ಯೋಜನೇತರ ಕಾರ್ಯಗಳಿಗೆ ಅಂಗನವಾಡಿ ನೌಕರರನ್ನು ಬಳಸುವಂತಿಲ್ಲ
Team Udayavani, Oct 24, 2018, 6:00 AM IST
ಚಿಕ್ಕಬಳ್ಳಾಪುರ: ಇನ್ನು ಮುಂದೆ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಶಿಶು ಅಭಿವೃದ್ಧಿ ಯೋಜನೇತರ ಕಾರ್ಯಗಳಿಗೆ ಬಳಸದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶ
ಹೊರಡಿಸಿದ್ದಾರೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೇಂದ್ರ ಪುರಸ್ಕೃತ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ 6 ಸೇವೆಗಳನ್ನು ಫಲಾನುಭವಿಗಳಿಗೆ ಒದಗಿಸುವುದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮುಖ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ ಇವರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸ ಅಥವಾ ಇತರ ಯಾವುದೇ ಕೆಲಸಗಳನ್ನು
ವಹಿಸುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಇದರಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಮೂಲ ಸೇವೆಗಳನ್ನು ಫಲಾನುಭವಿಗಳಿಗೆ ಒದಗಿಸಲು ಅಡಚಣೆಯಾಗುತ್ತದೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸಗಳನ್ನು ನಿಯೋಜಿಸದಿರಲು ಕೇಂದ್ರ ಸರ್ಕಾರ ಸೂಚಿಸಿದೆ. ಇದರನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಹ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ, ಇನ್ನು ಮುಂದೆ ರಾಜ್ಯದ ಅಂಗನವಾಡಿ
ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರ ರನ್ನು ಶಿಶು ಅಭಿವೃದ್ಧಿ ಯೋಜನೇತರ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಇದರ ಬದಲಾಗಿ, ಆ ಪ್ರದೇಶದಲ್ಲಿಯೇ ವಾಸವಿರುವ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆಯನ್ನು ಪಡೆಯಬಹುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.
ಇತ್ತೀಚೆಗೆ ಆರೋಗ್ಯ ಇಲಾಖೆ ನಡೆಸುತ್ತಿರುವ ಕುಷ್ಠರೋಗ ಪತ್ತೆ ಕಾರ್ಯದ ಜತೆಗೆ ವಿಧವೆಯರ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತರನ್ನು ಬಳಸಿ ಕೊಳ್ಳುತ್ತಿರುವ ಕುರಿತು ಅಂಗನವಾಡಿ ನೌಕರರ ಸಂಘಟನೆ ಗಳಿಂದ ತೀವ್ರ ಆಕ್ಷೇಪಣೆ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.