ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಜಾಗೃತಿ: ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ DYSP ಸಲಹೆ
Team Udayavani, May 1, 2020, 12:24 PM IST
ಚಿಕ್ಕಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಅನುಷ್ಠಾನಕ್ಕೆ ಕೆಲಸ ಮಾಡುತ್ತಿರುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು. ವಾಹನಗಳ ತಪಾಸಣೆ ವೇಳೆಯು ಅಂತರ ಕಾಯ್ದುಕೊಳ್ಳಬೇಕೆಂದು ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್ ತಿಳಿಸಿದರು.
ನಗರ ಠಾಣೆ ಆವರಣದಲ್ಲಿ ಚಿಕ್ಕಬಳ್ಳಾಪುರ ಉಪ ವಿಭಾಗದ ಆರಕ್ಷಕ ಅಧಿಕಾರಿಗಳ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿ, ಲಾಕ್‌ಡೌನ್‌ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ಹರಡದಂತೆ ತಡೆಯಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ವಿಶೇಷವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಘೋಷಣೆ ಆಗಿರುವ ಲಾಕ್‌ಡೌನ್ ವಿಚಾರದಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ತುರ್ತು ಸೇವೆಗಳು ಹೊರತುಪಡಿಸಿ ಅನವಶ್ಯಕವಾಗಿ ಜನರು ತಿರುಗಾಡದಂತೆ ನೋಡಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಆರಕ್ಷಕ ವೃತ್ತ ನಿರೀಕ್ಷಕ ಸುರ್ದಶನ್ ಸೇರಿದಂತೆ ಚಿಕ್ಕಬಳ್ಳಾಪುರ ವಿಭಾಗದ ಎಲ್ಲಾ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ, ಗೃಹ ರಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.