Voters List: ಅಂತಿಮ ಮತದಾರರ ಪಟ್ಟಿ: ಮಹಿಳೆಯರೇ ಮೇಲುಗೈ!
Team Udayavani, Jan 24, 2024, 3:39 PM IST
ಚಿಕ್ಕಬಳ್ಳಾಪುರ: ಕೇಲವೇ ತಿಂಗಳಲ್ಲಿ ಘೋಷಣೆಯಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶ ನಿರ್ಧರಿಸಲಿರುವ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಪುರಷರಗಿತಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಕಂಡು ಬಂದಿದೆ.
ಜಿಲ್ಲೆಯ 5 ಕ್ಷೇತ್ರಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ವರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಅಂತಿಮ ಪಟ್ಟಿ ಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾದ್ಯಂತ 10,49,896 ಮಂದಿ ಮತದಾರರು ಇದ್ದಾರೆ. ಆ ಪೈಕಿ 5,18,151 ಪುರುಷ ಮತದಾರರು ಇದ್ದರೆ ಮಹಿಳಾ ಮತದಾರರು ಬರೋಬ್ಬರಿ 5,31,642 ಮಂದಿ ಇದ್ದಾರೆ.
12,286 ಮಂದಿ ಮತದಾರರು ಸೇರ್ಪಡೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ 18 ವರ್ಷ ತುಂಬಿದ ಬರೋಬ್ಬರಿ 12,286 ಮಂದಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಗೌರಿಬಿದನೂರು ಕ್ಷೇತ್ರದಲ್ಲಿ 2,032,ಬಾಗೇಪಲ್ಲಿ ಕ್ಷೇತ್ರದಲ್ಲಿ 2,397, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 2,593, ಶಿಡ್ಲಘಟ್ಟ ಕ್ಷೇತ್ರದಲ್ಲಿ 2,340 ಹಾಗೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ 2,924 ಮಂದಿಯು ಸೇರ್ಪಡೆಗೊಂಡಿ ದ್ದಾರೆ. ಬರೋಬ್ಬರಿ 11,691 ತಿದ್ದುಪತಿಗಳು ಆಗಿವೆ. ಚಿಂತಾಮಣಿ ಯಲ್ಲಿ ಹಾಗೂ ಚಿಕ್ಕಬಳ್ಳಾಪುರ, ಗೌರಿಬಿದನೂರಲ್ಲಿ ಹೆಚ್ಚು ತಿದ್ದುಪಡಿಗಳಾಗಿವೆ.
ಸಾವಿರ ಪುರುಷರಿಗೆ 1026 ಮಹಿಳೆಯರು! ಜಿಲ್ಲೆಯ ಮತ ದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ ಸರಾಸರಿ 1026 ಮಂದಿ ಮಹಿಳೆಯರು ಇದ್ದಾರೆ. ಆ ಪೈಕಿ ಗೌರಿಬಿದ ನೂರಲ್ಲಿ 1,030, ಬಾಗೇಪಲ್ಲಿ ಕ್ಷೇತ್ರದಲ್ಲಿ 1032, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1,036. ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ 1,009, ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ 1032 ಲಿಂಗಾನುಪಾತ ಕಂಡುಬಂದಿದೆ.
11,978 ಮಂದಿ ಮತದಾರರ ಪಟ್ಟಿಯಿಂದ ಹೊರಕ್ಕೆ! :
ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 11,978 ಮಂದಿ ಮತದಾರರಿಗೆ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ನಮೂನೆ-7ರಲ್ಲಿ ಮರಣ ಹೊಂದಿದೆ. ಹಾಗೂ ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರು ಹೊಂದಿದ ಕಾರಣಗಳಿಗೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಗೌರಿಬಿದನೂರಲ್ಲಿ 2,416, ಬಾಗೇಪಲ್ಲಿಯಲ್ಲಿ 2,508, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 2,795, ಶಿಡ್ಲಘಟ್ಟ ಕ್ಷೇತ್ರದಲ್ಲಿ 1,566 ಹಾಗೂ ಚಿಂತಾಮಣಿ ಕ್ಷೇತ್ರದಲ್ಲಿ 2,693 ಮಂದಿಯನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 19.50 ಲಕ್ಷ ಮತದಾರರು :
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 19,50,443 ಮತದಾರರು ಇದ್ದಾರೆ. ಆ ಪೈಕಿ 9,80,641 ಮಹಿಳೆಯರು ಹಾಗೂ 9,69,538 ಪುರುಷರು ಹಾಗೂ ಇತರೇ 264 ಮಂದಿ ಸೇರಿ ಒಟ್ಟು 19,50,443 ಮಂದಿ ಮತದಾರರು ಇದ್ದಾರೆ. ಆ ಪೈಕಿ ಯಲಹಂಕ ಕ್ಷೇತ್ರದಲ್ಲಿ 4,45,861 ಮಂದಿ ಮತದಾರರು ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ 2,16,824, ದೇವನಹಳ್ಳಿ ಕ್ಷೇತ್ರದಲ್ಲಿ 2,13,408, ನೆಲಮಂಗಲದಲ್ಲಿ 2,18,929 ಹಾಗೂ ಹೊಸಕೋಟೆ ಕ್ಷೇತ್ರದಲ್ಲಿ 2,35,907, ಗೌರಿಬಿದನೂರು ಕ್ಷೇತ್ರದಲ್ಲಿ 2,09,531, ಬಾಗೇಪಲ್ಲಿ ಕ್ಷೇತ್ರದಲ್ಲಿ 2,01,555 ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 2,08,428 ಮಂದಿ ಮತದಾರರು ಇದ್ದಾರೆ.
– ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.