ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ
Team Udayavani, Mar 15, 2022, 12:33 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ. ಶಿವಕುಮಾರ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಬ್ಯಾಂಕ್ವಿಟ್ ಹಾಲ್‌ನಲ್ಲಿ ನಡೆದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಮಾದರಿ ಶಾಲೆ-ಅಂಗನವಾಡಿ ಕೇಂದ್ರಗಳು, ಜಲ ಸಂರಕ್ಷಣಾ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಜಿಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನರೇಗಾ ಯೋಜನೆಯ ಮೂಲಕ ಮಳೆ ನೀರು ಸಂರಕ್ಷಣೆ, ಗ್ರಾಮ ನೈರ್ಮಲ್ಯ ಕಾಪಾಡಲು ವಿಶೇಷ ಕಾಳಜಿ ಮತ್ತು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಜಿಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಅವರು ಗಮನಾರ್ಹ ಸಾಧನೆ ಮಾಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.