ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಸಿಮೆಂಟ್ ಲಾರಿ: ತಪ್ಪಿದ ಅವಗಢ
Team Udayavani, Jan 4, 2020, 2:16 PM IST
ಚಿಕ್ಕಬಳ್ಳಾಪುರ: ಸಿಮೆಂಟ್ ಮೂಟೆಗಳನ್ನು ಹೊತ್ತು ಹೊರಟ್ಟಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಚಿಕ್ಕಬಳ್ಳಾಪುರ ಹೊರ ವಲಯದ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯ ಸಮೀಪ ಶನಿವಾರ ನಡೆದಿದೆ.
ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಬರುವಾಗಈ ಘಟನೆ ಸಂಭವಿಸಿದೆ. ಲಾರಿ ಇದ್ದಕ್ಕಿದ್ದಂತೆ ಮುಗುಚಿ ಬಿದ್ದು ಸಂಪೂರ್ಣ ಉಲ್ಟಾ ಆಗಿದೆ. ಆಶ್ಚರ್ಯಕರ ರೀತಿಯಲ್ಲಿ ಲಾರಿ ಚಾಲಕ ಖಾಸಿಂ ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿರುವ ಚಾಲಕ ಹಾಗೂ ಕ್ಲೀನರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸಿಮೆಂಟ್ ತುಂಬಿದ್ದ ಲಾರಿ ಕಡಪದಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ನಂದಿ ಕ್ರಾಸ್ ಸರ್ವಿಸ್ ರಸ್ತೆಯಿಂದ ಬೆಂಗಳೂರು ಕಡೆಗೆ ಬರುವಾಗ ಹೆದ್ದಾರಿಯ ಉಬ್ಬು ಹತ್ತುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಮಂದೆ ರಸ್ತೆ ಉಬ್ಬು ಹತ್ತಬೇಕಿದ್ದ ಲಾರಿ ಏಕಾಏಕಿ ಹಿಂದಕ್ಕೆ ಬಂದು ಪಲ್ಟಿಯಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.