ಮಕ್ಕಳು ಸಮಾಜದ ಆಸ್ತಿಯಾಗಿ ಬೆಳೆಯಬೇಕು

Team Udayavani, Feb 6, 2019, 7:28 AM IST

makkalu.jpg

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳನ್ನು ಸಮಾಜಮುಖೀಯಾಗಿ ಬೆಳೆಸುವ ಹೊಣೆ ಶಿಕ್ಷಕರ ಮೇಲಿದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ತಮ್ಮ ಬದ್ಧತೆ ಹಾಗೂ ಪ್ರಾಮಾ ಣಿಕತೆಯನ್ನು ಮರೆತರೆ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕರು ಜವಾಬ್ದಾರಿಯುತ ವಾಗಿ ಮಕ್ಕಳನ್ನು ಬೆಳೆಸಬೇಕಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶಾಂತಲಾ ತಿಳಿಸಿದರು.

ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಪ್ರಸಿಡೆನ್ಸಿ ಶಾಲಾ ವಾರ್ಷಿ ಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ವಾರ್ಷಿ ಕೋತ್ಸವಗಳು ಆಡಂಬರಕ್ಕಿಂತ ಅರ್ಥ ಪೂರ್ಣವಾಗಿ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ನಡೆಯಬೇಕು ಎಂದರು.

ವಿದ್ಯಾರ್ಥಿ ಜೀವನ ತಳಹದಿ: ವಿದ್ಯಾರ್ಥಿ ಜೀವನವನ್ನು ನಿರ್ಲಕ್ಷಿಸದೇ ಗುರು ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು, ಪ್ರತಿಯೊಬ್ಬರ ಜೀವನಕ್ಕೂ ವಿದ್ಯಾರ್ಥಿ ಜೀವನ ತಳಹದಿಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಪಡೆಯುವ ಜ್ಞಾರ್ನಾಜನೆ ಜೀವನದುದ್ದಕ್ಕೂ ಕಲಿಕೆಗೆ ಸಹಕಾರಿ ಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶಿಸ್ತಿನಿಂದ ಪಾಠ ಅಭ್ಯಾಸ ಮಾಡಬೇಕು ಎಂದರು.

ಮಕ್ಕಳ ಮೇಲೆ ಒತ್ತಡ ಬೇಡ: ಪ್ರತಿಯೊಬ್ಬರ ಜೀವನವನ್ನು ಪರಿ ಪೂರ್ಣವಾಗಿಸಬಲ್ಲ ಶಕ್ತಿ ಶಿಕ್ಷಣಕ್ಕಿದೆ. ಪೋಷಕರು ಕೂಡ ಮಕ್ಕಳಿಗೆ ಆಸ್ತಿ, ಹಣ ಸಂಪಾದಿಸಿ ಇಡುವುದಕ್ಕಿಂತ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಟ್ಟರೆ ಅವರೇ ಭವಿಷ್ಯದಲ್ಲಿ ಆಸ್ತಿವಂತರಾಗು ತ್ತಾರೆ. ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಾಲೆಗಳ ಕೊಡುಗೆ ಕೂಡ ಅಪಾರ ವಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೇಲೆ ಒತ್ತಡ ಹೇರ ಬಾರದು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ನಯಮತ್‌ ಬೇಗಂ ಮಾತನಾಡಿ, ಶಿಕ್ಷಣದಿಂದ ಮಾತ್ರ ಇಂದು ಸಮಾಜದಲ್ಲಿ ಪ್ರತಿ ಯೊಬ್ಬರು ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ. ಪ್ರತಿಯೊಂದು ಕ್ಷೇತ್ರ ದಲ್ಲಿಯೂ ಪ್ರಬಲ ಪೈಪೋಟಿ ಇರುವುದರಿಂದ ವಿದ್ಯಾರ್ಥಿಗಳು ಪಠ್ಯೇ ತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಜೃನಶೀಲತೆ ಹಾಗೂ ಕೌಶಲ್ಯತೆಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ರಾಂಶುಪಾಲ ಮುಷ್ತಾಕ್‌ ಅಹ ಮ್ಮದ್‌, ಡಾ.ರಾಮು, ಪ್ರೊ.ಮಾಧವ್‌, ಶಿಕ್ಷಕರಾದ ಹರೀಶ್‌, ಮುಖ್ತಾರ್‌, ಪರ್ವಿನ್‌, ಹೇಮಾವತಿ, ಶ್ರೀನಿವಾಸ್‌, ಹರೀಶ್‌, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.