ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮದ್ಯಮಾರಾಟವನ್ನು ನಿರ್ಬಂಧಿಸಿ “ಒಣ ದಿನ” ಘೋಷಣೆ:ಜಿಲ್ಲಾಧಿಕಾರಿ
Team Udayavani, Oct 23, 2020, 8:49 PM IST
ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ 28.10.2020 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ 26.10.2020 ರಂದು ಸಂಜೆ 5 ಗಂಟೆಯಿಂದ 28.10.2020 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಲ್ಲಿನ ಕೆ.ಎಸ್.ಬಿ.ಸಿ.ಎಲ್ ಡಿಪೋಗಳು,ವೈನರಿ ಘಟಕಗಳು ಹಾಗೂ ಎಲ್ಲಾ ಬಗೆಯ ಮದ್ಯದಂಗಡಿಗಳಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟವನ್ನು ನಿರ್ಬಂಧಿಸಿ “ಒಣ ದಿನಗಳೆಂದು”” ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಭಾರತ ಚುನಾವಣಾ ಆಯೋಗದ ಪ್ರಿನ್ಸಿಪಲ್ ಸೆಕ್ರೆಟರಿ ಅವರ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2020 ರ ಹಿನ್ನೆಲೆಯಲ್ಲಿ ದಿನಾಂಕ 28.10.2020 ರಂದು ಮತದಾನ ನಡೆಯುವ ಸಲುವಾಗಿ ಮತದಾನ ಮುಗಿಯುವ ಪೂರ್ವದ 48 ಗಂಟೆಗಳಿಂದ ಮತದಾನ ಮುಗಿಯುವವರೆಗೆ ಪಾನ ನಿರೋಧ ದಿನಗಳೆಂದು ಘೋಷಣೆ ಮಾಡಿದ್ದು ಈ ವೇಳೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಬಂಧಿಸಲಾಗಿದ್ದು ಶಾಂತಿ ಮತ್ತು ಮುಕ್ತವಾಗಿ ಚುನಾವಣೆ ನಡೆಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.