ಲಂಚಕ್ಕೆ ಬೇಡಿಕೆಯಿಟ್ಟರೆ ಎಸಿಬಿಗೆ ತಿಳಿಸಿ
Team Udayavani, Feb 13, 2019, 7:28 AM IST
ಸೋಮೇನಹಳ್ಳಿ(ಗುಡಿಬಂಡೆ ತಾ.): ಸಾರ್ವಜನಿಕರ ಕೆಲಸಗಳನ್ನು ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗದೆ ಕಾನೂನು ಬದ್ಧವಾಗಿ ಕೆಲಸಗಳನ್ನು ಮಾಡಕೊಡಬೇಕೆಂದು ಮತ್ತು ಜನರು ಕೆಲಸ ಕಾರ್ಯಗಳಿಗೆ ಕಚೇರಿಗಳಿಗೆ ಅಲೆದಾಡದಂತೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸಿಬಿ ಪೊಲೀಸ್ ಉಪಾಧೀಕ್ಷಕ ವೆಂಕಟೇಶ್ ನಾಯ್ಡು ಸೂಚನೆ ನೀಡಿದರು.
ಸೋಮೇನಹಳ್ಳಿ ಶ್ರೀ ಗಂಗಾಭವಾನಿ ದೇವಾಲಯದ ಆವರಣದಲ್ಲಿ ಭ್ರಷ್ಟಾಚಾರ ನಿಗ್ರಹದಳದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿ, ಯಾವುದೇ ಕಚೇರಿಗಳಲ್ಲಿ ತಮ್ಮ ಕೆಲಸಗಳು ಸಮರ್ಪಕವಾಗಿ ಆಗದಿದ್ದರೆ, ಲಂಚಕ್ಕೆ ಬೇಡಿಕೆಯಿಟದಟರೆ ನೇರವಾಗಿ ಎಸಿಬಿಗೆ ಅರ್ಜಿ ನೀಡಬಹುದಾಗಿದೆ.
ಕೆಲವರು ಸಾರ್ವಜನಿಕ ಸಭೆಯಲ್ಲಿ ಅರ್ಜಿ ನೀಡಲು ಹಿಂಜರಿಕೆಯಿದ್ದರೆ ನಮ್ಮ ಕಚೇರಿಗೆ ಬಂದು ಅರ್ಜಿ ಸಲ್ಲಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಸರ್ಕಾರದಿಂದ ಅನೇಕ ಹೊಸ ಹೊಸ ಯೋಜನೆಗಳು ಬರುತ್ತಿದೆ. ಜನರಿಗೆ ಮಾಹಿತಿ ಕೊರತೆಯಿಂದಾಗಿ ತಿಳಿಯದೆ ಆ ಯೋಜನೆಗಳು ಸದ್ಬಳಕೆ ಆಗುತ್ತಿಲ್ಲ.
ಇಲಾಖೆಯ ಅಧಿಕಾರಿಗಳು ಯಾವುದೇ ಯೋಜನೆಗಳು ಬಂದಾಗ ಕಚೇರಿ ಫಲಕದಲ್ಲಿ ನಮೂದಿಸುವುದು ಹಾಗೂ ಆಯಾ ಗ್ರಾಮಗಳಲ್ಲಿ ಜನರಿಗೆ ತಿಳಿಯುವಂತಹ ಮಾಹಿತಿ ನೀಡಿದಾಗ ಮಾತ್ರ ಜನರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.