ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃಧ್ಧಿಗೆ ಕ್ರಮ: ಕೆ.ಎನ್.ರಮೇಶ್
Team Udayavani, Oct 1, 2020, 12:37 AM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃಧ್ಧಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಲು ಇಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ಎನ್.ರಮೇಶ್ ಅವರು ಜಿಲ್ಲೆಯಲ್ಲಿ ವಿವಿಧ ಪ್ರವಾಸಿಗಳ ತಾಣಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯ ದಂಡಿಗಾನಹಳ್ಳಿ ಕೆರೆಗೆ ಭೇಟಿ ನೀಡಿ ಅಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಕಂಡು ಸಂತಸಗೊಂಡರು ಬೆಟ್ಟಗುಡ್ಡಗಳ ಮಧ್ಯೆ ಕೆರೆ ಮತ್ತು ಸುತ್ತಮುತ್ತಲು ಸಮೃಧ್ಧವಾಗಿ ಬೆಳೆದಿರುವ ಮರಗಿಡಗಳನ್ನು ನೋಡಿ ಇದನ್ನು ಪ್ರವಾಸಿ ತಾಣವನ್ನು ಅಭಿವೃಧ್ಧಿಗೊಳಿಸಲು ಇಂಗಿತ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆರೆಯ ಸೌಂದರ್ಯವನ್ನು ವೀಕ್ಷಿಸಲು ಜಿಲ್ಲಾದ್ಯಂತ ಸಹಸ್ರಾರು ಮಂದಿ ನಾಗರಿಕರು ಭೇಟಿ ನೀಡಿರುವುದನ್ನು ಕಂಡ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಕೆರೆಯ ಪ್ರದೇಶವನ್ನು ವೀಕ್ಷಿಸಿ ಕೆರೆ ಕೋಡಿ ಹರಿಯುತ್ತಿದ್ದನ್ನು ಕಂಡು ಹರ್ಷ ವ್ಯಕ್ತಪಡಿಸಿದರು.
ನಿರ್ದೇಶಕರು ಭೇಟಿ ನೀಡುವ ವೇಳೆಯಲ್ಲಿ ಜಿಲ್ಲೆಯ ವಿವಿಧಡೆಯಿಂದ ಬಂದಿದ್ದ ನಾಗರಿಕರು, ಮಹಿಳೆಯರು, ಮಕ್ಕಳು ಕೆರೆಯಲ್ಲಿ ಇಳಿದು ಕೋಡಿಯನ್ನು ವೀಕ್ಷಿಸಿ ಆನಂದಿಸುತ್ತಿದ್ದರು.
ದಂಡಿಗಾನಹಳ್ಳಿ ಕೆರೆಯನ್ನು ವೀಕ್ಷಿಸಿದ ನಂತರ ಜಿಲ್ಲೆಯ ಐತಿಹಾಸಿಕ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಿಸಲು ಮತ್ತು ನಂದಿ ಗಿರಿಧಾಮವನ್ನು ಅಭಿವೃಧ್ಧಿಗೊಳಿಸಲು ಸಿದ್ದಪಡಿಸಿರುವ ಯೋಜನೆ ಮತ್ತು ನಕ್ಷೆಯನ್ನು ವೀಕ್ಷಿಸಿದರು ಜಿಲ್ಲೆಯನ್ನು ಪ್ರವಾಸೋದ್ಯಮ ಕೇಂದ್ರಗಳನ್ನು ಅಭಿವೃಧ್ಧಿಗೊಳಿಸಲು ಆಸಕ್ತಿ ಹೊಂದಿರುವ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಿ ಪ್ರವಾಸಿ ತಾಣಗಳನ್ನು ಅಭಿವೃಧ್ಧಿಗೊಳಿಸುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವ ಜೊತೆಗೆ ಜಿಲ್ಲೆ ಅಭಿವೃಧ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ನಿರ್ದೇಶಕರ ಆಸಕ್ತಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಪ್ರಮುಖ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃಧ್ಧಿಗೊಳಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ಎನ್.ರಮೇಶ್ ಅವರು ವಿಶೇಷ ಆಸಕ್ತಿ ತೋರಿಸಿದರು.
ಯಾವ ಯಾವ ಪ್ರದೇಶಗಳನ್ನು ಪ್ರವಾಸಿ ಕೇಂದ್ರಗಳಾಗಿ ಅಭಿವೃಧ್ಧಿಗೊಳಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿ ದಂಡಿಗಾನಹಳ್ಳಿ ಕೆರೆ ವೀಕ್ಷಣೆ ವೇಳೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಳೆನಾಡು ಎಂದು ಖ್ಯಾತಿ ಹೊಂದಿರುವ ಈ ಪ್ರದೇಶವನ್ನು ಪ್ರವಾಸಿಗರ ತಾಣವಾಗಿ ಅಭಿವೃಧ್ಧಿಗೊಳಿಸಿ ಕೆರೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಂಡು ಬೋಟಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್, ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಚಿಕ್ಕಬಳ್ಳಾಪುರ ನಗರಸಭೆಯ ಪೌರಾಯುಕ್ತ ಡಿ. ಲೋಹಿತ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನರೇಶ್,ಪ್ರವಾಸೋದ್ಯಮ ಇಲಾಖೆಯ ವಿಶೇಷ ಅಧಿಕಾರಿ ಗೋಪಾಲ್,ಚಿಕ್ಕಬಳ್ಳಾಪುರ ತಹಶೀಲ್ದಾರ್ ನಾಗಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.