ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಕೆ.ಎಂ.ಮುನೇಗೌಡ ನೇಮಕ
Team Udayavani, Jul 11, 2020, 4:53 PM IST
ಚಿಕ್ಕಬಳ್ಳಾಪುರ: ಸತತ ಎರಡು ವರ್ಷಗಳಿಂದ ತೆರವಾಗಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚಿಕ್ಕಬಳ್ಳಾಪುರದ ಹಾಲಿ ಜಿಪಂ ಸದಸ್ಯರಾದ ವಕೀಲ ಕೆ.ಎಂ.ಮುನೇಗೌಡರನ್ನು ನೇಮಕ ಮಾಡಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶನಿವಾರ ಆದೇಶಿಸಿದ್ದಾರೆ.
ಕಳೆದ 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ದಳ ತೊರೆದು ಆಗ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶಾಸಕರಾಗಿದ್ದ ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದಿದ್ದರು.
ಸತತ ಎರಡು ವರ್ಷಗಳಿಂದ ಜಿಡಿಎಸ್ ಜಿಲ್ಲಾ ಅಧ್ಯಕ್ಷರ ಆಯ್ಕೆ ಆಗಿರಲಿಲ್ಲ. ಈಗ ಹಾಲಿ ಜಿಪಂ ಸದಸ್ಯರಾಗಿರುವ ನಂದಿ ಕ್ಷೇತ್ರದ ಸದಸ್ಯರಾದ ಕೆ.ಎಂ.ಮುನೇಗೌಡರನ್ನು ಪಕ್ಷದ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿ ಶನಿವಾರ ಆದೇಶ ಪತ್ರವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಚಿಂತಾಮಣಿ ಕ್ಷೇತ್ರದ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ, ಜಿಪಂ ಸದಸ್ಯ ಕೆ.ಸಿ.ರಾಜಾಕಾಂತ್, ಯುವ ಮುಖಂಡ ಮೇಲೂರು ರವಿಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.