಧ್ಯವಿಲ್ಲ. ಆದರೆ ಪ್ರತಿ ವರ್ಷ ನಡೆಯುವ ಕ್ರೀಡಾಕೂಟವೇ ಪೊಲೀಸರಿಗೆ ಹಬ್ಬವಾಗಿರುವುದರಿಂದ ಸಿಬ್ಬಂದಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಬೇಕೆಂದರು.

ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್‌, ಚಿಂತಾಮಣಿ ಉಪ ವಿಭಾಗದ ಡಿವೈಎಸ್‌ಪಿ ಶ್ರೀನಿವಾಸ್‌, ಸಿಪಿಐಗಳಾದ ಹೆಚ್‌.ವಿ.ಸುದರ್ಶನ್‌, ಕೆ.ಎಂ.ಶ್ರೀನಿವಾಸಪ್ಪ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿಗಳಾದ ಕೃಷ್ಣಾರೆಡ್ಡಿ, ನಾಗೇಂದ್ರ ಪ್ರಸಾದ್‌ ಸೇರಿದಂತೆ ಜಿಲ್ಲೆಯ ಎಲ್ಲಾ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಿ: ಜಿಲ್ಲೆಯಲ್ಲಿ ಯಾರಾದರೂ ಹೊಸದಾಗಿ ಮನೆ ಬಾಡಿಗೆ ಪಡೆಯಲು ಬಂದಾಗ ಮನೆ ಮಾಲೀಕರು ಸೂಕ್ತ ಎಚ್ಚರಿಕೆ ವಹಿಸಿ ಅವರ ಚಲನವಲನಗಳನ್ನು ಗಮನಿಸಬೇಕೆಂದು ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್‌ ಚಂದ್ರ ತಿಳಿಸಿದರು. ಕ್ರೀಡಾಕೂಟ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮಾಲೀಕರು ಮನೆಗಳನ್ನು ಬಾಡಿಗೆ ಕೊಟ್ಟು ಬರುವ ಬಾಡಿಗೆ ಪಡೆದುಕೊಂಡು ಸುಮ್ಮನೆ ಇದ್ದರೆ ಸಾಲದು, ಮನೆ ಪಡೆದವರು ದಿನ ಎಷ್ಟು ಗಂಟೆಗೆ ಹೋಗುತ್ತಾರೆ,

ಸಂಜೆ ಎಷ್ಟು ಗಂಟೆಗೆ ಬರುತ್ತಾರೆ, ಏನು ಕೆಲಸ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು. ಅನೇಕ ಕಡೆ ಭಯೋತ್ಪಾದಕರು ಮನೆಯಿಂದ ಹೊರಗೆ ಬರುವುದಿಲ್ಲ. ಇಡೀ ದಿವಸ ಮನೆಯೊಳಗೆ ಇರುತ್ತಾರೆ. ಮನೆಯವರು ಅವರ ಚಲನವಲನಗಳ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಮನೆ ಮಾಲೀಕರು ಜಾಗ್ರತೆ ತಪ್ಪಿದರೆ ಭಯೋತ್ಪಾದನಾ ಕೃತ್ಯಗಳು ಸಂಭವಿಸುವ ಸಾಧ್ಯತೆ ಇರುತ್ತವೆ ಎಂದು ಐಜಿಪಿ ಎಚ್ಚರಿಸಿದರು.

ಅಪಘಾತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಐಜಿಪಿ ಕೆ.ವಿ.ಶರತ್‌ ಚಂದ್ರ, ಜಿಲ್ಲೆಯ ಮುರಗಮಲ್ಲದಲ್ಲಿ ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಬಗ್ಗೆ ಉಲ್ಲೇಖೀಸಿ ಅಧಿಕಾರಿಗಳು, ಸಾರಿಗೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಮತ್ತು ಹೆದ್ದಾರಿ ಅಧಿಕಾರಿಗಳ ಸಹಭಾಗಿತ್ವದಲ್ಲಿ ಸುಪ್ರೀಂಕೋರ್ಟ್‌ ಆದೇಶಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿ, ಸಿಬ್ಬಂದಿಗೆ ಸೂಚಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.