ಜನರ ತೀರ್ಪಿಗೆ ತಲೆಬಾಗುವೆ, ಪಕ್ಷ ಸಂಘಟನೆಗೆ ಶ್ರಮಿಸುವೆ
ಶಿಡ್ಲಘಟ್ಟ ನಗರ ಮಾದರಿಯಾಗಿ ಪರಿವರ್ತನೆಗೆ ಕಾಂಗ್ರೆಸ್ ಬೆಂಬಲಿಸಿ: ವಿ.ಮುನಿಯಪ್ಪ
Team Udayavani, May 27, 2019, 1:22 PM IST
ಶಿಡ್ಲಘಟ್ಟ ನಗರಸಭೆಯ ವಾರ್ಡ್ ಸಂಖ್ಯೆ 6ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರಾಜು ಪರವಾಗಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಮುನಿಯಪ್ಪ ಪ್ರಚಾರ ನಡೆಸಿದರು.
ಶಿಡ್ಲಘಟ್ಟ: ಲೋಕಸಭಾ ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗಿ ಪಕ್ಷ ಸಂಘಟನೆ ಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಶಾಸಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ತಿಳಿಸಿದರು.
ನಗರದಲ್ಲಿ ವಾರ್ಡ್ ಸಂಖ್ಯೆ 6ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಕೀಲ ಮುನಿರಾಜು ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸಹಿತ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಗಲಿರುಳು ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನ ವರಿಕೆ ಮಾಡಿಕೊಟ್ಟರೂ ಸಹ ಮತದಾರರು ಬಿಜೆಪಿಗೆ ಆಶೀರ್ವದಿಸಿದ್ದಾರೆ. ಜನರ ನಿರ್ಧಾರ ಮತ್ತು ತೀರ್ಪಿಗೆ ತಲೆಬಾಗಿ ಪಕ್ಷ ಸಂಘಟನೆ ಮಾಡಲು ತೊಡಗುತ್ತೇವೆ ಎಂದರು.
ವಸತಿ ಸೌಲಭ್ಯ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿಯಾಗಿ ಪರಿ ವರ್ತನೆ ಮಾಡಲು ಈಗಾಗಲೇ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸಲಾಗಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ಸಹಿತ ಅನೇಕ ಕ್ಷೇತ್ರಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
ನಗರದಲ್ಲಿ ಬಡವರಿಗಾಗಿ ಉಚಿತವಾಗಿ 2 ಸಾವಿರ ನಿವೇಶನಗಳನ್ನು ವಿತರಿಸಲಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಮೂಲಕ 140 ಮನೆಗಳನ್ನು ನಿರ್ಮಿಸಿ ವಿತರಿಸಲಾಗಿದ್ದು, ಎಲ್ಲಾ ವಸತಿಹೀನರಿಗೆ ವಸತಿ ಸೌಲಭ್ಯ ಕಲ್ಪಿಸುವುದೇ ತಮ್ಮ ಮುಖ್ಯ ಗುರಿ ಎಂದರು.
ಕುಡಿವ ನೀರಿನ ಸಮಸ್ಯೆಗೆ ಪರಿಹಾರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾ ಗಿದೆ. ಜಲಮೂಲಗಳನ್ನು ಅಭಿವೃದ್ಧಿಗೊಳಿ ಸುವ ಕಾರ್ಯ ಪ್ರಗತಿಯಲ್ಲಿದ್ದು, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸುವುದಾಗಿ ಹೇಳಿದರು.
ನಗರದ ವಿವಿಧ ವಾರ್ಡ್‌ಗಳಲ್ಲಿ ಗುಣಮಟ್ಟದ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಲಾಗಿದೆ. ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಂದರ ಮತ್ತು ಸ್ವಚ್ಛ ಶಿಡ್ಲಘಟ್ಟ ನಗರವಾಗಿ ಪರಿವರ್ತನೆ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ವಾರ್ಡ್ ಸಂಖ್ಯೆ 06ರಲ್ಲಿ ಯುವ ವಕೀಲ ಮುನಿರಾಜುಗೆ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಶಾಶ್ವತ ಅಭಿವೃದ್ಧಿ ಕಾಮಗಾರಿ ನಡೆಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ವಕೀಲ ಮುನಿರಾಜು, ಮುಖಂಡರಾದ ಎಸ್.ರಹಮತುಲ್ಲಾ, ಹಸೇನ್ ಖಾನ್, ಜಿಪಂ ಮಾಜಿ ಅಧ್ಯಕ್ಷ ಎನ್.ಮುನಿಯಪ್ಪ, ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಳೇ ರಘು, ಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.