ಚಿಕ್ಕಬಳ್ಳಾಪುರ ಜಿಲ್ಲೆಗೆ 15ರ ಸಂಭ್ರಮ
Team Udayavani, Aug 24, 2021, 3:23 PM IST
ಚಿಕ್ಕಬಳ್ಳಾಪುರ: ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಅವರಿಂದ ಚಿಕ್ಕಬಳ್ಳಾಪುರ ಜಿಲ್ಲೆ ಉದಯವಾಗಿ 14 ವರ್ಷ ಕಳೆದರೂ ನಿರೀಕ್ಷಿತ
ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿಲ್ಲ, ಜಿಲ್ಲೆಯ ಜನ ಪ್ರತಿನಿಧಿಗಳ ಪಕ್ಷಾತೀತವಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ ಕೈಜೋಡಿ ಸಬೇಕೆಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷಮುನೇಗೌಡ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಆಗಿ 15 ವರ್ಷಗಳ ಸಂಭ್ರಮದ ಅಂಗವಾಗಿ ಜಿಲ್ಲಾ ಜೆಡಿಎಸ್ ಪಕ್ಷದಿಂದ ನಗರದ ಕೋದಂಡಸ್ವಾಮಿ ದೇವಾಲಯದಲ್ಲಿ
ಅಭಿಷೇಕ ಮಾಡಿ, ಬಲಮರಿ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 14 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರವನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಿ, ಅನುದಾನ
ಬಿಡುಗಡೆ ಮಾಡಿದ್ದರಿಂದ ಕಚೇರಿಗಳು ಸ್ಥಾಪನೆಗೊಂಡಿವೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆಯು ಅಭಿವೃದ್ಧಿ ಹೊಂದಿಲ್ಲ,ಈನಿಟ್ಟಿನಲ್ಲಿ
ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿ ಬಾಕಿ ಉಳಿದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ:ತಮಿಳುನಾಡಿನಿಂದ ರಾಜ್ಯಕ್ಕೆ ಬಸ್ ಸಂಚಾರ ಆರಂಭ
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೂಪಿಸಿದ್ದ ಯೋಜನೆ ಜಾರಿಗೊಳಿಸಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು, ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಗೆ ಎಚ್.ಎನ್.ವ್ಯಾಲಿಯ ತ್ಯಾಜ್ಯ ನೀರು ಎರಡು ಹಂತದಲ್ಲಿ ಶುದ್ಧೀಕರಿಸಿ ಅವೈಜ್ಞಾನಿವಾಗಿ ಹರಿಸಲಾಗುತ್ತಿದೆ. ಮೂರು ಹಂತದಲ್ಲಿ ಶುದ್ಧೀಕರಿಸಿ ಜಿಲ್ಲಾ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಪಂ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಕೆ.ಸಿ.ರಾಜಕಾಂತ್, ಕಿಸಾನ್‌ಕೃಷ್ಣಪ್ಪ, ನಗರಸಭೆಯ ಉಪಾಧ್ಯಕ್ಷೆ ವೀಣಾರಾಮು, ನಗರಸಭೆಯ ಸದಸ್ಯ ಮಟ್ಟಮಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿರಾಜು, ಹಿರಿಯ ಮುಖಂಡರಾದ ಸಾಕ್, ಸೈಯದ್ ನಯಾಝ್, ಸೈಯದ್ ಅನ್ವರ್ , ಜೆಡಿಎಸ್ ನಗರ ಘಟಕದ ಅಧ್ಯಕ್ಷ ಬಂಡಲ್ ಶ್ರೀನಿವಾಸ್ ಇದ್ದರು.
ವರಿಷ್ಠರು ಒಪ್ಪಿದ್ರೆ ಸ್ಪರ್ಧೆ
ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರದ ಜನ ಬಯಸಿದರೆ ಪಕ್ಷದ ವರಿಷ್ಠರು ಅವಕಾಶ ಕಲ್ಪಿಸಿದರೆ ಮತ್ತೂಮ್ಮೆಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ, ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನೀಡುವ ಆದೇಶ ಪಾಲಿಸುತ್ತೇವೆ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.