ಚಿಕ್ಕಬಳ್ಳಾಪುರ ಜಿಪಂ ಸಿಇಓ ಬಿ.ಫೌಝೀಯಾ ತರುನ್ನುಮ್ ವರ್ಗಾವಣೆ,ಸಾರ್ವಜನಿಕರ ಅಸಮಾಧಾನ

Team Udayavani, Sep 29, 2020, 1:39 AM IST

ಚಿಕ್ಕಬಳ್ಳಾಪುರ ಜಿಪಂ ಸಿಇಓ ಬಿ.ಫೌಝೀಯಾ ತರುನ್ನುಮ್ ವರ್ಗಾವಣೆ,ಸಾರ್ವಜನಿಕರ ಅಸಮಾಧಾನ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕ ಕೇಂದ್ರ ಮಾಡಲು ಶ್ರಮಿಸಿದ ಜಿಪಂ ಸಿಇಒ ಫೌಝೀಯಾ ತರುನ್ನುಮ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಪಿ.ಶಿವಶಂಕರ್ ಅವರನ್ನು ಮುಂದಿನ ಆದೇಶವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಆದರೇ ಜಿಲ್ಲೆಯಲ್ಲಿ ಖಡಕ್ ಜಿಪಂ ಸಿಇಒ ಆಗಿ ಸೇವೆ ಸಲ್ಲಿಸಿದ ಫೌಝೀಯಾ ತರುನ್ನುಮ್ ಅವರಿಗೆ ವರ್ಗಾವಣೆಯ ಸ್ಥಳವನ್ನು ಸಹ ತೋರಿಸಿಲ್ಲ.

ಚಿಕ್ಕಬಳ್ಳಾಪುರ ಜಿಲ್ಲೆಯನ್ನು ರಾಜ್ಯದಲ್ಲಿ ಮಾದರಿ ಮಾಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಜಿಪಂ ಸಿಇಒ ಫೌಝೀಯಾ ತರುನ್ನುಮ್ ತಮ್ಮ ಕಾರ್ಯವೈಖರಿಯ ಮೂಲಕ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದರು ಸತತ ಬರಗಾಲದಿಂದ ತತ್ತರಿಸುತ್ತಿರುವ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಮಳೆ ನೀರು ಸಂರಕ್ಷಣೆ ಮಾಡುವ ಬಹುಕಮಾನ್ ಚೆಕ್‍ಡ್ಯಾಂಗಳು, ರೈತರ ಹೊಲದಲ್ಲಿ ಬದುಗಳು, ಮಾದರಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳು, ಶಾಲಾ ವಿದ್ಯಾರ್ಥಿಗಳಿಗೆ ಭದ್ರತೆಗಾಗಿ ಕಾಂಪೌಂಡ್ ನಿರ್ಮಾಣ, ಡಿಜಿಟಲ್ ಗ್ರಂಥಾಲಯಗಳು, ಗ್ರಾಮೀಣ ಉದ್ಯಾವನಗಳು, ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಭಿವೃಧ್ಧಿಗೊಳಿಸಲು ಶ್ರಮಿಸಿದ ಜಿಪಂ ಸಿಇಓ ಅವರ ದಿಡೀರ್ ವರ್ಗಾವಣೆ ಬಗ್ಗೆ ಜಿಲ್ಲೆಯಲ್ಲಿ ಜನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸಲು ಹೋದ ಸ್ಥಳದಲ್ಲಿ ಜನರಿಗೆ ಜಾಗೃತಿ ಮೂಡಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸಹಾಯವಾಣಿ ಕೇಂದ್ರವನ್ನು ತೆರೆದು ಜನರಿಗೆ ಅನುಕೂಲ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಗ್ರಾಪಂ ಅಭಿವೃಧ್ಧಿ ಅಧಿಕಾರಿಗಳು, ಗ್ರಾಪಂ ಸದಸ್ಯರು,ಅಂಗನವಾಡಿ, ಆಶಾ ಕಾರ್ಯಕರ್ತರನ್ನು ಒಳಗೊಂಡಂತೆ ಕೋವಿಡ್ 19 ಕಾರ್ಯಪಡೆಯನ್ನು ರಚಿಸಿ ಜನರಲ್ಲಿ ಆತ್ಮಸ್ಥೈರ್ಯ ತುಂಬಿಸಿದ ಜಿಪಂ ಸಿಇಒ ಅವರನ್ನು ವರ್ಗಾವಣೆ ಮಾಡಿರುವುದರಿಂದ ಸಾರ್ವಜನಿಕರ ವಲಯದಲ್ಲಿ ಸರ್ಕಾರ ನಡೆಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.