ಬಾಗೇಪಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ
Team Udayavani, Sep 26, 2021, 3:28 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಕಾರ್ಯಕರ್ತರಲ್ಲಿಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ತಾರಕ್ಕೇರಿದ್ದು, ಸ್ಥಳೀಯ ನಾಯಕರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನುಭೇಟಿ ಮಾಡಿ ಚರ್ಚೆ ನಡೆಸಿದ್ದರಿಂದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸ್ವಂತಬಲದಿಂದ ಅಧಿ ಕಾರಕ್ಕೆ ತರುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದೃಢಸಂಕಲ್ಪ ಮಾಡಿಈಗಾಗಲೇ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆನಡೆಸಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗಾಗಿಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಪಟ್ಟಿ ಬಿಡುಗಡೆ: ದೇಶ, ರಾಜ್ಯದ ಅಭಿವೃದ್ಧಿ ದೃಷ್ಟಿಕೋನದಿಂದ ಪ್ರಾದೇಶಿಕ ಪಕ್ಷ ಬಲಿಷ್ಠಗೊಳಿಸುವ ಅಗತ್ಯವಿದೆ ಎಂದು ಜೆಡಿಎಸ್ ನಾಯಕರು ಸಭೆ ಸಮಾರಂಭಗಳಲ್ಲಿ ಮನವಿ ಮಾಡಿದ್ದಾರೆ. ಮತ್ತೂಂದೆಡೆ2023ಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಅವರನ್ನು ಮತ್ತೂಮ್ಮೆ ಸಿಎಂ ಮಾಡಲು ಕಾರ್ಯಕರ್ತರುಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಚ್‌ಡಿಕೆ ಸಹ ಈ ತಿಂಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ: ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಾಗಲೇ ರಣತಂತ್ರ ರೂಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಾಗೇಪಲ್ಲಿ ಕ್ಷೇತ್ರಕ್ಕೆ ನಾಗರಾಜ್‌ರೆಡ್ಡಿ ಅವರನ್ನು ಈಗಾಗಲೇ ಜೆಡಿಎಸ್‌ಅಭ್ಯರ್ಥಿ ಆಗಿ ಘೋಷಣೆ ಮಾಡಿದ್ದಾರೆ. ಆದರೆ, ನಾಗರಾಜರೆಡ್ಡಿ ವಿರುದ್ಧ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ಇದರಿಂದ ಪಕ್ಷ ಸಂಘಟನೆಗೆ ತೊಂದರೆ ಆಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಳಿ ನಿಯೋಗ ತೆರಳಿ ಅಸಮಾಧಾನ ಹೊರಹಾಕಿದ್ದಾರೆ. ಮುಖಂಡರು, ಕಾರ್ಯಕರ್ತರ ಸಮಸ್ಯೆ ಆಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಅ.2ರ ನಂತರ ತಮ್ಮನಿಲುವು ವ್ಯಕ್ತಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ಬಾಗೇಪಲ್ಲಿ ಕ್ಷೇತ್ರದಲ್ಲಿ ಚುನಾವಣೆ ಆಗುವ ಮುನ್ನವೇ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಮತ್ತು ಬಣ ರಾಜಕೀಯ ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ.
ರಮೇಶ್‌ಗೌಡ ಎಂಟ್ರಿಗೆ ತಯಾರಿ?: ಇತ್ತೀಚೆಗೆ ಜನ್ಮ ದಿನವನ್ನು ಆಚರಿಸಿಕೊಂಡಿರುವ ಜೆಡಿಎಸ್ ಯುವ ನಾಯಕ, ವಿಧಾನ ಪರಿಷತ್ ಸದಸ್ಯ ರಮೇಶ್‌ಗೌಡ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ತಯಾರಾಗಿದ್ದೇನೆ ಎಂದು ಹೇಳಿದ ಬಳಿಕ ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ಪಕ್ಷದ ವರಿಷ್ಠರು ಅವಕಾಶ ಕೊಟ್ಟರೆ ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ.
ಈ ಮೂಲಕ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಜೆಡಿಎಸ್ ಅಭ್ಯರ್ಥಿ ವಿಚಾರದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿಜೆಡಿಎಸ್ ಟಿಕೆಟ್‌ಗೆ ಡಿಮ್ಯಾಂಡ್ ಬಂದಿದೆ. ಕಾರ್ಯಕರ್ತರು ಯಾರೊಂದಿಗೆ ಗುರುತಿಸಿಕೊಳ್ಳಬೇಕೆಂದು ಚಿಂತೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಕೆಲವರು ಡಿ.ಜೆ.ನಾಗರಾಜ್‌ರೆಡ್ಡಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿ, ಪಕ್ಷದ ವರಿಷ್ಠರು ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೂರು ಸಲ್ಲಿಸಿದ್ದಾರೆ.
ಒಟ್ಟಾರೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ವಿಚಾರದಲ್ಲಿ ಮಾಜಿ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.
ಕುಮಾರಸ್ವಾಮಿ ಅವರು ಬಾಗೇಪಲ್ಲಿ ವಿಧಾನಸಭಾಕ್ಷೇತ್ರಕ್ಕೆ ನನ್ನನ್ನು ಪಕ್ಷದಅಭ್ಯರ್ಥಿ ಆಗಿ ಘೋಷಣೆ ಮಾಡಿದ್ದಾರೆ, ಯಾರು ಏನು ಮಾತನಾಡಿಕೊಂಡರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಕ್ಷೇತ್ರ ದಲ್ಲಿ ಗೆಲುವು ಸಾಧಿ ಸುವುದೇ ಮುಖ್ಯ ಗುರಿ,ಜಿಲ್ಲೆಯಲ್ಲಿ ಮೊದಲು ಜೆಡಿಎಸ್ ಶಾಸಕನಾಗಿ ವಿಧಾನಸಭೆ ಪ್ರವೇಶ ಮಾಡುತ್ತೇನೆ.-ಡಿ.ಜೆ.ನಾಗರಾಜರೆಡ್ಡಿ, ಬಾಗೇಪಲ್ಲಿ ಕ್ಷೇತ್ರದ ಜೆಡಿಎಸ್ ಸ್ಪರ್ಧಾಕಾಂಕ್ಷಿ
ಬಾಗೇಪಲ್ಲಿವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಬೇಕು, ಅದಕ್ಕಾಗಿಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಪಕ್ಷದ ವರಿಷ್ಠರು ಅವಕಾಶ ನೀಡಿದರೆ, ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುತ್ತೇನೆ.– ರಮೇಶ್‌ಗೌಡ, ಬಾಗೇಪಲ್ಲಿ ಕ್ಷೇತ್ರದ ಜೆಡಿಎಸ್ ಸ್ಪರ್ಧಾಕಾಂಕ್ಷಿ
ಬಾಗೇಪಲ್ಲಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಿ ನಾಗರಾಜ್‌ರೆಡ್ಡಿ ಅವರನ್ನು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.ಪಕ್ಷ ಸಂಘಟನೆ ವಿಚಾರದಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಕೆಲವರು ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ. ಆದರೆ, ಕುಮಾರಸ್ವಾಮಿ ತೀರ್ಮಾನಕ್ಕೆ ಬದ್ಧರಾಗಿ ಕೆಲಸ ಮಾಡುವುದು ನನ್ನ ಮುಖ್ಯ ಗುರಿ.– ಕೆ.ಎಂ.ಮುನೇಗೌಡ, ಅಧ್ಯಕ್ಷ, ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್
– ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.