![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 29, 2020, 3:59 PM IST
ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾಗೂ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ವತಿಯಿಂದ ಬಿಬಿ ರಸ್ತೆಯ ಮುಖಾಂತರ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ, ರಾಜ್ಯ ಸರ್ಕಾರಗಳ ಧೋರಣೆಯನ್ನು ಖಂಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅನೈತಿಕವಾಗಿ ಅಧಿಕಾರಕ್ಕೆ ಬಂದ ಪರಿಣಾಮ ರಾಜ್ಯದಲ್ಲಿ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಕೋವಿಡ್-19 ಸಂದರ್ಭದಲ್ಲಿ ಜನರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆಂದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕೋನಪಲ್ಲಿ ಕೋದಂಡ, ಮುಖಂಡರಾದ ಯಲುವಹಳ್ಳಿ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ ರೆಡ್ಡಿ, ಲಾಯರ್ ನಾರಾಯಣಸ್ವಾಮಿ, ಬಿ.ಎಸ್.ರಫೀವುಲ್ಲಾ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ್, ರಾಮಕೃಷ್ಣ, ಎಪಿಎಂಸಿ ನಿರ್ದೇಶಕ ಮಿಲ್ಟನ್ ವೆಂಕಟೇಶ, ನಗರಸಭಾ ಸದಸ್ಯರಾದ ಕೆ.ವಿ.ವೆಂಕಟೇಶ, ಚಂದ್ರಶೇಖರ, ಬುಜ್ಜಿ, ಮಮತ ಮೂರ್ತಿ , ದೇವಿಶೇಟ್ಟಿಹಳ್ಳಿ ಗಂಗಧಾರ್, ಮತ್ತಿತರರು ಇದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.