ಕೋವಿಡ್-19 ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಡಾ.ಅನಿಲ್ ಕುಮಾರ್ ನಿಧನ
Team Udayavani, Apr 16, 2020, 5:04 PM IST
ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ಅನಿಲ್ ಕುಮಾರ್ ಗುರುವಾರ ಮಧ್ಯಾಹ್ನ ತೀವ್ರ ಹೃದಯಾಘಾದಿಂದ ಮೃತಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆಯ ಸರ್ಜನ್ ಆಗಿದ್ದ ಡಾ.ವಿಜಯ ಕುಮಾರ್ ಕೋಲಾರಕ್ಕೆ ವರ್ಗಾವಣೆಗೊಂಡ ಬಳಿಕ ಡಾ.ಅನಿಲ್ ಕುಮಾರ್ ಸುಮಾರು ಎಂಟು ತಿಂಗಳಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೋವಿಡ್-19 ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಆಸ್ಪತ್ರೆಯನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿದ್ದ ಡಾ.ಅನಿಲ್ ಕುಮಾರ್ ಗುರುವಾರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತ ಪಟ್ಟಿದ್ದಾರೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ, ಡಾ.ಅನಿಲ್ ಕುಮಾರ್ ಸಾವಿನ ಸುದ್ದಿಯನ್ನು ಉದಯವಾಣಿಗೆ ಖಚಿತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.