Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಮಂಜುನಾಥ ಸೇರಿ ಇಬ್ಬರು ಬಾಲಕರ ಜಲಸಮಾಧಿ
Team Udayavani, Apr 30, 2024, 8:49 PM IST
ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪನಹಳ್ಳಿ ಗ್ರಾಮದಲ್ಲಿ ಏ. 30ರ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ಬಾಲಕರನ್ನು ಗ್ರಾಮದ ಸುಬ್ರಮಣಿ ಮತ್ತು ಗೌರಮ್ಮ ದಂಪತಿಯ ಪುತ್ರ ನಿತಿನ್ ಕುಮಾರ್ (15) ಹಾಗೂ ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಅಂಗರೇಖನಹಳ್ಳಿ ಗ್ರಾಮದ ಹನುಮಂತಪ್ಪ-ಪದ್ಮ ದಂಪತಿಯ ಪುತ್ರ ಮಂಜುನಾಥ್ (16) ಎಂದು ಗುರುತಿಸಲಾಗಿದೆ.
ನಿತಿನ್ ಕುಮಾರ್ ಹಾಗೂ ಮಂಜುನಾಥ ಇಬ್ಬರು ಕೃಷಿ ಹೊಂಡದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಇಬ್ಬರು ಹೊಂಡದ ಆಳಕ್ಕೆ ಇಳಿದಿದ್ದು, ಈಜಿ ಹೊರ ಬರಲು ಆಗದೇ ಮುಳುಗಿದ್ದಾರೆ.
ಇದನ್ನು ನೋಡಿ ಮತ್ತೊಬ್ಬ ಯುವಕ ಬಾಲಕರ ಮನೆಗೆ ತೆರಳಿ ಘಟನೆಯ ಬಗ್ಗೆ ತಿಳಿಸಿದ ನಂತರ ಪೋಷಕರು ಸ್ಥಳಕ್ಕೆ ಆಗಮಿಸುವ ವೇಳೆಗೆ ಇಬ್ಬರು ಹೊಂಡದಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಆಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಇಬ್ಬರು ಬಾಲಕರ ಮೃತ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ, ಗ್ರಾಮಾಂತರ ಪಿಎಸ್ ಐ ಸತೀಶ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.