ಚಿಕ್ಕಬಳ್ಳಾಪುರದಲ್ಲಿ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಲಕ್ಷಣ,ಬೆಂಗಳೂರಿನಲ್ಲಿ ಚಿಕಿತ್ಸೆ:ಆರ್ ಲತಾ


Team Udayavani, May 20, 2021, 6:43 PM IST

Black Fungus Symptoms in Chikkaballapura

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಬ್ಬರಿಗೆ ಬ್ಲಾಕ್ ಫಂಗಸ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳನ್ನು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ  ಕೋವಿಡ್ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಲಕ್ಷಣ ಕಂಡುಬಂದಿದ್ದು ಅವರನ್ನು ತ್ವರಿತವಾಗಿ ಚಿಕಿತ್ಸೆ ಒದಗಿಸಲು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಇಂತಹ ಲಕ್ಷಣಗಳು ಕಂಡು ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಕೋವಿಡ್: ಒಬ್ಬೊಬ್ಬರು ಒಂದೊಂದು ರೀತಿ ಮಾಸ್ಕ್ ಧರಿಸ್ತಾರೆ…ಅಧ್ಯಯನ ವರದಿಯಲ್ಲೇನಿದೆ?

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಅನೇಕ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಜನತಾ ಕರ್ಫ್ಯೂ ನಂತರ ಇಂದಿನಿಂದ ಜಿಲ್ಲಾದ್ಯಂತ ಸಂಪೂರ್ಣವಾಗಿ ಲಾಕ್‍ಡೌ ನ್ ಘೋಷಣೆ ಮಾಡಲಾಗಿದೆ ಜಿಲ್ಲೆಯ ಜನರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದ ಜಿಲ್ಲಾಧಿಕಾರಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮನೆಯಲ್ಲಿದ್ದು ಜಿಲ್ಲೆಯನ್ನು ಸೋಂಕು ಮುಕ್ತ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ 900 ಕ್ಕೂ ಅಧಿಕ ಸೋಂಕಿತರಿದ್ದಾರೆ. ಆ ಪೈಕಿ 600ಕ್ಕೂ ಅಧಿಕ ಮಂದಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೇ, ಅಷ್ಟು ಜನರಿಗೆ ಪ್ರತ್ಯೇಕವಾಗಿ ಶೌಚಾಲಯ ಮತ್ತಿತರೆ ಸೌಲಭ್ಯಗಳ ಕೊರತೆಯಿದೆಯೆಂಬ ಅನುಮಾನ ಕಾಡುತ್ತಿದೆ ಹೀಗಾಗಿ ರ್ಯಾಂಡಮ್ ಆಗಿ ಸೋಂಕಿತರ ಮನೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಒಂದು ವೇಳೆ ಸೌಲಭ್ಯವಿದ್ದರೇ ಹೋಂ ಐಸೋಲೇಷನ್‍ನ ಲ್ಲಿ ಚಿಕಿತ್ಸೆ ಪಡೆಯಲಿ ಇಲ್ಲವೆಂದರೇ ಕೋವಿಡ್ ಕೇರ್ ಸೆಂಟರ್‍  ಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಪ್ರತಿ ತಾಲೂಕುಗಳಿಗೆ ಎರಡು ಬಸ್ ಸೌಲಭ್ಯ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರಿಗೆ ಸೂಕ್ತ ರೀತಿಯ ಚಿಕಿತ್ಸೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಈಗಾಗಲೇ 10 ಸಾವಿರ ಬೆಡ್‍ಗಳ ವ್ಯವಸ್ಥೆ ಮಾಡಿಕೊಂಡಿದ್ದು ಹೋಂ ಐಸೋಲೇಷನ್‍ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಮನೆಯಲ್ಲಿ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯದ ವ್ಯವಸ್ಥೆ ಇರುವುದಿಲ್ಲವೆಂದು ಖಾತ್ರಿ ಆದರೇ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಲು ಪ್ರತಿಯೊಂದು ತಾಲೂಕು ಕೇಂದ್ರಗಳಿಗೆ ತಲಾ 2 ಬಸ್‍ಗಳ ಸೌಲಭ್ಯವನ್ನು ಒದಗಿಸಲಾಗಿದೆ ಆದಿಚುಂಚನಗಿರಿ ಮಠದ 6 ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಟ್ರಸ್ಟ್ ಮೂಲಕ 6 ಬಸ್‍ಗಳ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತುರ್ತು ವಾಹನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಈಗಾಗಲೇ ಪ್ರತಿ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತುರ್ತು ವಾಹನಗಳ ಸೌಲಭ್ಯವನ್ನು ಒದಗಿಸಲಾಗಿದೆ ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಕೋವಿಡ್ ಸೋಂಕಿತರಿಗೆ ಮೆಡಿಕಲ್ ಕಿಟ್ ಅಭಾವ ಆಗದಂತೆ ಎಚ್ಚರಿವಹಿಸಲು ಕಟ್ಟುನಿಟ್ಟಿನಿಂದ ನಿರ್ದೇಶನ ನೀಡಲಾಗಿದೆ 20 ದಿನಗಳಿಗೆ ಆಗುವ ಔಷಧಿಗಳನ್ನು ಮೀಸಲಿಡಲು ತಾಕೀತು ಮಾಡಿ ಸ್ಥಳೀಯ ಮಟ್ಟದಲಲಿ ಅಗತ್ಯ ಔಷಧಿಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿಕೋವಿಡ್  ಸೋಂಕು ತಡೆಗಟ್ಟಲು ರಚಿಸಿರುವ ಕೊರೊನಾ ಕಾರ್ಯಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಕಾರ್ಯಪಡೆಗಳ ಸದಸ್ಯರು ವಾಟ್ಸ್ಯಾಪ್ ಗ್ರೂಪ್ ಮಾಡಿಕೊಂಡು ಅಗತ್ಯ ಸೇವೆಗಳನ್ನು ಒದಗಿಸಲಾಗುತ್ತದೆ ಹಾಗೂ ಪ್ರತಿ ದಿನ ಕೊರೊನಾ ಸೋಂಕಿತರ ಮನೆಗಳಿಗೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸುವ ಕೆಲಸವನ್ನು ಮಾಡುತ್ತಿದ್ದೇವೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್

ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ರೇಷ್ಮೆ ಗೂಡು ನಾಶವಾಗುತ್ತದೆ ಎಂಬ ದೃಷ್ಠಿಕೋನದಿಂದ ಶಿಡ್ಲಘಟ್ಟದ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಕೇವಲ 2 ಗಂಟೆಯ ಕಾಲ ವ್ಯಾಪಾರ ಮತ್ತು ವಹಿವಾಟಿಗೆ ಅವಕಾಶ ಕಲ್ಪಿಸಿದ್ದೇವೆ ನಾನು ಸಹ ಕೋವಿಡ್ ಸೋಂಕು ನಿಯಂತ್ರಿಸಲು ಮಾರುಕಟ್ಟೆ ಬಂದ್ ಸೂಕ್ತ ಅಂದುಕೊಂಡಿದ್ದೆ ಆದರೆ ರೇಷ್ಮೆ ಬೆಳೆಗಾರರಿಗೆ ತೊಂದರೆ ಆಗಬಾರದೆಂಬ ಕಾರಣದಿಂದ ವ್ಯಾಪಾರ ವಹಿವಾಟಿಗೆ ಅವಕಾಶ ಒದಗಿಸಲಾಗಿದೆಯೆಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರಘುನಂದನ್,ತಾಲೂಕು ನೋಡಲ್ ಅಧಿಕಾರಿ ಮೊಹ್ಮದ್ ಅತೀಖ್‍ಉಲ್ಲಾ ಶರೀಫ್,ಶಿಡ್ಲಘಟ್ಟ ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಪಂ ಇಓ ಚಂದ್ರಕಾಂತ್, ನಗರಸಭೆಯ ಪೌರಾಯುಕ್ತ ಶ್ರೀನಿವಾಸ್,ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ,ಶಿಡ್ಲಘಟ್ಟ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ಮುರಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಪಿಡಿಓಗಳು, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೋವಿಡ್ ಸೋಂಕಿತರ ಯೋಗಕ್ಷೇಮವನ್ನು ವಿಚಾರಿಸಿದರು

ಇದನ್ನೂ ಓದಿ : ಯಾಸ್ ಚಂಡಮಾರುತ : ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಿ : ಅಧಿಕಾರಿಗಳಿಗೆ ದೀದಿ ಸೂಚನೆ

ಟಾಪ್ ನ್ಯೂಸ್

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.