ಎಪಿಎಂಸಿ ಮಾರುಕಟ್ಟೆ ಬಲವರ್ಧನೆ ರೈತ ಸಂಘ ಆಗ್ರಹ

Team Udayavani, Jan 7, 2020, 1:24 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ವಿಸ್ತರಿಸಿ ಬಲಪಡಿಸದೇ ಹೋದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಿ.ನಾರಾಯಣಸ್ವಾಮಿ ಎಚ್ಚರಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸಂಘಟನೆಯಾಗೂ ಶಿಡ್ಲಘಟ್ಟ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರು ಶೋಷಣೆ ಮುಂದುವರೆದಿದೆ. ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇದುವರೆಗೂ ಎಪಿಎಂಸಿ ಮಾರುಕಟ್ಟೆ ಇಲ್ಲ. 30 ಎಕೆರೆ ಕೇಳಿದ್ದರೆ ಸರ್ಕಾರ ಕೇವಲ 15 ಎಕೆರೆಯಷ್ಟು ಭೂಮಿ ಮಂಜೂರು ಮಾಡಿದೆ. ಚಿಕ್ಕಬಳ್ಳಾಪುರದಲ್ಲಿ ಮಾರುಕಟ್ಟೆ ವಿಸ್ತರಣೆ ಜೊತೆಗೆ ಬಲವರ್ಧನೆ ಆಗಬೇಕು. ಎಪಿಎಂಸಿ ಮಾರುಕಟ್ಟೆಗಳಲ್ಲಿ ತೂಕ, ದಲ್ಲಾಳಿ ವಿಚಾರದಲ್ಲಿ ರೈತರಿಗೆ ಸಾಕಷ್ಟು ಮೋಸ ಆಗುತ್ತಿದೆ. ಈ ಬಗ್ಗೆ ಸಂಬಂದಪಟ್ಟವರು ಕ್ರಮ ವಹಿಸಬೇಕು. ರೈತರಿಗೆ ಸೂಕ್ತವಾದ ಮಾರುಕಟ್ಟೆ ಒದಗಿಸಿ, ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ನಾರಾಯಣಸ್ವಾಮಿ, ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೈತರ ಹೋರಾಟಗಳನ್ನು ರೂಪಿಸಲಾಗುವುದೆಂದರು.

ಜಿಲ್ಲಾಧ್ಯಕ್ಷರ ನೇಮಕ: ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯ ಬಸವರಾಜ್‌ರನ್ನು ನೇಮಿಸಲಾಗಿದೆಯೆಂದು ಸಂಘಟನೆ ರಾಜ್ಯಾಧ್ಯಕ್ಷರಾದ ಬಾಗೇಪಲ್ಲಿ ಬಿ.ನಾರಾಯಣಸ್ವಾಮಿ ಘೋಷಿಸಿದರು. ಅದೇ ರೀತಿ ಶಿಡ್ಲಘಟ್ಟ ತಾಲೂಕು ಅಧ್ಯಕ್ಷರಾಗಿ ಟಿ.ಎಂ. ಮಂಜುನಾಥ, ಉಪಾಧ್ಯಕ್ಷರಾಗಿ ಭಾಗ್ಯರೇಖಾ, ಸಂಘಟನಾ ಸಂಚಾಲಕರಾಗಿ ಎಂ.ಲಕ್ಷ್ಮೀ ನಾರಾಯಣ, ಎಂ. ವೆಂಕಟಸ್ವಾಮಿಗೌಡ, ಶಿವಣ್ಣ, ಗೌರವ ಕಾರ್ಯದರ್ಶಿಗಳಾಗಿ ಎನ್‌. ಮುನಿಕದಿ ರಪ್ಪ, ಸಹ ಕಾರ್ಯದರ್ಶಿ ಮಂಜುನಾಥ, ಎನ್‌. ನಾಗರಾಜ್‌, ಎಂ.ಶ್ರೀನಿವಾಸ್, ನಾಗರಾಜ್‌ ಆಯ್ಕೆಗೊಂಡಿದ್ದಾರೆ ಎಂದರು.

ಬಾಗೇಪಲ್ಲಿ ರೈತ ಮುಖಂಡರಾದ ಶ್ರೀನಿವಾಸ್‌, ವೆಂಕಟರೆಡ್ಡಿ, ನಾರಾಯಣರೆಡ್ಡಿ, ಬೀಚಗಾನಹಳ್ಳಿ ಕೃಷ್ಣಪ್ಪ, ಶ್ರೀನಿವಾಸ್‌, ನಾರಾಯಣಸ್ವಾಮಿ, ಗೋವಿಂದಪ್ಪ, ಆಂಜನೇಯರೆಡ್ಡಿ, ಲಿಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.