ಹಳೆ ಪಿಂಚಣಿ ಪದ್ಧತಿ ಜಾರಿಗೆ ಪ್ರಯತ್ನ

Team Udayavani, Oct 11, 2020, 3:32 PM IST

cb-tdy-2

ಬಾಗೇಪಲ್ಲಿ: ಈಗಿರುವ ಹೊಸ ಪಿಂಚಣಿ ವ್ಯವಸ್ಥೆ ಬದಲಾಯಿಸಿ ಸರ್ಕಾರಿ ನೌಕರರಿಗೆಹಳೇ ಪಿಂಚಣಿ ಪದ್ಧತಿ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ಜಡಲ ಭೈರವೇಶ್ವರಸ್ವಾಮಿ ದೇವಾಲಯದ ರಸ್ತೆಯಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಹಳೇ ಪಿಂಚಣಿ ವ್ಯವಸ್ಥೆ ರದ್ದು ಮಾಡಿರುವುದರಿಂದ ನಿವೃತ್ತಿ ನಂತರ ನೌಕರರು ಕುಟುಂಬ ಪೋಷಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ ಎಂದರು.

ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಚಿದಾನಂದ್‌ ಎಂ.ಗೌಡ ಅವರಿಗೆ ತಾಲೂಕಿನಲ್ಲಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಪದವೀಧರರ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಸಾಧ್ಯವಾಗುತ್ತದೆ ಎಂದರು.

ಅಭ್ಯರ್ಥಿ ಚಿದಾನಂದ್‌ ಎಂ.ಗೌಡ ಮಾತನಾಡಿ, ಚುನಾವಣೆಯಲ್ಲಿ ಗೆದ್ದರೆಸರ್ಕಾರಿ ನೌಕರರ ಹಾಗೂ ಪದವೀಧರರ ಏನೇ ಸಮಸ್ಯೆಗಳಿದ್ದರೂ ಪರಿಹಾರ ಮಾಡಿಕೊಡುತ್ತೇನೆ ಎಂದರು.

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ವಿವೇಕಾನಂದ,ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್‌ಸಿ.ವಿ.ರಾಜರೆಡ್ಡಿ, ಸರ್ಕಾರಿ ನೌಕರರಸಂಘದ ಗೌರವಾಧ್ಯಕ್ಷಆರ್‌.ಹನುಮಂತರೆಡ್ಡಿ, ಇಸಿಒ ಕೆ.ಬಿ.ಆಂಜನೇಯರೆಡ್ಡಿ, ವಿಕಾಸ ಪದವಿ ಪೂರ್ವ ಕಾಲೇಜಿನ ಎನ್‌ ಎಸ್‌ಎಸ್‌ ಅಧಿಕಾರಿ ಟಿ.ಎನ್‌.ರವಿ, ಉಪನ್ಯಾಸಕ ಕೆ.ಟಿ.ವೀರಾಂಜನೇಯ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎನ್‌.ನಾಗ ರಾಜ್‌, ಅನುದಾನಿತ ಶಾಲೆಗಳ ಸಂಘದ ಅಧ್ಯಕ್ಷ ಗೋಪಿನಾಥ್‌ ಹಾಜರಿದ್ದರು.

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ :

ಚಿಂತಾಮಣಿ: ಮಕ್ಕಳನ್ನು ಕೋವಿಡ್‌ -19ನಿಂದ ಸಂರಕ್ಷಿಸಲು ಸ್ವ-ಗ್ರಾಮದ ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವುದೇ ಸೂಕ್ತ ಎಂದು ದಾನಿ ಟಿ.ಎನ್‌. ಚಂದ್ರಶೇಖರರೆಡ್ಡಿ ಅಭಿಪ್ರಾಯಪಟ್ಟರು.

ತಾಲೂಕಿನ ಬುರುಡಗುಂಟೆ ಕ್ಲಸ್ಟರ್‌ನತುಳವನೂರು ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶಾಲಾ ಬ್ಯಾಗ್‌ ಉಚಿತವಾಗಿ ವಿತರಿಸಿ ಮಾತನಾಡಿ, ಪೋಷಕರಿಗೆ ಮಕ್ಕಳವಿದ್ಯಾಭ್ಯಾಸದಬಗ್ಗೆಇರುವಕಾಳಜಿಯಷ್ಟೇ ಅವರ ಆರೋಗ್ಯದ ಬಗ್ಗೆಯೂ ಕಾಳಜಿ ಇರಬೇಕು. ದಿನೇ ದಿನೆ ಕೋವಿಡ್‌ ವೈರಸ್‌ ಹರಡುವ ವೇಗ ಜಾಸ್ತಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರದ ಶಾಲೆಗಳಿಗೆ ಹಾಗೂ ವಸತಿ ಶಾಲೆಗಳಿಗೆದಾಖಲು ಮಾಡುವುದು ಒಳ್ಳೆಯದಲ್ಲ. ಪ್ರಸ್ತುತ ನಮ್ಮೂರಿನ ಶಾಲೆ ತುಂಬಾ ಅಭಿವೃದ್ಧಿಯಾಗಿದೆ. ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿದೆ. ಪೋಷಕರು ಇದೇ ಶಾಲೆಯಲ್ಲಿಮಕ್ಕಳನ್ನು ಸೇರಿಸಿಅವರ ವಿದ್ಯೆ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಹಿಂದಿನ ವರ್ಷದಂತೆ ಈ ವರ್ಷವೂ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಿಸಿದ್ದೇವೆ. ಇನ್ನೂ ಅಗತ್ಯಮೂಲಸೌಲಭ್ಯಗಳನ್ನುಒದಗಿಸಲು ನಮ್ಮ ಕುಟುಂಬ ಸಿದ್ಧವಿದೆ ಎಂದರು.

ಮುಖ್ಯ ಶಿಕ್ಷಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪ ಮಾತನಾಡಿ, ಶಿಕ್ಷಕರ ಜೊತೆ ಸಕಾರಾತ್ಮಕವಾಗಿ ಸ್ಪಂದಿಸಿದಾನಿಗಳಕೊಡುಗೆಗಳನ್ನು ಮಕ್ಕಳ ‌ ಶೈಕ್ಷಣಿಕಾಭಿವೃದ್ಧಿಗಾಗಿ ಬಳಸಬೇಕು. ಮಕ್ಕಳನ್ನು ವಿದ್ಯಾಗಮಕ್ಕೆ ತಪ್ಪದೇ ಕಳುಹಿಸ ಬೇಕೆಂದರು. ಸಹ ಶಿಕ್ಷಕ ಸಿ.ವೆಂಕಟರವಣ, ವಿ.ಆಂಜ ನೇಯ,ಮಕ್ಕಳ ‌ ಪೋಷಕರಾದವೆಂಕಟರವಣಪ್ಪ, ರಾಮಾಂಜಿ, ವಿ.ಆಂಜನೇಯ, ರತ್ನಮ್ಮ, ಶ್ಯಾಮಲಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.