ನಿರ್ಮಾಣ ಹಂತದ ವೈದ್ಯಕೀಯ ಕಾಲೇಜಿನ ಶೀಟ್ ಸೆಂಟ್ರಿಂಗ್ ಕುಸಿತ; 9 ಕಾರ್ಮಿಕರಿಗೆ ಗಾಯ, ಜಿಲ್ಲಾಧಿಕಾರಿ ಭೇಟಿ
Team Udayavani, Dec 25, 2022, 11:11 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಬಹುನಿರೀಕ್ಷಿತ, ಆರೋಗ್ಯ ಸಚಿವರ ತವರು ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 9 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಆರೂರು ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಕಾಮಗಾರಿ ವೇಗವಾಗಿಯೇ ನಡೆಯುತ್ತಿದ್ದು, ಮೋಲ್ಡ್ ಹಾಕುವ ಸಲುವಾಗಿ ಶೀಟ್ ಸೆಂಟ್ರಿಂಗ್ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆಯೆಂದು ದೂರು ಕೇಳಿ ಬಂದಿದೆ. ಸದ್ಯ 9 ಮಂದಿ ಕಾರ್ಮಿಕರು ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್ ಅವರು ತಾಲೂಕಿನ ಅರೂರು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ, ಬಳಿಕ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಮುಂದಿನ ವರ್ಷ ಫೆಬ್ರವರಿ ಒಳಗೆ ಅದನ್ನು ಉದ್ಘಾಟಿಸಲು ಯೋಜನೆಯನ್ನು ರೂಪಿಸಿದ್ದಾರೆ. ಈ ಹಿನ್ನೆಲೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿ ವೇಗ ಪಡೆದುಕೊಂಡಿದ್ದು, ಹಗಲಿರುಳು ಕಾರ್ಮಿಕರು ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಶ್ರಮ ವಹಿಸುತ್ತಿದ್ದಾರೆ. ಆದರೆ ಸೆಂಟ್ರಿಂಗ್ ಹೊಡೆಯುವಾಗ ಈ ದುರಂತ ಸಂಭವಿಸಿದೆ.
ತನಿಖೆಗೆ ಡೀಸಿ ಸೂಚನೆ: ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ಕೊನೆಯ ಹಂತದ ಸ್ಲಾಬ್ ಹಾಕುವ ವೇಳೆಯಲ್ಲಿ ಕುಸಿತದಿಂದ 9 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ದೇವರ ದಯೆಯಿಂದ ಅವರೆಲ್ಲಾ ಪ್ರಾಣಾಪಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತುರ್ತಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಒದಗಿಸಲಾಗಿದೆ ಎಂದರು.
ಸುಧ್ಧಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಘಟನೆ ಹೇಗೆ ಆಗಿದೆ ಎಂಬುದರ ಕುರಿತು ಎಂಜಿನಿಯರ್‌ಗಳು ತಾಂತ್ರಿಕವಾಗಿ ಪರಿಶೀಲನೆ ಮಾಡಿ ಹೇಳಬೇಕಾಗುತ್ತದೆ 20*30 ಮೀಟರ್ ಲೆಕ್ಚರ್ ಹಾಲ್ ಸ್ಟೀಲ್‌ಫ್ರೇಂ ಹಾಕಿ ಸ್ಲಾಬ್ ಹಾಕಿದ್ದಾರೆ. ಕಾಂಕ್ರೇಟ್ ಹಾಕುವ ವೇಳೆ ಭಾರಕ್ಕೆ ಕುಸಿತವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕುರಿತು ಪರಿಶೀಲನೆ ಮಾಡಲು ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ಶಾಖೆಯ ಅಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ. ತಾಂತ್ರಿಕವಾಗಿ ಸಣ್ಣಪುಟ್ಟ ದೋಷ ಇರಬಹುದು. ಆ ದೋಷವನ್ನು ಪರಿಶೀಲಿಸಿ ಸರಿಪಡಿಸಲು ನಿರ್ದೇಶನ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾತ್ರಿ ವೇಳೆಯಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಅದಕ್ಕೆ ಕಾನೂನಿನಲ್ಲಿಯೂ ಅವಕಾಶ ಇದೆ. ನಾನು ಕೂಡ ಪದೇ ಪದೇ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ್ದೇನೆ. ಅಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಲಾಗುತ್ತಿದೆ. ಆ ಸ್ಥಳದಲ್ಲಿ ಸಾಕಷ್ಟು ಬೆಳಕಿದ್ದು, ಕಾರ್ಮಿಕರು ಹೆಲ್ಮೇಟ್ ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ಘಟನೆ ನಡೆದಿರುವುದು ದುರಾದೃಷ್ಠಕರ, ಹೀಗಾಗಬಾರದಿತ್ತು ಎಂದ ಅವರು ತಾಂತ್ರಿಕವಾಗಿ ವರದಿ ಬರಲಿ ಆನಂತರ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.