Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ
ಶಿಡ್ಲಘಟ್ಟ ತಾಲೂಕಿನ ಗೊರಮಡಗು ಗ್ರಾಮದ ನಿವಾಸಿ ಪಟೇಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ
Team Udayavani, Sep 3, 2024, 8:11 PM IST
ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 5.000 ರೂ. ದಂಡವನ್ನು ವಿಧಿಸಿ ಚಿಕ್ಕಬಳ್ಳಾಪುರ ಎಫ್‌ಟಿಎಸ್‌ಸಿ-1ನೇ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗೊರಮಡುಗು ಗ್ರಾಮದ ಪಟೇಲ್ ಎಂದು ಗುರುತಿಸಲಾಗಿದೆ. 2020 ನೇ ಜನವರಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ದ್ವಿ ಚಕ್ರ ವಾಹನದಲ್ಲಿ ಅಪಹರಿಸಿಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದರು.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಅಡಿಯಲ್ಲಿ ಮೊಕದ್ದಮೆ ದಾಖಲು ಮಾಡಿದ್ದು ತನಿಖೆಯನ್ನು ಪೂರ್ತಿಗೊಳಿಸಿ ಠಾಣೆ ಸಿಪಿಐ ಸುರೇಶ್.ಕೆ, ರವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸದರಿ ಪ್ರಕರಣದ ವಿಚಾರಣೆಯು ಚಿಕ್ಕಬಳ್ಳಾಪುರದ ಎಫ್.ಟಿ.ಎಸ್.ಸಿ-1ನೇ ನ್ಯಾಯಾಲಯದಲ್ಲಿ ವಾದ, ಪ್ರತಿವಾದ ನಡೆದಿದ್ದು, ಫೆ.9 ರಂದು ವಿಚಾರಣೆ ಮುಗಿದಿತ್ತು. ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ ಕುಮಾರಿ.ಎನ್. ಅವರು ಆರೋಪಿಗೆ ಕಲಂ 5(ಎಲ್) ದಂಡನೀಯ ಅಪರಾಧದ ಕಲಂ 6 ಆಫ್ ಷೋಕ್ಸೋ ಆಕ್ಟ್ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡವನ್ನು ವಿಧಿಸಿ ಶಿಕ್ಷೆ ನೀಡಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮೀನರಸಿಂಹಪ್ಪ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.