10ಕ್ಕೆ ಜಿಲ್ಲಾದ್ಯಂತ ಅಂಗನವಾಡಿ ನೌಕರರ ಮುಷ್ಕರ
Team Udayavani, Dec 6, 2019, 2:43 PM IST
ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಹಾಗೂ ನೌಕರರ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸಿಐಟಿಯು ನೇತೃತ್ವದಲ್ಲಿ ಡಿ.10ರಿಂದ ಅನಿರ್ದಿಷ್ಟ ಮುಷ್ಕರ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾದ್ಯಕ್ಷೆ ಗಂಜಿಗುಂಟೆ ಲಕ್ಷ್ಮೀದೇವಮ್ಮ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಈ ಕುರಿತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಈ ನಿಟ್ಟಿನಲ್ಲಿ ನೌಕರರ ಸಂಘ, ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಒತ್ತಾಯಿಸಿ, ರಾಜ್ಯದ 30 ಜಿಲ್ಲೆಗಳನ್ನೊಳಗೊಂಡ 6 ರಾಜ್ಯ ಮಟ್ಟದ ಅಂಗನವಾಡಿ ನೌಕರರ ಜಾಥಾ ನಡೆಸಲಾಗುತ್ತಿದೆ ಎಂದರು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಹಾಗೂ ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಕೂಡಲೇ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಿ ತಕ್ಷಣ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದನ್ನು ನಿಲ್ಲಿಸಿ, ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಬೇಕೆಂದು ಆಗ್ರಹಿಸಿದರು.
ಅಂಗನವಾಡಿ ನೌಕರರು ಕನಿಷ್ಠ ಗೌರವ ಧನ ಪಡೆದು ಸಮಾಜ ಬದಲಾವಣೆ ಬಯಸುತ್ತಿದೆ. ಆದರೆ, ಅಂಗನವಾಡಿ ಕೇಂದ್ರಗಳು ಮಾತ್ರ ಹಳೆ ರೀತಿಯಲ್ಲೇ ಮುಂದುವರಿದಿವೆ. ಮೂರುವರೆ ವರ್ಷ ಮೇಲ್ಪಟ್ಟ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಿರುವುದರಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಹಂತಕ್ಕೆ ತಲುಪಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾ ಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯರನ್ನು ಕೊಡ ಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ ಎಕೆಜಿ, ಯುಕೆಜಿ ಆರಂಭಿಸದಂತೆ ಇಲಾಖೆಯಿಂದ ತಡೆಯೊಡ್ಡಬೇಕು. ಐಸಿಡಿಎಸ್‌ನ 6 ಉದ್ದೇಶಗಳಿಗೆ ಬಿಟ್ಟು ಉಳಿದ ಕೆಲಸಗಳನ್ನು ಅಂಗನವಾಡಿ ನೌಕರರಿಂದ ಮಾಡಿಸಬಾರದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಶಾಲೆಗಳಲ್ಲಿ ಈಗ ಆರಂಭವಾಗಿರುವ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಗೆ ವರ್ಗಾಯಿಸ ಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಖಾಲಿ ಇರುವ ಹುದ್ದೆ ತುಂಬಬೇಕು. ಸೇವಾ ನಿಯಮಾವಳಿ ರಚಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮ, ತಾಲೂಕು ಅಧ್ಯಕ್ಷೆ ಸುಜಾತಾ, ಕಾರ್ಯದರ್ಶಿ ಮುನಿರತ್ನ, ಗೌರಿಬಿದನೂರು ತಾಲೂಕು ಅಧ್ಯಕ್ಷೆ ಪದ್ಮಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.