ಚಿಕ್ಕಬಳ್ಳಾಪುರದಲ್ಲಿ ಕೈ ಟಿಕೆಟ್ ಗೊಂದಲ
Team Udayavani, Jan 31, 2023, 3:19 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗೊಂದಲ ಮುಂದುವರಿದಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ ಪ್ರತಿನಿಧಿಸುವ ಸ್ವಕ್ಷೇತ್ರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರೆದಿದೆ.
ಇತ್ತೀಚಿಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರು ಡಾ.ಎಂ.ಸಿ. ಸುಧಾಕರ್ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಚಿರತೆ ಬರಲಿದೆ ಅದನ್ನು ಎದುರಿಸಿ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರಿಗೆ ಸವಾಲ್ ಹಾಕಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಚಿರತೆ,ಪರ್ತೆ ಬಂದರೂ ಸಹ ಅದನ್ನು ಎದುರಿಸಲು ಸಜ್ಜಾಗಿದ್ದೇನೆ ಕ್ಷೇತ್ರದ ಮತದಾರರು ಸ್ವಾಭಿಮಾನಿಗಳಾಗಿದ್ದಾರೆ ಯಾರಿಗೆ ಯಾವ ಸ್ಥಾನ ನೀಡಬೇಕೆಂಬುದನ್ನು ಅವರಿಗೆ ಗೊತ್ತಿಗೆ ಎನ್ನುವ ಮೂಲಕ ಮಾಜಿ ಶಾಸಕ ಡಾ. ಎಂಸಿ ಸುಧಾಕರ್ ಅವರಿಗೆ ಆರೋಗ್ಯ ಸಚಿವರು ಟಾಂಗ್ ನೀಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜು ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಸ್ಪರ್ಧಿಸಬೇಕೆಂದು ಕೆಲ ಕಾಂಗ್ರೆಸ್ ನಾಯಕರು ಅವರ ಮೇಲೆ ಸತತವಾಗಿ ಒತ್ತಡ ಹೇರುತ್ತಿದ್ದಾರೆ.
ಇತ್ತೀಚಿಗೆ ನಡೆದ ಪ್ರಜಾದ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೊತ್ತೂರು ಮಂಜು ಪರವಾಗಿ ಸ್ಥಳೀಯ ಕೆಲ ಕಾಂಗ್ರೆಸ್ ನಾಯಕರು ಬ್ಯಾಟಿಂಗ್ ಮಾಡಿ ರಾಜಕೀಯ ವಲಯದಲ್ಲಿ ಸಂಚಲನ ಸ್ಪಷ್ಟಿಸಿದರು ಅದಕ್ಕೆ ಮತ್ತೂಂದು ಗುಂಪು ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದೆ.
ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರ ಹೇಳಿಕೆ ಸಹಜವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಹಳ ಮಹತ್ವ ಪಡೆದುಕೊಂಡಿದೆ. ಇದು ಯಾವ ಸ್ವರೂಪ ಪಡೆದುಕೊಳ್ಳದೆ ಕೊಳ್ಳುತ್ತದೆ ಎಂಬುದು ಕುತೂಹಲ ಕೆರಳಿಸಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಈಗಾಗಲೇ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್, ಕೆಪಿಸಿಸಿ ಮಾನವಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎನ್.ರಘು ಜಿಪಂ ಮಾಜಿ ಅಧ್ಯಕ್ಷ ಗಂಗರೆ ಕಾಲುವೆ ನಾರಾಯಣಸ್ವಾಮಿ ಹಾಗೂ ಹಿರಿಯ ವಕೀಲ ನಾರಾಯಣಸ್ವಾಮಿ ಅವರು ಸಹ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕೇವಲ 90 ದಿನಗಳು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡು ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಸಿದ್ದು ಅವರೇ ಸ್ಪರ್ಧಿಸಲಿ: ಸವಾಲು : ಕಾಂಗ್ರೆಸ್ ನಾಯಕರು ಮುಳಬಾಗಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜು ಪರ ಬ್ಯಾಟಿಂಗ್ ಮಾಡುತ್ತಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗುವ ಮುಂಚೆ ಗೊಂದಲದ ಜತೆಗೆ ಭಿನ್ನಮತ ನ್ಪೋಟಗೊಂಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚಿರತೆ, ಹುಲಿ, ಸಿಂಹ ಯಾರಾದರೂ ಸ್ಪರ್ಧಿಸಲಿ ಕ್ಷೇತ್ರದ ಮತದಾರರು ಅಭಿವೃದ್ಧಿಯನ್ನು ನೆಚ್ಚಿಕೊಂಡಿರುವ ಜನ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಈ ಕ್ಷೇತ್ರದಲ್ಲಿ ವಲಸಿಗರಿಗೆ ಮನ್ನಣೆ ನೀಡಿಲ್ಲ ಕೊತ್ತೂರು ಮಂಜುನಾಥ್ ಅಲ್ಲದೆ ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿ ಎಂದು ಬಿಜೆಪಿ ನಾಯಕರು ಸವಾಲೊಡ್ಡಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಸಂದೇಶ ರವಾನೆ : ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದ ಸಂಘಟನೆ ತೊಡಗಿಸಿಕೊಂಡಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯನ್ನು ಗಮನಿಸಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಮುಖಂಡರು ಮತ್ತು ಸ್ವತಃ ನಾನು ಸಹ ಹೊರಗಿನಿಂದ ಬರುವ ಯಾವುದೇ ಅಭ್ಯರ್ಥಿಗೆ ಬೆಂಬಲಿಸುವ ಪ್ರಶ್ನೆ ಇಲ್ಲ ಎನ್ನುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಕೇವಲ ಸ್ಥಳೀಯ ಅಭ್ಯರ್ಥಿ ಯಾರೇ ಆಗಲಿ ಅವರನ್ನು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ವರಿಷ್ಠರಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.