ಡಾ. ಬಿ.ಆರ್.ಅಂಬೇಡ್ಕರ್ ನಮಗೆ ದಾರಿ ದೀಪ
Team Udayavani, May 17, 2022, 3:40 PM IST
ಗೌರಿಬಿದನೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಜಾತೀಯತೆ ಮುಂದುವರಿದಿದ್ದು, ಅಸ್ಪೃಶ್ಯತೆ, ಶೋಷಣೆ, ದಬ್ಟಾಳಿಕೆ ವಿರುದ್ಧ ಹೋರಾಡಲು ಅಂಬೇಡ್ಕರ್ ಹಾಗೂ ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನವೇ ದಾರಿ ದೀಪವಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಡಾ.ಕೆ.ಕೆಂಪರಾಜು ಹೇಳಿದರು.
ನಗರದ ಬೈಪಾಸ್ ರಸ್ತೆಯ ಬದಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿಯ ಸಮಾರೋಪದಲ್ಲಿ ಅಪಾರ ಜನರನ್ನು ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಬಾಲ್ಯದಲ್ಲಿ ಕುಡಿವ ನೀರಿಗಾಗಿ ಹೋರಾಡುವ ಸ್ಥಿತಿ ಇತ್ತು. ಅವರ ಜೀವನವೇ ಹೋರಾಟ, ಸಂಘರ್ಷಗಳಿಂದ ಕೂಡಿತ್ತು. ಅವರು
ಕೇವಲ ದಲಿತರಿಗೆ ಸೀಮಿತವಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂಡಾ.ಬಾಬೂ ಜಗಜೀವನ ರಾಂ ಜಯಂತಿ, ಜೈ ಭೀಮ್ ರಥದ ಮೂಲಕ 7 ದಿನ ಮಾಡುತ್ತಿದ್ದೇವೆ. ಪಕ್ಷಾತೀತವಾಗಿ ಜನ ಬೆಂಬಲಿಸಬೇಕು ಎಂದರು.
ಸ್ವಾತಂತ್ರ್ಯದ ಕುರಿತು ಅಲೋಚಿಸಿ: ತಾಲೂಕಿನಲ್ಲಿ 60 ಸಾವಿರ ಪ. ಜಾತಿ ಹಾಗೂ 50 ಸಾವಿರ ಮಂದಿ ಪ. ಪಂಗಡದ ಸಮುದಾಯದವರಿದ್ದಾರೆ. ಆದರೆ ಅಂಬೇಡ್ಕರ್ ಜಯಂತಿ ಮಾಡಲು ಶಾಸಕರು ಕ್ರೀಡಾಂಗಣದಲ್ಲಿ ಅವಕಾಶ ನೀಡಲಿಲ್ಲ. ಅಂಬೇಡ್ಕರ್ ಮೊಮ್ಮಗ ಬಂದರೂ ಜಾಗ ನೀಡಲಿಲ್ಲ ಎಂದರೆ ತಾಲೂಕಿನಲ್ಲಿ ಸಮುದಾಯಗಳಿಗೆ ಎಷ್ಟರ ಮಟ್ಟಿಗೆ ಸ್ವಾತಂತ್ರ್ಯ ದೊರೆತಿದೆ ಯೋಚಿಸಬೇಕು. ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಆದ್ದರಿಂದ ಅಂಬೇಡ್ಕರ್ ಹೆಸರು ಹೇಳಿಕೊಂಡು ರಾಜಕೀಯ ಮಾಡುತ್ತಿರುವವರ ಬಗ್ಗೆ ಎಚ್ಚರದಿಂದಿರಿ ಎಂದರು.
ಆಕರ್ಷಕ ಕೇಂದ್ರ ಬಿಂದು: ಸಭಿಕರ ಬೃಹತ್ ಗ್ಯಾಲರಿ ಹಾಗೂ ಎಲ್ ಇಡಿ ಪರದೆಯ ಆಕರ್ಷಕ ವೇದಿಕೆ ಯಲ್ಲಿ ಕೇಂದ್ರ ಬಿಂದುವಾಗಿದ್ದು, ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಹಾಗೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾ ನಾ ಯಕ ಡಾ.ಬಿ.ಆರ್.ಅಂಬೇಡ್ಕರ್ ಧಾರವಾಹಿಯ ಬಾಲಕ ಅಂಬೇಡ್ಕರ್ ಪಾತ್ರದಾರಿ ಆಯುದ್ ಬಾನು ಶಾಲಿ ಮಾತನಾಡಿ, ಕರ್ನಾಟಕದ ಜನ ನನಗೆ ಹೆಚ್ಚಿನ ಪ್ರೀತಿ ಗೌರವ ತೋರಿಸುತ್ತಿದ್ದಾರೆ ಎಂದರು.
ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಮಾತನಾಡಿ, ನಾನು ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಆದರೆ ಕೆಂಪರಾಜು ಅವರು ದೀನ ದಲಿತರಿಗೆ
ಮಾಡುತ್ತಿರುವ ಸೇವೆ, ಕಳಕಳಿ, ವಿಭಿನ್ನ ಕಾರ್ಯಕ್ರಮಗಳು, ದೂರದೃಷ್ಟಿ ಚಿಂತನೆಗಳನ್ನು ಅರಿತು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ, ಇಂದು ನನ್ನಿಂದ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಅನಾವರಣಗೊಳಿಸಿ ದ್ದಾರೆ ಎಂದರು. ವಿವಿಧ ಗ್ರಾಪಂ ಅಧ್ಯಕ್ಷರು, ಸದಸ್ಯರು, ಹಾಗೂ ಮುಖಂಡರು ಹಾಜರಿದ್ದರು.
ಮನೆಮಗನಾಗಿ ದುಡಿಯುವೆ : ಒಂದು ವರ್ಷದಲ್ಲಿ 110 ಮಂದಿ ಗ್ರಾಪಂ ಸದಸ್ಯರು ಹಾಗೂ 10 ಗ್ರಾಪಂಗಳಲ್ಲಿ ನಮ್ಮವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನೀವು ನನಗೆ ಒಮ್ಮೆ ಅಧಿಕಾರ ನೀಡಿ. ನಿಮ್ಮ ಮನೆ ಮಗನಾಗಿ ದುಡಿಯುತ್ತೇನೆ. ನಿಮ್ಮ ಮನೆ ಬಾಗಿಲಿಗೆ ಸೇವೆ ಒದಗಿಸುತ್ತೇನೆ. ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುತ್ತೇನೆ. ಆದ್ದರಿಂದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎನ್ನದೇ ಎಲ್ಲರೂ ನನ್ನೊಂದಿಗೆ ಪಕ್ಷಾತೀತವಾಗಿ ಕೈಜೋಡಿಸಿ ಎಂದು ಕೆಂಪರಾಜು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.