ಋತುಚಕ್ರ ಶುಚಿತ್ವದ ಅರಿವು ಮೂಡಿಸಿ
Team Udayavani, May 31, 2020, 7:49 AM IST
ಚಿಕ್ಕಬಳ್ಳಾಪುರ: ಮಹಿಳೆಯರಲ್ಲಿ ಋತುಚಕ್ರವು ಒಂದು ಸಹಜ ಜೈವಿಕ ಪ್ರಕ್ರಿಯೆ. ಅದಿಲ್ಲದೇ ಮಾನವ ಸಂತತಿ ಮುಂದುವರಿಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿ ರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗ ಲಾಡಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಪಂನ ಡಾ.ಹೆಚ್.ನರಸಿಂಹಯ್ಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯಡಿ ಮಹಿಳೆಯರಲ್ಲಿ ಋತುಚಕ್ರದ ಶುಚಿತ್ವದ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು. ಋತುಚಕ್ರದ ಶುಚಿತ್ವದಿಂದ ಲೈಂಗಿಕ ಸೋಂಕು ಇತರೆ ಗುಪ್ತರೋಗಗಳಿಂದ ದೂರವಿರಬಹುದು ಎಂಬ ಅರಿವು ಗ್ರಾಮೀಣ ಜನಸಾಮಾನ್ಯರಲ್ಲಿ ಬರಬೇಕಾಗಿದೆ.
ಅರಿವು ಮೂಡಿಸುವ ಕಾರ್ಯವನ್ನು ನಾವು ನೀವು ಗಳು ಒಟ್ಟಾಗಿ ಮಾಡಬೇಕಾದ ಅಗತ್ಯವಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈ ಕುರಿತು ಅರಿವು ಮೂಡಿಸುವ ಕಾರ್ಯ ಆಗಬೇಕೆಂದರು. ಚಿಕ್ಕಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುಳಾ ಮಾತನಾಡಿ, ಮಹಿಳೆಯರಿಗೆ ಋತುಚಕ್ರದ ಶುಚಿತ್ವದ ಅಗತ್ಯದ ಬಗ್ಗೆ ಹಾಗೂ ಸಪ್ತಾಹ ಆಚರಿಸುವ ಜೊತೆಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದರ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಪಂನ ಡಿ.ಆರ್.ಡಿ. ಎ .ಯೋಜನಾ ನಿರ್ದೇಶಕ ಗಿರಿಜಾಶಂಕರ್, ಮುಖ್ಯ ಲೆಕ್ಕಾಧಿ ಕಾರಿ ಅರ್ಚನಾ, ಬಿ.ಕಮಲನಾಭನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.