ಕ್ಯಾನ್ಸರ್ ದಿನ ಸ್ವಾಮಿ ವಿವೇಕಾನಂದ ಜಯಂತಿ
ಋಷಿ ಸಂಸ್ಕೃತಿ ವಿದ್ಯಾಕೇಂದ್ರದಲ್ಲಿ ಜೇಸಿರೆಟ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಡಾ| ಅನಂತ ಪದ್ಮನಾಭ ಉದ್ಘಾಟಿಸಿದರು.
Team Udayavani, Feb 6, 2021, 5:15 PM IST
ಬೀರೂರು: ಆಹಾರ ಬಳಕೆ ಮತ್ತು ಜೀವನಶೈಲಿಯ ವ್ಯತ್ಯಯದಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆ ಉಂಟಾಗುತ್ತಿದೆ. ಆದ್ದರಿಂದ ಸಾವಯವ ಕೃಷಿಯ ಮೂಲಕ ಉತ್ಪಾದಿಸಲಾದ ಧಾನ್ಯ, ತರಕಾರಿ ಸೇವನೆ ಮೂಲಕ ಸುಸ್ಥಿರ ಬದುಕಿಗೆ ಮುನ್ನುಡಿ ಬರೆದುಕೊಳ್ಳಿ ಎಂದು ಡಾ| ಅನಂತಪದ್ಮನಾಭ ತಿಳಿಸಿದರು.
ಪಟ್ಟಣದ ಋಷಿ ಸಂಸ್ಕೃತಿ ವಿದ್ಯಾಕೇಂದ್ರದಲ್ಲಿ ಜೇಸಿರೆಟ್ ಸಂಸ್ಥೆ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನ ಭಯಾನಕ ರೋಗಗಳಲ್ಲಿ ಕ್ಯಾನ್ಸರ್ ಎರಡನೇ ಸ್ಥಾನ ಪಡೆದಿದೆ. ಪುರುಷರಲ್ಲಿ ಯಕೃತ್ತು, ಕರುಳು, ವೃಷಣ, ಮಹಿಳೆಯರಲ್ಲಿ ಗರ್ಭಾಶಯ, ಸ್ತನ ಕ್ಯಾನ್ಸರ್‌ನಂತಹ ಪೀಡೆಗಳು ಕಾಡುತ್ತವೆ.
ನಮ್ಮ ದೇಶದಲ್ಲಿ ಕೇರಳ ರಾಜ್ಯದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ರೋಗಿಗಳಿದ್ದಾರೆ. ಒಂದು ಲಕ್ಷ ಜನಸಂಖ್ಯೆಯಲ್ಲಿ 135 ಜನರು ಕ್ಯಾನ್ಸರ್ ರೋಗಕ್ಕೆ ಬಲಿಯಾಗುತ್ತಿದ್ದಾರೆ. ರಾಸಾಯನಿಕಯುಕ್ತ ಆಹಾರ, ಹಣ್ಣು ಮತ್ತು ತರಕಾರಿಗಳ ಅವಲಂಬನೆ, ಪರಿಸರ ಪೂರಕ ಕೃಷಿಯಿಂದ ವಿಮುಖರಾದ ಪರಿಣಾಮ ಹಲವು ಮಾರಕ ರೋಗಗಳು ಹೆಚ್ಚುತ್ತಿವೆ ಎಂದರು.
ಜೇಸಿರೆಟ್ ಅಧ್ಯಕ್ಷೆ ಜಯಲಕ್ಷಿ¾ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ ಅನುಸರಿಸಿ ಯುವ ಪೀಳಿಗೆಯು ದೇಶಾಭಿಮಾನ, ಧರ್ಮ ಜಾಗೃತಿ ಮತ್ತು ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ರಾಗಿಣಿ, ಜೇಸಿರೆಟ್ ಕಾರ್ಯದರ್ಶಿ ಕುಸುಮಾ ಮಧು, ಮಾಜಿ ಅಧ್ಯಕ್ಷೆ ನಯನಾ ರಘು, ನೇತ್ರಾವತಿ, ದೀಪಾ, ತಿಮ್ಮೇಗೌಡ ಇತರರು ಇದ್ದರು. ಕಾರ್ಯಕ್ರಮದ ಅಂಗವಾಗಿ ಕ್ಲಿನಿಕ್
ನಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.