ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ


Team Udayavani, Feb 22, 2021, 2:30 PM IST

ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಒತ್ತುವರಿ ಮಾಡಲಾಗಿರುವ ರಾಜಕಾಲುವೆಯನ್ನು ಒಂದು ವಾರದೊಳಗಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಭಾನುವಾರ ಮುಂಜಾನೆ ಬೋದಗೂರು ಗ್ರಾಮದಲ್ಲಿ ಸಂಚರಿಸಿ, ಆಶ್ರಯ ಯೋಜನೆಯಡಿಮಂಜೂರಾದ ನಿವೇಶನ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ರಾಜ ಕಾಲುವೆಗಳಒತ್ತುವರಿ ವೀಕ್ಷಿಸಿ ವಾರದೊಳಗಾಗಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆಗಡುವು ನೀಡಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಬೆಳ್ಳಂಬೆಳಗ್ಗೆ ಗ್ರಾಮದ ಕೆಲ ನಾಗರಿಕರು ತಮ್ಮ ಮನೆಗಳ ಮುಂದಿರುವ ಸಮಸ್ಯೆಗಳ ಕುರಿತು ಮನವಿ ಮಾಡಿದಾಗ, ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಬಗೆಹರಿಸಿದರು. ಮನೆಗಳ ಮುಂದೆ ಕಸಹಾಕದಂತೆ, ಪ್ಲಾಸ್ಟಿಕ್‌ ಬಳಸದಂತೆ ಅರಿವು ಮೂಡಿಸಿ, ಚರಂಡಿಯನ್ನು ಸ್ವಚ್ಚಗೊಳಿಸಲು ಕ್ರಮ  ವಹಿಸಬೇಕು. ಒಗ್ಗಟ್ಟಿನಿಂದ ಹಳ್ಳಿಯ ಸ್ವತ್ಛತೆಯ ಕಡೆಯೂ ಜನರು ಗಮನ ಹರಿಸಬೇಕು ಎಂದರು.

ಕಮಲಮ್ಮ ಭೇಟಿ: ಆರೋಗ್ಯ ಕೇಂದ್ರ ಮತ್ತು ಡೇರಿ, ನರೇಗಾ ಯೋಜನೆಯಡಿನಿರ್ಮಿಸಲಾಗಿರುವ ಹಸು ಮತ್ತು ಕುರಿ ರೆಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ರೇಷ್ಮೆ ಕೃಷಿಯಲ್ಲಿ ಉತ್ತಮ ಸಾಧನೆಗಾಗಿ 2019-20ನೇಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಸಮಿತಿಯಜಿಲ್ಲಾ ಮಟ್ಟದ ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದಿದ ª ಬೋದಗೂರು ಗ್ರಾಮದ 65 ವಯಸ್ಸಿನ ಕಮಲಮ್ಮ ಅವರನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿಗಳು, ರೇಷ್ಮೆ ಕೃಷಿಯಲ್ಲಿನ ಕಮಲಮ್ಮನವರ ಅನುಭವ ಆಲಿಸಿದರು.

ಇದೇ ಸಂದರ್ಭದಲ್ಲಿ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಆಸಕ್ತಿಯಿಂದ ಪಾಠ ಆಲಿಸಿದರೆ ಪರೀಕ್ಷೆಯಲ್ಲಿ ತೇರ್ಗಡೆ ಸುಲಭ ಎಂದು ಧೈರ್ಯ ತುಂಬಿದರು. ಡಿಡಿಪಿಐ ಜಯರಾಂರೆಡ್ಡಿ, ಕೃಷಿ ಇಲಾಖೆಯಜಂಟಿ ನಿರ್ದೇಶಕಿ ರೂಪಾ, ಡಿಹೆಚ್‌ಐ ಇಂದಿರಾ ಆರ್‌.ಕಬಾಡೆ, ತಹಶೀಲ್ದಾರ್‌ ರಾಜೀವ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರೂಪಾ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಇಂದಿರಾ ಕಬಾಡೆ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ಸೇರಿದಂತೆ ಇತರೆ ಅಧಿಕಾರಿ ಸಿಬ್ಬಂದಿ ಇದ್ದರು.

ಸ್ತ್ರೀಶಕ್ತಿ ಭವನದಲ್ಲಿ ವಾಸ್ತವ್ಯ: ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರೀತಿ ವಾತ್ಸಲ್ಯ ತೋರಿಸಿದ ಬೋದಗೂರು ಗ್ರಾಮಸ್ಥರ ಪ್ರೀತಿಗೆಜಿಲ್ಲಾಧಿಕಾರಿ ಆರ್‌.ಲತಾ ಮನಸೋತರು. ಗ್ರಾಮದ ಸ್ತ್ರೀಶಕ್ತಿ ಭವನದಲ್ಲಿ ವಾಸ್ತವ್ಯ ಮಾಡಿದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಸಾಥ್‌ ನೀಡಿದರು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.