ಬಿಜೆಪಿ ಬಲವರ್ಧನೆಗೆ ಎಲ್ಲರೂ ಕೈಜೋಡಿಸಿ


Team Udayavani, Nov 7, 2022, 3:55 PM IST

tdy-11

ಚಿಕ್ಕಬಳ್ಳಾಪುರ: ಬಿಜೆಪಿ ಮಹಾ ಸಮುದ್ರದಂತೆ, ಯಾರೇ ಪಕ್ಷಕ್ಕೆ ಬಂದರೂ ಆತ್ಮೀಯವಾಗಿ ಬರಮಾಡಿಕೊಳ್ಳಬೇಕು. ಸಮಾನ ಗೌರವ ನೀಡುವ ಮೂಲಕ ಪಕ್ಷ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ತಾಲೂಕಿನ ಗೊಲ್ಲಹಳ್ಳಿ ಗೇಟ್‌ ಬಳಿ ಭಾನುವಾರ ನಡೆದ ಸ್ಥಳೀಯ ಮುಖಂಡರ ಸಭೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ನಲ್ಲಗುಟ್ಟಪಾಳ್ಯ ಗ್ರಾಪಂ ಸದಸ್ಯೆ ಕಾಂತಮ್ಮ ತಿಪ್ಪಾರೆಡ್ಡಿ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಹೊಸಬರು ಬಂದ ಕಾರಣಕ್ಕೆ ಹಳಬರು ಎದೆಗುಂದಬೇಕಿಲ್ಲ. ಪಕ್ಷದಲ್ಲಿ ಹಿರಿಯ, ಕಿರಿಯ ಎಂಬ ಬೇಧವಿಲ್ಲ. ನದಿಯಲ್ಲಿ ಹಳೇ ನೀರು, ಹೊಸ ನೀರು ಬೆರೆತು ಒಟ್ಟಾಗಿ ಹರಿಯುವಂತೆ ವಲಸಿಗ ಮತ್ತು ಮೂಲ ಎಂಬ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ, ಎಲ್ಲರೂ ಬೆರೆತು ನಡೆಯಬೇಕು. ಹರಿಯೋ ನದಿಯಲ್ಲಿ ನೀರೆಲ್ಲ ಒಂದೇ ಎಂಬ ಮಾತಿನಂತೆ ನಾವೆಲ್ಲ ಮುಂದೆ ಸಾಗೋಣ. ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಕೈ ಜೋಡಿಸೋಣ. ಅಭಿವೃದ್ಧಿ ಪಥದಲ್ಲಿ ಕ್ಷೇತ್ರ ಉತ್ತಂಗ ತಲುಪಲು ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು.

ಅಂಬೇಡ್ಕರ್‌ ಒಂದು ಜಾತಿಗೆ ಸೀಮಿತರಲ್ಲ: ಪ್ರಧಾನಿ ಮೋದಿ ಮಾತು ಕೇಳಲು ಇದೊಂದು ಸದಾವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ಅಂಬೇಡ್ಕರ್‌ ಅವರು ಒಂದು ಜಾತಿಗೆ ಸೀಮಿತರಲ್ಲ. ಅವರು ಈ ಸಮಾಜ ಮತ್ತು ದೇಶದ ಆಸ್ತಿ. ಅದೇ ರೀತಿಯಲ್ಲಿ ವಾಲ್ಮೀಕಿ ರಚನೆ ಮಾಡಿದ ರಾಮಾಯಣ ಒಂದು ಜಾತಿಗೆ ಸೀಮಿತವಾಗಿಲ್ಲ. ಮಾನವ ಕುಲಕ್ಕೆ ಸಮಾಜ ಸುಧಾರಣೆ ಬಯಸಿದ ಮಹನೀಯರೆಲ್ಲರೂ ಸಮಾಜದ ಆಸ್ತಿ ಎಂಬುದನ್ನು ಮರೆಯಬಾರದು ಎಂದರು.

ವಿಶ್ವ ಮಾನವರಾಗಿ: ಸಾವಿರಾರು ವರ್ಷಗಳ ಹಿಂದೆಯೇ ಇವರು ಸಮಾನತೆ ಸಾರಿದವರು, ಹಾಗಾಗಿಯೇ ಇವರು ಮಹನೀಯರಾಗಿದ್ದಾರೆ. ಇದೇ ಗುಂಪಿಗೆ ಸೇರಿದವರು ಕೆಂಪೇಗೌಡರು. ವಿಶ್ವ ಮಾನವರಾಗಿ ಸಾಯಬೇಕು ಎಂದಿದ್ದಾರೆ ಕುವೆಂಪು. ಸಮಾಜಕ್ಕೆ ನಮ್ಮ ಕೊಡುಗೆ ನೀಡಿದಾಗ ಮಾತ್ರ ನಾವು ವಿಶ್ವ ಮಾನವರಾಗಲು ಸಾಧ್ಯ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ಹೇಳಿದರು. ನಿಸ್ವಾರ್ಥ ಸೇವೆ ಸಿದ್ಧಾಂತದಡಿ ಕೆರೆಗಳನ್ನು ಕಟ್ಟಿದರು ಕೆಂಪೇಗೌಡರು, ಆ ಕಾಲದಲ್ಲೇ ಪರಿಸರ ಸಂರಕ್ಷಣೆ ಮಾಡಿದವರು ಕೆಂಪೇಗೌಡರು. ಇಂತಹ ಮಹನೀಯರಿಗೆ ರಾಜ್ಯ ಸರ್ಕಾರ ಕೆಂಪೇಗೌಡರ ಪ್ರತಿಮೆ ಸ್ಥಾಪಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ನಿಗಮದ ನಿರ್ದೇಶಕರಾಗಿ ರಾಜಣ್ಣ: ಕೆಂಪೇಗೌಡರ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ನಿಗಮದ ಮೊದಲ ನಿರ್ದೇಶಕರಾಗಿ ಆವುಲಗುರ್ಕಿ ರಾಜಣ್ಣ ನೇಮಕವಾಗಿದ್ದಾರೆ. 56 ವರ್ಷಗಳ ಕಾಲ ಆಡಳಿತ ನಡೆಸಿದವರು ಕೇವಲ ಸ್ವಾರ್ಥಕ್ಕಾಗಿ ಅಧಿಕಾರ ಅನುಭವಿಸಿದರೆ, ಬಿಜೆಪಿ ಸರ್ಕಾರ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ವಿರೋಧ ಪಕ್ಷದವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿರುಚುತ್ತಾರೆ ಎಂದು ಆರೋಪಿಸಿದರು.

ಕಳೆದ 56 ವರ್ಷದಿಂದ ಸುಳ್ಳು ಹೇಳುತ್ತಲೇ ಬಲಹೀನ ವರ್ಗಗಳ ಮತ ಪಡೆದಿದ್ದಾರೆ. ಆದರೆ, ಅವರಿಗೆ ಮೀಸಲಾತಿ ನೀಡಲು ಸಾಧ್ಯವಾಗಲಿಲ್ಲ. 56 ವರ್ಷ ಅಧಿಕಾರ ನಡೆಸಿದವರು ನೀಡದ ಮೀಸಲಾತಿ ಬಿಜೆಪಿ ಸರ್ಕಾರ ನೀಡಿದೆ ಎಂದು ಹೇಳಿದರು.

ಗುರುವಂದನಾ ಕಾರ್ಯಕ್ರಮ: ಮೀಸಲಾತಿಗೆ ಹೋರಾಟ ಮಾಡಿದ ಶ್ರೀಪ್ರಸನ್ನಾನಂದ ಶ್ರೀಗಳಿಗೆ ಜಿಲ್ಲೆಯಲ್ಲಿ ಬೃಹತ್‌ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗುವುದು. ಇದೇ ಕಾರ್ಯಕ್ರಮದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸಲಾಗುವುದು. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಮೀಸಲಾತಿ ಸರಿಪಡಿಸಲು ಸಿಎಂ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಭಾಗವನ್ನು ಕೈಗಾರಿಕಾ ಪ್ರದೇಶ ಮಾಡಲಾಗುವುದು. ಇದಕ್ಕೆ ಅಗತ್ಯ ಭೂಮಿ ವಶಕ್ಕೆ ಪಡೆಯಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್‌, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ (ಬಾಬು), ಮುನಿರಾಜು, ಜೆ.ಕೆ.ರೆಡ್ಡಿ, ಆವುಲಕೊಂಡರಾಯಪ್ಪ, ರಾಜಣ್ಣ, ಮಿಲ್ಟನ್‌ ವೆಂಕಟೇಶ್‌, ರಾಮಣ್ಣ, ಮೂರ್ತಿ, ಜಾಲಪ್ಪ, ನರಸಿಂಹಯ್ಯ, ವೆಂಕಟ ರಮಣಪ್ಪ ಹಾಜರಿದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.