ಉಪ ಚುನಾವಣೆಗೆ ಅಧಿಸೂಚನೆ ಪ್ರಕಟ: ನೀತಿ ಸಂಹಿತೆ ಜಾರಿ


Team Udayavani, Nov 12, 2019, 3:00 AM IST

upachunavanege

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ ಬರುವ ಡಿ.5 ರಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನ.11 ರಿಂದ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಸಭೆ ನಡೆಸಲಾಗಿದೆ: ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಜಿಲ್ಲೆಯಲ್ಲಿ ಉಪಚುನಾವಣೆ ಘೋಷಣೆಯಾದ ತಕ್ಷಣದಿಂದ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಲಾಗಿದ್ದು, ಯಾರೇ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂ ಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕ್ಷೇತ್ರದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಕರೆದು ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಅಭ್ಯರ್ಥಿಗಳ ಖರ್ಚು, ವೆಚ್ಚಗಳ ಸಲ್ಲಿಕೆ ಹಾಗೂ ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ತಿಳಿಸಲಾಗಿದೆ ಎಂದರು.

ಡಿ.9ರಂದು ಮತ ಎಣಿಕೆ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರದಿಂದಲೇ ಅಧಿಸೂಚನೆ ಹೊರಡಿಸಿದ್ದು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನ.18 ರ ಸೋಮವಾರ ಕೊನೇ ದಿನವಾಗಿದೆ. ನ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ರಂದು ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕವಾಗಿರುತ್ತದೆ.

ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ಕ್ಕೆ ನಾಮಪತ್ರ ಸ್ವೀಕರಿಸಲಾಗುತ್ತದೆ. ಚುನಾವಣಾಧಿಕಾರಿಗಳಾಗಿ ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಾಗಿ ಚಿಕ್ಕಬಳ್ಳಾಪುರ ತಾಲೂಕು ತಹಶೀಲ್ದಾರ್‌ ಮತ್ತು ಗೌರಿಬಿದನೂರು ತಾಲೂಕಿನ ತಹಶೀಲ್ದಾರ್‌ ಅವರನ್ನು ನೇಮಕ ಮಾಡಲಾಗಿದೆ. ಡಿ.5 ರಂದು ಮತದಾನ ನಡೆಯಲಿದ್ದು, ಡಿ.9 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

21 ಸೆಕ್ಟರ್‌ ಅಧಿಕಾರಿಗಳ ನೇಮಕ: ಉಪ ಚುನಾವಣೆಯನ್ನು ಅತ್ಯಂತ ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾದ್ಯಂತ 21 ಮಂದಿ ಸೆಕ್ಟರ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಚೆಕ್‌ ಪೋಸ್ಟ್‌ಗಳಲ್ಲಿ 10 ಮಂದಿಯವುಳ್ಳ 3 ತಂಡ ರಚಿಸಲಾಗಿದೆ. 3 ವಿಡಿಯೋ ಕಣ್ಗಾವಲು ತಂಡ, 2 ವಿಡಿಯೋ ಪರಿವೀಕ್ಷಣೆ ತಂಡ, ಸಿವಿಜಿಲ್‌ಗೆ 3 ತಂಡ ರಚಿಸಲಾಗಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಹಾಯವಾಣಿ 1950 ಸಂಖ್ಯೆಯನ್ನು 24 ಗಂಟೆ ಚಾಲ್ತಿಯಲ್ಲಿಡಲಾಗುತ್ತದೆ.

ಉಪ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಬಹುದೆಂದರು. ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌ ಮಾತನಾಡಿ, ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಅನುಷ್ಠಾನ ಉತ್ತಮವಾಗಿ ನಡೆದಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿದ್ದ ಸಾಕಷ್ಟು ತಪ್ಪು ತಿದ್ದುಪಡಿ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಉಪಚುನಾವಣೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಉಪ ಚುನಾವಣೆ ಸಂಬಂಧ ಜಿಪಂ ಸ್ವೀಪ್‌ ಸಮಿತಿ ವತಿಯಿಂದ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕ್ಷೇತ್ರದ ಮತದಾರರು ಕಡ್ಡಾಯಗಿ ಮತದಾನ ಮಾಡಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಚುನಾವಣಾ ತಹಶೀಲ್ದಾರ್‌ ಲಕ್ಷ್ಮೀನಾರಾಯಣರೆಡ್ಡಿ ಮತ್ತಿತರರಿದ್ದರು.

ಉಪ ಕದನಕ್ಕೆ 2,00622 ಮತದಾರರು: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 9,9,825 ಪುರುಷ ಮತದಾರರು, 1,00776 ಮಹಿಳೆಯರು ಹಾಗೂ 21 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 2,00622 ಮತದಾರರಿದ್ದಾರೆ. ಸಾರ್ವಜನಿಕರು ಯಾವುದೇ ಗೊಂದಲಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 08156-1950 (ಟೋಲ್‌ ಫ್ರೀ)ಯನ್ನು ಸಂಪರ್ಕಿಸಬಹುದು. ಪ್ರತಿ ಚುನಾವಣೆಯಂತೆ ಈ ಚುನಾವಣೆಗೆ ವಿವಿ ಪ್ಯಾಟ್‌, ಇವಿಎಂ ಮತಯಂತ್ರ ಉಪಯೋಗಿಸಲಾಗುತ್ತದೆ ಜಿಲ್ಲಾಧಿಕಾರಿ ಆರ್‌.ಲತಾ ಮಾಹಿತಿ ನೀಡಿದರು.

ಮೊದಲ ದಿನ ನಾಮಪತ್ರ ಸಲ್ಲಿಕೆ ಇಲ್ಲ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪ ಚುನಾವಣೆಗೆ ಆಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರಗಳ ಸಲ್ಲಿಕೆಯ ಕಾರ್ಯ ಆರಂಭಗೊಂಡರೂ ಮೊದಲ ದಿನ ಸೋಮವಾರ ಯಾರೂ ನಾಮಪತ್ರ ಸಲ್ಲಿಸಿಲ್ಲ ಎಂದು ಚುನಾವಣಾ ಅಧಿಕಾರಿ ಎ.ಎನ್‌.ರಘುನಂದ್‌ ತಿಳಿಸಿದ್ದು ನ.18 ನಾಮಪತ್ರ ಸಲ್ಲಿಕೆಗೆ ಕೊನೇ ದಿನ ಎಂದರು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.