ಚಿಕ್ಕಬಳ್ಳಾಪುರ ಜಿಲ್ಲೆಯ ಸಮಗ್ರ ಅಭಿವೃಧ್ಧಿಗಾಗಿ ಅಗತ್ಯ ನೆರವು: ಬಿಎಸ್ ವೈ ಭರವಸೆ
Team Udayavani, Feb 19, 2023, 9:49 PM IST
ಚಿಕ್ಕಬಳ್ಳಾಪುರ: ರಾಜ್ಯದ ಆರ್ಥಿಕ ಸ್ಥಿತಿಯ ಉತ್ತಮ ನಿರ್ವಹಣೆಯ ಜೊತೆಗೆ ದೀರ್ಘಕಾಲಿನ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಅತ್ಯುತ್ತಮವಾದ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃಧ್ಧಿಗೆ ಯಾವುದೇ ರೀತಿಯ ಕೊರತೆಯಿಲ್ಲದೆ ಅನುದಾನವನ್ನು ನೀಡಿದ್ದಾರೆ ಮುಂದೆಯೂ ಜಿಲ್ಲೆಯ ಸಮಗ್ರವಾಗಿ ಅಭಿವೃಧ್ಧಿಗೆ ಸರ್ಕಾರ ನೆರವು ನೀಡುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀನಿವಾಸ್ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಜಿಲ್ಲೆಯ ಅಭಿವೃಧ್ಧಿಗೆ ವಿಶೇಷ ಕಾಳಜಿವಹಿಸಿದ್ದಾರೆ ಜಿಲ್ಲೆಗೆ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದೇವೆ ಮುಂದೆಯೂ ಜಿಲ್ಲೆಯ ಅಭಿವೃಧ್ಧಿಗೆ ಪೂರಕವಾಗಿರುವ ಯೋಜನೆಗಳಿಗೆ ಅಗತ್ಯ ಅನುದಾನ ಮತ್ತು ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ಸ್ಪಷ್ಟಪಡಿಸಿದರು.
ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿಗೆ, ದುರ್ಬಲ ವರ್ಗ, ಮಹಿಳೆಯರ, ಯುವಜನರ ಶ್ರೇಯೋಭಿವೃದ್ಧಿಗೆ ಬಜೆಟ್‍ನಲ್ಲಿ ಆದ್ಯತೆ ನೀಡಲಾಗಿದೆ ನಮ್ಮ ಅವಧಿಯಲ್ಲಿ ಧಾರ್ಮಿಕ ಕ್ಷೇತ್ರಗಳ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು ಮಠಮಾನ್ಯಗಳಿಗೆ ಸಾವಿರಾರು ಕೋಟಿ ರೂಗಳ ಅನುದಾನವನ್ನು ನೀಡಿದ್ದೇನೆ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರವು ಸಹ ಮಠಮಾನ್ಯಗಳಿಗೆ 1 ಸಾವಿರ ಕೋಟಿ ರೂಗಳ ಅನುದಾನವನ್ನು ಮೀಸಲಿಟ್ಟಿದ್ದಾರೆ ಪ್ರತಿಯೊಬ್ಬರು ಧಾರ್ಮಿಕ ಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದರು.
ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವುದು ಮತ್ತು ಅದರಲ್ಲಿ ಭಾಗವಹಿಸುವುದರಿಂದ ನಮ್ಮ ವ್ಯಕ್ತಿತ್ವವನ್ನು ಪರಿಚಯಿಸುತ್ತದೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಿ ಧಾರ್ಮಿಕ ಸೇವಾ ಮನೋಭಾವ ಬೆಳೆಸಿಕೊಂಡಿರುವ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಮುನಿರಾಜು ಅವರಿಗೆ ತಾವೆಲ್ಲರು ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲ ನೀಡಿ ಆಶೀರ್ವಾದ ಮಾಡಿ ಅವರ ರಾಜಕೀಯ ಭವಿಷ್ಯವನ್ನು ಉಜ್ವಲಗೊಳಿಸಬೇಕೆಂದು ಹೇಳುವ ಮೂಲಕ ಪರೋಕ್ಷವಾಗಿ ಮುನಿರಾಜು ಪರವಾಗಿ ಬ್ಯಾಟಿಂಗ್ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀರ್ಥಕ್ಷೇತ್ರಗಳ ಅಭಿವೃಧ್ಧಿಗಾಗಿ ವಿಶೇಷ ಒತ್ತು ನೀಡಿದ್ದಾರೆ ಅಜ್ಮೀರ್ ದರ್ಗಾ, ಸಿಕ್ ಬಾಂಧವರ ಸ್ವರ್ಣಮಂದಿರ,ಕ್ರೈಸ್ತ ಬಾಂಧವರ ವೆಲಂಕನಿ,ಬುದ್ದ ಧರ್ಮದವರ ಆರಾಧನೆ ಕೇಂದ್ರವನ್ನು ಅಭಿವೃಧ್ಧಿಗೊಳಿಸಲು ಮುಂದಾಗಿದ್ದಾರೆ ಸಮಾಜದಲ್ಲಿರುವ ಪ್ರತಿಯೊಬ್ಬರು ಪ್ರೀತಿ ವಿಶ್ವಾಸದಿಂದ ಜೀವನ ನಡೆಸಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಮಾಜಸೇವಕ ಮುನಿರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಭಾರಿ ಬಿಕ್ಕಟ್ಟು: ನಾವು ದಿವಾಳಿಯಾಗಿದ್ದೇವೆ ಎಂದ ಪಾಕ್ ರಕ್ಷಣಾ ಸಚಿವ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.