ಕೊರೊನಾ ವೈರಸ್ ತಡೆಗೆ ಜನ ಜಾಗೃತಿ ಸಭೆ
Team Udayavani, Mar 16, 2020, 3:00 AM IST
ಶಿಡ್ಲಘಟ್ಟ: ಜಗತ್ತಿನಲ್ಲಿ ಜನರ ನೆಮ್ಮದಿ ಭಂಗ ತಂದಿರುವ ಕೊರೊನಾ ಸೋಂಕಿನ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ತಹಶೀಲ್ದಾರ್ ಕೆ.ಅರುಂಧತಿ ಅಧ್ಯಕ್ಷತೆಯಲ್ಲಿ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಭೆ ಆಯೋಜಿಸಲಾಗಿತ್ತು.
ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರು, ಹೋಟೆಲ್ ಮಾಲಿಕರು, ರಸ್ತೆ ಬದಿ ವ್ಯಾಪಾರಿಗಳು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಸಲಹೆ ಸೂಚನೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಮತ್ತು ಸಾಧಕ ಬಾಧಕಗಳ ಬಗ್ಗೆ ಸಾರ್ವಜನಿಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಿ ಧೈರ್ಯ ತುಂಬಿದರು. ಕೊರೊನಾ ಬಗ್ಗೆ ಅನಾವಶ್ಯಕ ಗಾಬರಿ ಬೇಡ. ಇದೊಂದು ಅಪಾಯಕಾರಿ ವೈರಸ್ ಆದರೂ ಮುಂಜಾಗ್ರತೆ ವಹಿಸಿ ಸ್ವತ್ಛತೆ ಕಾಪಾಡಿಕೊಂಡು ಬಂದಲ್ಲಿ ರೋಗ ನಿಯಂತ್ರಿಸಬಹುದು ಎಂದರು.
ಆಸ್ಪತ್ರೆಗೆ ದಾಖಲಿಸಿ: ತಾಲೂಕಿನ ಯಾವುದೇ ಭಾಗದಲ್ಲೂ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿಲ್ಲ. ಈ ಬಗ್ಗೆ ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ಸಲಹೆ ಸೂಚನೆ ನೀಡಿದ್ದು, ತಾಲೂಕಿನ ಯಾವುದೇ ಭಾಗದಲ್ಲಿ ರೋಗ ಲಕ್ಷಣದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ ಎಂದರು.
ಆರೋಗ್ಯ ಇಲಾಖೆ ಸುಪರ್ದಿಗೆ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಸಿದ್ಧಪಡಿಸಲಾಗಿದೆ. ಜೊತೆಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಗರದ ಹೊರ ವಲಯದ ವರದನಾಯಕನಹಳ್ಳಿ ಗೇಟ್ ಬಳಿಯ ಬಾಲಾಜಿ ಕಲ್ಯಾಣ ಮಂಟಪದಲ್ಲಿ 15 ಬೆಡ್‌ಗಳ ವಿಶೇಷ ಐಸೊಲೇಷನ್ ವಾರ್ಡ್ ಪ್ರಾರಂಭಿಸಲು ಸಿದ್ಧತೆ ನಡೆದಿದ್ದು, ಕಲ್ಯಾಣ ಮಂಟಪವನ್ನು ಆರೋಗ್ಯ ಇಲಾಖೆ ಸುಪರ್ದಿಗೆ ತೆಗೆದುಕೊಂಡಿದ್ದು, ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಕೂಡಲೇ ಸಿದ್ಧಪಡಿಸಲು ಯೋಜನೆ ರೂಪಿಸಿರುವುದಾಗಿ ತಿಳಿಸಿದರು.
ತಹಶೀಲ್ದಾರ್ ಕೆ.ಅರುಂದತಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ವಾರದಸಂತೆ, ಚಿತ್ರ ಮಂದಿರಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಪಂ ಅಧಿಕಾರಿಗಳು ಮತ್ತು ನಗರಸಭೆಯಲ್ಲಿ ಸ್ವತ್ಛತೆ ಕಾಪಾಡಲು ಈಗಾಗಲೇ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ತಾಪಂ ಇಒ ಶಿವಕುಮಾರ್ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗವೇಣಿ, ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಹಾಗೂ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಹಿತ ಇಲಾಖೆಯ ಸಿಬ್ಬಂದಿ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಜಾಮೀಯಾ ಮಸೀದಿ ಅಧ್ಯಕ್ಷ ಅಲಹಾಜ್ ತಾಜ್‌ಪಾಷ, ಕಾರ್ಯದರ್ಶಿ ಹೈದರ್‌ವಲೀ, ಡಾಲ್ಫಿನ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಶ್ರೀರಾಮ, ಬಾರ್ ಮಾಲೀಕ ಕೃಷ್ಣಪ್ಪ, ವಾಲ್ಕಿàಕಿ ಸಂಘಟನೆಯ ಗಿರೀಶ್ ನಾಯಕ, ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.