ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ನಡೆದು ಆರು ಮಂದಿ ಸಾವು, ಓರ್ವನಿಗೆ ಗಾಯ!
Team Udayavani, Feb 23, 2021, 8:21 AM IST
ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಸ್ಪೋಟದ ನೆನಪು ಜನಮಾನಸದಿಂದ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟು, ಓರ್ವ ಗಾಯಗೊಂಡಿದ್ದಾರೆ.
ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಪೆಟ್ರೋಲ್ ಶತಕದಾಟ : ಜನರ ಬದುಕಿನೊಂದಿಗೆ ಸರಕಾರದ ಚೆಲ್ಲಾಟ
ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಸುಮಾರು 10 ಕಿ.ಮೀಟರ್ ದೂರದವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಛಿದ್ರವಾಗಿ ಬಿದ್ದಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಆಗಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮದುವೆಗೆ ಕಣ್ಗಾವಲು : 2ನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸರಕಾರದಿಂದ ಕ್ರಮ
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.