ಕಲ್ಲು ಕ್ವಾರಿ ಮೇಲೆ ದಾಳಿ: ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

Team Udayavani, Jul 10, 2019, 3:00 AM IST

kallu-kwari

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಮಾಡಪ್ಪಲ್ಲಿ ಗ್ರಾಮದಲ್ಲಿ ನಡೆಯುತ್ತಿದ್ದ ಕಲ್ಲು ಕ್ವಾರಿಗಳ ಮೇಲೆ ಮಂಗಳವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಮೂಲದ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ: ಮಾಡಪ್ಪಲ್ಲಿ ಸುತ್ತಮುತ್ತ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಲ್ಲಿ ಮಾಲೀಕರು ಬಾಲ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಬಳಸಿಕೊಳ್ಳುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುಸ್ಮಾನ್‌ಸಾಬ್‌ ನೇತೃತ್ವದ ತಂಡ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಪ್ರಾಪ್ತರಾದ ಕೊಂಡಪ್ಪ, ರಂಗನಾಥ ಎಂಬುವರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ.

ಸ್ಫೋಟಕ ಮಾಹಿತಿ: ದಾಳಿಯ ವೇಳೆ ಬಾಲ ಕಾರ್ಮಿಕರು ಕಲ್ಲುಬಂಡೆ ಸೀಳುವ ಕಾರ್ಯದಲ್ಲಿ ತೊಡಗಿದ್ದು, ಇಬ್ಬರನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಬಾಲಕರು ಮಾಲೀಕನ ವಿರುದ್ಧ ಹಲವು ಸ್ಫೋಟಕ ಮಾಹಿತಿಗಳನ್ನು ನೀಡಿದ್ದಾರೆಂದು ತಿಳಿದು ಬಂದಿದೆ. ಮಾಲೀಕರು ಅಕ್ರಮವಾಗಿ ಅವರನ್ನು ಕೂಡಿ ಹಾಕಿದ್ದು ಕಲ್ಲು ಗಣಿಗಾರಿಕೆಯಲ್ಲಿ ದುಡಿಸಿಕೊಳ್ಳುತ್ತಿದ್ದರೆಂದು ತಿಳಿದು ಬಂದಿದೆ.

ಬಾಲಕಾರ್ಮಿಕರು ಎಸ್ಕೇಪ್‌: ಹಲವು ವರ್ಷಗಳಿಂದ ಬಾಲ ಕಾರ್ಮಿಕರು ಕಲ್ಲು ಕ್ವಾರಿಗಳಲ್ಲಿ ದುಡಿಯುತ್ತಿದ್ದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಏನು ಕ್ರಮ ಕೈಗೊಂಡಿಲ್ಲದ ಕಾರಣ ಮಾಡಪ್ಪಲ್ಲಿ ಗ್ರಾಮದ ಕೆಲ ಪ್ರಜ್ಞಾವಂತ ಯುವಕರು ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಆದರೆ ಅಧಿಕಾರಿಗಳು ಬರುವ ವೇಳೆಗೆ ಬಹಳಷ್ಟು ಬಾಲ ಕಾರ್ಮಿಕರು ಸ್ಥಳದಿಂದ ಎಸ್ಕೇಪ್‌ ಆಗಿದ್ದರೆಂದು ಅಧಿಕಾರಿಗಳೇ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ. ಪ್ರತಿ ದಿನ ಬೆಳಗ್ಗೆ 7 ಗಂಟೆಗೆ ಕೆಲಸಕ್ಕೆ ಬರುವ ಬಾಲ ಕಾರ್ಮಿಕರು 10, 11 ಗಂಟೆಗೆಲ್ಲಾ ವಾಪಸ್ಸು ಹೋಗುತ್ತಾರಂತೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು. ಮಾಲೀಕರು ಆಂಧ್ರದಿಂದ ಮಕ್ಕಳನ್ನು ಕರೆಸಿ ಕೆಲಸ ಮಾಡಿಸುತ್ತಿರುವುದು ಸ್ಪಷ್ಟವಾಗಿದೆ. ಇಲಾಖೆ ಕೂಡ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಸಾಂತ್ವನ ಕೇಂದ್ರಕ್ಕೆ ಮಕ್ಕಳು: ರಕ್ಷಿಸಿರುವ ಮಕ್ಕಳನ್ನು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸುತ್ತಿರುವ ಸಾಂತ್ವನ ಕೇಂದ್ರದಲ್ಲಿ ಬಿಟ್ಟಿದ್ದಾರೆ. ಬಾಗೇಪಲ್ಲಿ ಕಾರ್ಮಿಕ ಇಲಾಖೆಯಲ್ಲಿ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾರ್ಯಾಚರಣೆಯಲ್ಲಿ ಬಾಗೇಪಲ್ಲಿ ತಾಲೂಕಿನ ಕಾರ್ಮಿಕ ಇಲಾಖೆ ನಿರೀಕ್ಷಕ ಸುರೇಂದ್ರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾನೂನು ಪರಿವೀಕ್ಷಕ ರಾಮೇಗೌಡ, ಬಾಲ ಕಾರ್ಮಿಕ ಯೋಜನಾ ಸಂಘದ ರಮೇಶ್‌ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರು ಭಾಗವಹಿಸಿದ್ದರು.

ಅಕ್ರಮ ಕಲ್ಲು ಗಣಿಗಾರಿಕೆಗೆ ಕುಖ್ಯಾತಿ: ಬಾಗೇಪಲ್ಲಿ ತಾಲೂಕು ತೀರಾ ಹಿಂದುಳಿದಿದ್ದು, ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಭೂತ ತಾಲೂಕಿಗೆ ಅಂಟಿಕೊಂಡಿದೆ. ಬೆಟ್ಟಗುಡ್ಡಗಳಿಂದ ಕೂಡಿರುವ ಬಾಗೇಪಲ್ಲಿ ತಾಲೂಕಿನ ಮೇಲೆ ಕೆಲ ಬೆಂಗಳೂರಿನ ಉದ್ದಿಮೆಗಳ ಕಣ್ಣು ಬಿದ್ದು ಅಕ್ರಮ ಗಣಿಗಾರಿಕೆಗೆ ತುತ್ತಾಗಿದೆ.

ಹೀಗಾಗಿ ಬಾಗೇಪಲ್ಲಿ ತಾಲೂಕಿನಲ್ಲಿರುವ ಬೆಟ್ಟಗುಡ್ಡಗಳು ಕಣ್ಣು ಮುಂದೆಯೇ ಕರಗ ತೊಡಗಿದ್ದು, ಇದಕ್ಕೆ ಆಂಧ್ರಪ್ರದೇಶದಿಂದ ಬಾಲ ಕಾರ್ಮಿಕರನ್ನು ಮಾಲೀಕರು ಕರೆ ತಂದು ದುಡಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಕಾರ್ಮಿಕ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ಸುಳಿವು ಅರಿತು ಕೆಲ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಕರೆಸಿಲ್ಲ ಎನ್ನುವ ಮಾತು ಸಹ ಕೇಳಿ ಬಂದಿದೆ.

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾಡಪ್ಪಲ್ಲಿ ಗ್ರಾಮದ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಮೂಲದ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. ಮಾಲೀಕರ ವಿರುದ್ಧ ಬಾಗೇಪಲ್ಲಿ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಲಾಗಿದೆ. ಇಲಾಖೆ ಕೂಡ ಕಾನೂನು ಕ್ರಮ ಕೈಗೊಳ್ಳಲಿದೆ. ರಕ್ಷಣೆಯಾದ ಮಕ್ಕಳನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು ಪೋಷಕರನ್ನು ಕರೆದು ಅವರಿಗೆ ಬುದ್ಧಿವಾದ ಹೇಳುತ್ತೇವೆ.
-ಹುಸ್ಮಾನ್‌ಸಾಬ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಟಾಪ್ ನ್ಯೂಸ್

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.