ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ವಿನಯ್ ಶ್ಯಾಮ್ ಅವರಿಗೆ ಟಿಕೆಟ್ ನೀಡಲು ಆಗ್ರಹ
Team Udayavani, Jul 5, 2022, 10:23 PM IST
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವೆಯ ಜೊತೆಗೆ ಪಕ್ಷ ಸಂಘಟನೆ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಮುಂಬರುವ 2023ರ ವಿಧಾನಸಭೆಯ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 254 ಮತಗಟ್ಟೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಎದುರಿಸುತ್ತಿರುವ ಸಮಸ್ಯೆಗಳನ್ನು ಉಭಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟು 2023ರ ವಿಧಾನಸಭೆಯ ಚುನಾವಣೆಗೆ ಸಮಾಜದಲ್ಲಿರುವ ಎಲ್ಲಾ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ನಡೆ ಗ್ರಾಮದ ಕಡೆ ಕಾರ್ಯಕ್ರಮವನ್ನು ರೂಪಿಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದಾರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ಕೂಡಲೇ ಅವರ ನೆರವಿಗೆ ಧಾವಿಸುವ ಕೆಲಸವನ್ನು ಮಾಡುತ್ತಿದ್ದಾರೆ ಜೊತೆಗೆ ಸಮಾಜದಲ್ಲಿರುವ ಎಲ್ಲಾ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಶಾಲಾ ಶುಲ್ಕವನ್ನು ಪಾವತಿಸುವ ಜೊತೆಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗಾಗಿ ಅನುಕೂಲ ಕಲ್ಪಿಸಲು ಬ್ಯಾಗ್‍ಗಳನ್ನು ಸಹ ವಿತರಿಸಿ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿಗೊಳಿಸುವ ಸಲುವಾಗಿ ವಿನೂತನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ಮಾರಕ ಖಾಯಿಲೆಗಳು ಮತ್ತು ಆರೋಗ್ಯ ಸಮಸ್ಯೆಗಳಿಂದ ನರಳುತ್ತಿರುವ ಜನರಿಗೆ ಆರ್ಥಿಕ ನೆರವು ನೀಡಿ ಶೀಘ್ರದಲ್ಲಿ ಗುಣಮುಖರಾಗಲು ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟರು.
ಇದನ್ನೂ ಓದಿ : ಮೂಳೂರು ತೊಟ್ಟಂ ಪರಿಸರದ ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ, ಶಾಸಕರ ಭೇಟಿ ; ಪರಿಶೀಲನೆ
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ನಗರಸಭೆಯ ಚುನಾವಣೆ, ಗ್ರಾಪಂಗಳ ಚುನಾವಣೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ ಇವರೊಂದಿಗೆ ಕ್ಷೇತ್ರದಲ್ಲಿ ಅನೇಕ ನಾಯಕರು ಸಹ ಅವರಿಗೆ ಸಾಥ್ ನೀಡಿದ್ದಾರೆ ಕ್ಷೇತ್ರದಲ್ಲಿ ಆರೋಗ್ಯ ಸಚಿವರ ಸರ್ವಾಧಿಕಾರ ಧೋರಣೆ ಮತ್ತು ಆಡಳಿತ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗಾಗಿ ಕಾಂಗ್ರೆಸ ಪಕ್ಷದಿಂದ ಇವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿ ನಾವೆಲ್ಲರು ಸೇರಿ ವಿನಯ್ ಎನ್ ಶ್ಯಾಮ್ ಅವರನ್ನು ಗೆಲ್ಲಿಸುತ್ತೇವೆ ಎಂದು ಘೋಷಣೆ ಮಾಡಿದರು.
ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲುಗಳನ್ನು ಆಲಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವ ಕಾರ್ಯದಲ್ಲಿ ಎಲ್ಲರೂ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂದು ಸೂಚನೆ ನೀಡಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.