ಪತ್ನಿಯೊಂದಿಗೆ ಅಕ್ರಮ ಸಂಬಂಧ ಆರೋಪ: ತೋಟದಲ್ಲಿ ವ್ಯಕ್ತಿಯ ಭೀಕರ ಕೊಲೆ!
Team Udayavani, Mar 11, 2021, 10:52 AM IST
ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಬೆಳವಹಳ್ಳಿ ಗ್ರಾಮದ ವೆಂಕಟೇಶಪ್ಪ (47) ಕೊಲೆಗೀಡಾದ ವ್ಯಕ್ತಿ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೌರಿಬಿದನೂರು ತಾಲೂಕಿನ ಡಿಪಾಳ್ಯ ಹೋಬಳಿಯ ಚುಂಚದೇನಹಳ್ಳಿ ಗ್ರಾಮದ ಆರೋಪಿ ನರಸಿಂಹಪ್ಪನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಟ್ರಕ್ – ಸ್ಕಾರ್ಪಿಯೋ ವಾಹನದ ಮಧ್ಯೆ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ, ಮೂವರಿಗೆ ಗಾಯ
ಕೊಲೆಗೀಡಾದ ವೆಂಕಟೇಶಪ್ಪನು ಆರೋಪಿಯ ನರಸಿಂಹಪ್ಪನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ ಈ ವಿಚಾರ ತಿಳಿದ ತಕ್ಷಣ ಕುಪಿತಗೊಂಡ ನರಸಿಂಹಪ್ಪ ಚುಂಚದೇನಹಳ್ಳಿ ಸಮೀಪ ತೋಟವೊಂದರಲ್ಲಿ ವೆಂಕಟೇಶಪ್ಪನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಎಂಟರ ಹರೆಯದ ಬಾಲಕ ದಾರುಣ ಬಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.