ಆಧುನಿಕ ಕೃಷಿ ಪದ್ಧತಿ ಅಳವಡಿಕೆಯಿಂದ ಲಾಭದಾಯಕ
Team Udayavani, Nov 6, 2019, 3:00 AM IST
ಚಿಕ್ಕಬಳ್ಳಾಪುರ: ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆದು ಲಾಭದಾಯಕ ಮಾಡಿಕೊಳ್ಳಬೇಕೆಂದು ಜಿಲ್ಲೆಯ ಕುರುಬೂರು ರೇಷ್ಮೆ ಕೃಷಿ ಶಿಕ್ಷಣ ಮಹಾ ವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ವೆಂಕಟರವಣಪ್ಪ ತಿಳಿಸಿದರು.
ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದಲ್ಲಿ ಕಳೆದ 3 ತಿಂಗಳಿನಿಂದ ಕೃಷಿ ವಿಶ್ವವಿದ್ಯಾನಿಲಯ ಹಾಗೂ ಕುರುಬೂರು ರೇಷ್ಮೆ ಕೃಷಿ ಮಹಾವಿದ್ಯಾಲಯದ ಕಾಲೇಜಿನ ಅಂತಿಮ ವರ್ಷದ ಸುಮಾರು 15 ಬಿ.ಎಸ್ಸಿ., ವಿದ್ಯಾರ್ಥಿಗಳ ತಂಡ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ವೈಜ್ಞಾನಿಕ ಮಾರ್ಗಗಳ ಅರಿವು: ಗ್ರಾಮದಲ್ಲಿ ರೈತರು ಮಾಡುತ್ತಿರುವ ಕೃಷಿ ಭೂಮಿಗಳಿಗೆ ಪ್ರತಿದಿನ ಭೇಟಿ ನೀಡಿ, ಬೆಳೆಗಳಿಗೆ ಆಗುತ್ತಿರುವ ರೋಗಗಳ ತಡೆಗಟ್ಟುವಿಕೆಯ ಮಾರ್ಗ ಹಾಗೂ ಅಧಿಕ ಇಳುವರಿ ಪಡೆಯಲು ಅನುಸರಿಸಬೇಕಾದ ವೈಜ್ಞಾನಿಕ ಮಾರ್ಗಗಳನ್ನು ತಿಳಿಸುವುದರ ಜೊತೆಗೆ ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳೇ ರೈತರೊಂದಿಗೆ ಸೇರಿ ವ್ಯವಸಾಯ ಚಟುವಟಿಕೆಗಳಲ್ಲಿ ಭಾಗವಹಿಸುವುದು. ರೈತರು ಇಂದಿನ ದಿನಮಾನಗಳಲ್ಲಿ ಆಧುನಿಕ ಪದ್ಧತಿ ಅಳವಡಿಸಿಕೊಂಡು ಕೃಷಿ ಚಟುವಟಿಕೆ ನಡೆಸಲು ಮಾರ್ಗದರ್ಶನ ನೀಡುವುದು, ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಮೂಲ ಉದ್ದೇಶ ಎಂದರು.
ವಿದ್ಯಾರ್ಥಿಗಳಿಗೆ ಸ್ವ ಅನುಭವ: ಭವಿಷ್ಯದಲ್ಲಿ ದೇಶದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮಗಳು ಹೆಚ್ಚು ಸಹಕಾರಿ ಆಗುತ್ತವೆ. ವಿದ್ಯಾರ್ಥಿಗಳೇ ಎಲ್ಲಾ ರೈತರಿಗೆ ಆಧುನಿಕ ಕೃಷಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಹವಾಮಾನ ವೈಪರೀತ್ಯ ಇಂದಿನ ದಿನಗಳಲ್ಲಿ ಸಾಮಾಜಿಕ ಅರಣ್ಯವನ್ನು ಉತ್ತೇಜಿಸಲು ಗ್ರಾಮಸ್ಥರಿಗೆ ಸಸಿಗಳನ್ನು ನೀಡಿ ತಮ್ಮ ತೋಟ, ಹೊಲ, ಗದ್ದೆ ಬದಿಗಳಲ್ಲಿ ನೆಟ್ಟು ಪೋಷಿಸುವಂತೆ ತಿಳಿಸಿಕೊಡುವುದು,
ರೈತರಿಗೆ ಹೊಸ ತಳಿಗಳು ಮತ್ತು ಸಮಗ್ರವಾಗಿ ರೋಗಕೀಟಗಳ ನಿರ್ವಾಹಣೆಯ ಬಗ್ಗೆ ತಿಳಿಸಲು ಬೆಳೆ ಪ್ರಾತ್ಯಕ್ಷಿಕೆಯಲ್ಲಿ ರೈತರಿಗೆ ಮಾದರಿಗಳನ್ನು ತೋರಿಸಿ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಪ್ರಾಧ್ಯಾಪಕರಾದ ಡಾ. ಆರ್.ಗೋಲ್ಯಾನಾಯ್ಕ, ರಾಮಕೃಷ್ಣನಾಯಕ, ಸಹಾಯಕ ಪ್ರಾಧ್ಯಾಪಕರಾದ ಶ್ರೀನಿವಾಸರೆಡ್ಡಿ, ದೇವರಾಜ್ ಹಾಗೂ ಚಿಕ್ಕಪೈಲಗುರ್ಕಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಯೋಜನೆ ಲಭ್ಯತೆ ಬಗ್ಗೆ ಅರಿವು: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ರೈತರಲ್ಲಿ ಅರಿವು ಮೂಡಿಸಲು ಪ್ರತಿ ವಾರಕ್ಕೊಮ್ಮೆ ಗ್ರಾಮದ ಸಮುದಾಯ ಭವನದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸುವುದು, ರೈತರಿಗೆ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಪರಿಣಾಮ ಮತ್ತು ಕ್ಷೇತ್ರೊತ್ಸವ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಡೆಸಿಕೊಡುವುದು. ಕೃಷಿ ಪದ್ದತಿಗಳ ಬಗ್ಗೆ ಮನವರಿಕೆ, ಕೃಷಿ ಯಂತ್ರೋಪಕರಣಗಳು, ಕೃಷಿ ಪರಿಕರಗಳು ಮತ್ತು ಸರ್ಕಾರದ ವಿವಿಧ 30 ಕ್ಕೂ ಹೆಚ್ಚು ಯೋಜನೆಯ ಲಭ್ಯತೆ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.