ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ
Team Udayavani, Apr 15, 2021, 6:22 PM IST
ಚಿಕ್ಕಬಳ್ಳಾಪುರ: ರೈತರ ಹೆಸರಿನಲ್ಲಿ ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆರೋಪಿಸಿದರು.
ನಗರದ ರೈತ ಸಂಘದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರ ಆದಾಯವನ್ನು ದ್ವಿಗುಣ ಮಾಡುವುದಾಗಿ ಭರವಸೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟಿದ್ದು ಇದರ ಮೂಲಕ ರೈತರು ಕೃಷಿಯನ್ನು ತೈಜಿಸುವ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಸೋಂಕಿನ ಪ್ರಭಾವದಿಂದ ರೈತರು ಸೇರಿದಂತೆ ಎಲ್ಲಾ ಶ್ರಮಿ ಜೀವಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಬದಲಿಗೆ ಕೇಂದ್ರ ಸರ್ಕಾರ ರಸಗೊಬ್ಬರದ ಮೇಲೆ ಶೇ. 58 ರಷ್ಟು ದರವನ್ನು ಏರಿಕೆ ಮಾಡಿ ರೈತರ ಗಾಯದ ಮೇಲೆ ಬರೆ ಎಳೆಯುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ನೆಚ್ಚಿಕೊಂಡು ರೈತರು ಜೀವನ ನಡೆಸುತ್ತಿದ್ದಾರೆ ಜೊತೆಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಸಲು ಬಳಸುವ ಗೊಬ್ಬರಗಳ ದರ ಗಗನಕ್ಕೇರಿದ್ದು ಕೇಂದ್ರದ ರಸಗೊಬ್ಬರ ಖಾತೆ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿಎಸ್ ಸದಾನಂದಗೌಡ ಅವರು ಹಳೆ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಆದರೆ ರಸಗೊಬ್ಬರದ ಅಂಗಡಿ ಮಾಲೀಕರು ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ಆದೇಶವನ್ನು ದಿಕ್ಕರಿಸಿ ಅಧಿಕ ಬೆಲೆಗಳಿಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದು ಜಿಲ್ಲಾಡಳಿತ ಕೂಡಲೆ ಅಂಗಡಿ ಮಾಲೀಕರ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಕೃಷಿ ಮತ್ತು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಿರಂತರವಾಗಿ ರೈತರು ಹೋರಾಟ ನಡೆಸುತ್ತಿದ್ದಾರೆ ಕೇಂದ್ರ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ಬದಲಿಗೆ ಸರ್ಕಾರ ಕೃಷಿ ರಂಗವನ್ನು ಖಾಸಗೀಕರಣ ಮಾಡಲು ಹೊರಟಿದೆ ಇದರಿಂದ ರೈತರು ತಮ್ಮ ಜಮೀನುಗಳನ್ನು ಮಾರಾಟ ಮಾಡಿ ವ್ಯವಸಾಯ ಕ್ಷೇತ್ರದಿಂದ ವಿಮುಖರಾಗುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ ರೈತರ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ರಸಗೊಬ್ಬರ ಅಧಿಕ ದರಕ್ಕೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ಮೇಲೆ ಕ್ರಮ ಜರುಗಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ರೈತಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಉಪಾಧ್ಯಕ್ಷ ಮುನಿನಂಜಪ್ಪ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ವೀರಾಪುರ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಬಸವರಾಜ್, ತಾಲೂಕು ಸಂಚಾಲಕ ಬೈರಸಂದ್ರ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸೊಣ್ಣೇನಹಳ್ಳಿ ಕೆಂಪರೆಡ್ಡಿ, ನಗರ ಘಟಕ ಅಧ್ಯಕ್ಷ ನಾರಾಯಣಸ್ವಾಮಿ, ಗುಡಿಹಳ್ಳಿ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಡಿಎಪಿ ಹಳೆದರ 1200, ಪರಿಷ್ಕೃತ ದರ 1900, ಎನ್‍ಪಿಕೆ 10-26-26, 1175, ಪರಿಷ್ಕøತ ದರ 1775, 12-32-16 ದರ 1185, ಪರಿಷ್ಕೃತ ದರ 1800 ರೂಗಳು 20-20-20 ದರ 925, ಪರಿಷ್ಕೃತ ದರ 1350 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ ಜೊತೆಗೆ ನಕಲಿ ರಸೀದಿ ನೀಡಲಾಗುತ್ತಿದೆ ಎಂದು ಭಕ್ತರಹಳ್ಳಿ ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.