ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ
Team Udayavani, Jun 11, 2021, 7:14 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ವಾರದಿಂದ ಉತ್ತಮ ಮಳೆ ಆಗುತ್ತಿದ್ದು,ಎಲ್ಲಾ ಕಡೆ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಹೀಗಾಗಿ ರೈತರಿಗೆಯಾವುದೇ ರೀತಿಯಲ್ಲೂ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆಕೃಷಿ ಇಲಾಖೆ ಅ ಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರಜಿಲ್ಲಾಧಿ ಕಾರಿ ಎಚ್.ಅಮರೇಶ್ ಹೇಳಿದರು.
ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೃಷಿ ಚಟುವಟಿಕೆಗಳ ಪೂರ್ವ ಸಿದ್ಧತೆ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿ, ಜಿಲ್ಲಾದ್ಯಂತಪೂರ್ವ ಮುಂಗಾರು ಮಳೆ ಉತ್ತಮವಾಗಿ ಆಗಿದೆ. ಇದು ಒಳ್ಳೆಯಮುನ್ಸೂಚನೆಯಾಗಿದೆ. ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭಗೊಂಡಿರುವುದರಿಂದ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಪರಿಕರಗಳಿಗೆಸಮಸ್ಯೆ ಆಗದಂತೆ ಅ ಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.
ಕೃಷಿ ಚಟುವಟಿಕೆಗಳು ಆರಂಭಗೊಂಡಿರುವುದರಿಂದ ರಸಗೊಬ್ಬರಕ್ಕೆಬೇಡಿಕೆ ಹೆಚ್ಚಾಗಲಿದೆ. ಆದರೆ, ರಸಗೊಬ್ಬರ ಅಂಗಡಿ ಮಾಲಿಕರು ಇದನ್ನೇಬಂಡವಾಳ ಮಾಡಿಕೊಳ್ಳಬಾರದು. ರಸಗೊಬ್ಬರದ ಎಂ.ಆರ್.ಪಿ ದರಕ್ಕಿಂತಹೆಚ್ಚಾಗಿ ತೆಗೆದುಕೊಳ್ಳಬಾರದು. ದರಪಟ್ಟಿಯನ್ನು ರೈತರಿಗೆ ಕಾಣುವಂತೆಅಂಗಡಿಯಲ್ಲಿ ಪ್ರಚುರ ಪಡಿಸಬೇಕು ಎಂದು ಹೇಳಿದರು.ಜಾಗೃತಿ ಮೂಡಿಸಿ: ಈ ಬಗ್ಗೆ ಯಾವುದೇ ದೂರುಗಳು ಕಂಡುಬಂದಲ್ಲಿ ಆ ಅಂಗಡಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
ಇದರ ಜತೆಗೆ ಹೆಚ್ಚಿನರೈತರು ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಜಾಗƒತಿ ಮೂಡಿಸಬೇಕು ಎಂದುಸಂಬಂಧಪಟ್ಟ ಅ ಧಿಕಾರಿಗಳಿಗೆ ಸೂಚಿಸಿದರು.ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್.ರೂಪ ಮಾತನಾಡಿ, ಪ್ರಸಕ್ತವರ್ಷ ಮುಂಗಾರು ಮಳೆ ಉತ್ತಮವಾಗಿ ಆಗುವ ಮುನ್ಸೂಚನೆಯನ್ನುಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಜೂನ್‌ಈಗಿನವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ರೈತರು ಬಿತ್ತನೆ ಕಾರ್ಯಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನುಸಾಕಷ್ಟು ಲಭ್ಯವಿದ್ದು, ಬೇಡಿಕೆಗೆ ಅನುಗುಣವಾಗಿ ದಾಸ್ತಾನು ಪೂರೈಸಲುಕ್ರಮ ವಹಿಸಲಾಗುವುದು ಎಂದರು.ಸಭೆಯಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕಿ ಅನುರೂಪ, ಬಿತ್ತನೆ ಬೀಜಮತ್ತು ರಸಗೊಬ್ಬರ ದಾಸ್ತಾನು ಮಳಿಗೆಗಳ ಮಾಲಿಕರು, ವಿತರಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.