ವೃದ್ಧ ದಂಪತಿಗಳ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
Team Udayavani, Mar 29, 2022, 1:47 PM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ವೃದ್ಧ ದಂಪತಿಗಳ ಪ್ರಕರಣವನ್ನು ಭೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಗರದ ಇಬ್ಬರು ಅಪ್ರಾಪ್ತರು ಸಹಿತ ಫೈಝ್ (20), ಬಂಧಿತ ಆರೋಪಿಗಳು.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿಡ್ಲಘಟ್ಟ ನಗರದ ಕಾಮಾಟಿಗೆರೆ ಪೇಟೆಯಲ್ಲಿ ಬಟ್ಟೆಯ ವ್ಯಾಪಾರಿ ಶ್ರೀನಿವಾಸ್, ಆತನ ಪತ್ನಿ ಪದ್ಮಾವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಶಿಡ್ಲಘಟ್ಟ ನಗರ ಪೊಲೀಸರು ವಿಶೇಷವಾಗಿ ತನಿಖೆ ನಡೆಸಿ ಬಂಧಿಸಲಾಗಿದೆ ಎಂದರು.
ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಪೇದೆಗಳಾದ ಶ್ರೀಹರಿ,ಹರೀಶ್ ಅವರ ವಿಶೇಷ ಶ್ರಮದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು ತಂಡಕ್ಕೆ ಬಹುಮಾನವನ್ನು ನೀಡುವುದಾಗಿ ಜಿಲ್ಲಾ ಎಸ್ಪಿ ಜಿಕೆ ಮಿಥುನ್ ಕುಮಾರ್ ಘೋಷಿಸಿದರು.
ಇದನ್ನೂ ಓದಿ:ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಗೆ ಹಲ್ಲೆ, ಕಿರುಕುಳ
ಬಂಧಿತ ಆರೋಪಿಗಳು ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಹಾಗೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡ, ಸಬ್ ಇನ್ಸ್ಪೆಕ್ಟರ್ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.