ನಿರ್ಲಕ್ಷ್ಯಕ್ಕೆ ಒಳಗಾದ ಚಿತ್ರಾವತಿ ಇಕೋ ಉದ್ಯಾನ ರಕ್ಷಿಸಿ


Team Udayavani, Sep 12, 2022, 1:48 PM IST

tdy-10

ಬಾಗೇಪಲ್ಲಿ: ಪಟ್ಟಣದ ಚಿತ್ರಾವತಿ ನದಿ ದಡದಲ್ಲಿರುವ ನಿರ್ಮಲ ಭಕ್ತಿ ತಾಣ, ಪ್ರಸಿದ್ಧ ಜಡಲಭೈರವೇಶ್ವರ ದೇವಾಲಯದ ಚಿತ್ರಾವತಿ ಇಕೋ ಉದ್ಯಾನ ಸಮರ್ಪಕ ನಿರ್ವಹಣೆ ಇಲ್ಲದೆ, ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಜನರ ಬಹುದಿನಗಳ ಕನಸಿನಂತೆ, ಹಲವು ಜನಪ್ರತಿನಿಧಿಗಳ ಒತ್ತಾಸೆಯಿಂದ ಈ ಚಿತ್ರಾವತಿ ಇಕೋ ಉದ್ಯಾನ ನಿರ್ಮಾಣವಾಗಿದೆ. ಸಮರ್ಪಕ ನಿರ್ವಹಣೆ ಮಾಡದ ಕಾರಣ, ಸೊರಗುತ್ತಿದೆ. ಗಿಡಗಂಟಿಗಳನ್ನು ಕತ್ತರಿಸದ ಕಾರಣ ಮನಬಂದಂತೆ ಬೆಳೆದುಕೊಂಡು ಉದ್ಯಾನದ ಹೊರಗಡೆಗೂ ಚಾಚಿಕೊಂಡಿವೆ. ಉದ್ಯಾನ ಸರಿಯಾದ ನಿರ್ವಹಣೆ ಇಲ್ಲದೆ, ಬೀಗ ಹಾಕಿದ್ದರೂ ಪುಂಡಪೋಕರಿಗಳು ಕಬ್ಬಿಣದ ಬಾಗಿಲು ಹತ್ತಿ ಒಳಗೆ ಪ್ರವೇಶಿಸಿ, ಮದ್ಯಪಾನ ಮಾಡಿ ಬಾಟಲಿ, ಬೀಡಿ, ಸಿಗರೆಟ್‌, ತಿಂಡಿ ತಿಂದ ಕವರ್‌ಗಳನ್ನು ಅಲ್ಲಿಯೇ ಎಸೆದು ಹೋಗುತ್ತಿದ್ದಾರೆ. ಭದ್ರತಾ ಸಿಬ್ಬಂದಿ ನೇಮಕ ಮಾಡದ ಕಾರಣ ಕೊಠಡಿಗೆ ಬೀಗ ಹಾಕಲಾಗಿದೆ.

ಪಾರ್ಕ್‌ಗೆ ಭೂಮಿ ಪೂಜೆ: ಪಟ್ಟಣದ ಹೊರವಲಯದ ಚಿತ್ರಾವತಿ ನದಿ ದಡದ ಐತಿಹಾಸಿಕ ಜಡಲಬೈರವೇಶ್ವರ ದೇಗುಲದ ಪಕ್ಕದಲ್ಲಿ ಘಂಟಂವಾರಿಪಲ್ಲಿ ಗ್ರಾಪಂ ವ್ಯಾಪ್ತಿಯ 8.20 ಎಕರೆ ಪ್ರದೇಶದಲ್ಲಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ 2004ರಲ್ಲಿ ಚಿತ್ರಾವತಿ ಇಕೋ ಉದ್ಯಾನಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.

25 ಲಕ್ಷ ರೂ.ನಲ್ಲಿ ನಿರ್ಮಾಣ: ಪಟ್ಟಣದಲ್ಲಿ ಯಾವುದೇ ಉದ್ಯಾನ ಇಲ್ಲದ ಕಾರಣ, 2011ರಲ್ಲಿ ಮಾಜಿ ಶಾಸಕ ಎನ್‌.ಸಂಪಂಗಿ ಅವಧಿಯಲ್ಲಿ ಈ ಉದ್ಯಾನ ಘಂಟಂವಾರಿಪಲ್ಲಿ ಗ್ರಾಪಂ ವ್ಯಾಪ್ತಿಗೆ ಸೇರಿದ್ದರೂ, ಪುರಸಭೆಯಿಂದ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಾಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ. ಅನುದಾನದಲ್ಲಿ ಈ ಸುಂದರ ಉದ್ಯಾನ ನಿರ್ಮಾಣ ಮಾಡಿ, ಪುರಸಭೆಯಿಂದ ಇದರ ನಿರ್ವಹಣೆಗೆ ಸಿಬ್ಬಂದಿ ನೇಮಿಸಲಾಯಿತು. ಹಾಲಿ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಅವರ ಅಧಿಕಾರಾವಧಿಯಲ್ಲಿ ಮುಖ್ಯರಸ್ತೆಯಿಂದ ಶ್ರೀಜಡಲಬೈರವೇಶ್ವರ ದೇಗುಲದವರಿಗೂ ಡಾಂಬರು ರಸ್ತೆ ನಿರ್ಮಿಸಲಾಯಿತು. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ ಚಿತ್ರಾವತಿ ಇಕೋ ಉದ್ಯಾನದಲ್ಲಿ ಸೂಕ್ತ ನಿರ್ವ ಹಣೆ, ದಿನದ 24 ಗಂಟೆ ಕಾರ್ಯನಿರ್ವಹಿಸುವ ಸೆಕ್ಯೂರಿಟಿ ಗಾರ್ಡ್‌, ಪೊಲೀಸ್‌ ಬಂದೋಬಸ್ತ್ ಗೆ ನೇಮಿಸ ಬೇಕಾಗಿದೆ. ಅನೈತಿಕ ಚಟುವಟಿಕೆ ತಡೆಯಲು ಕ್ರಮ ವಹಿಸಬೇಕಾಗಿದೆ ಎಂದು ಜನರು ಒತ್ತಾಯಿಸಿದ್ದಾರೆ.

ಹಲವು ಪ್ರಯತ್ನದ ನಂತರ ಉದ್ಯಾನ ನಿರ್ಮಾಣವಾಗಿದೆ. ಅದನ್ನು ತುಂಬಾ ಜೋಪಾನವಾಗಿ ಕಾಪಾಡಿಕೊಳ್ಳಬೇಕಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಪುರಸಭೆ, ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬಿ.ಆರ್‌.ಕೃಷ್ಣ, ಸಂಶೋಧಕ.

ಚಿತ್ರಾವತಿ ಇಕೋ ಉದ್ಯಾನ ಘಂಟಂ ವಾರಿಪಲ್ಲಿ ಗ್ರಾಪಂ ವ್ಯಾಪ್ತಿಗೆ ಸೇರಿದೆ. ಅದರ ನಿರ್ವಹಣೆ ಅವರೇ ಮಾಡಬೇಕು. ಈ ವಿಚಾರವನ್ನು ಸಹಾಯಕ ಅಭಿಯಂತರರಲ್ಲಿ ಚರ್ಚೆ ಮಾಡಿ, ಉದ್ಯಾನದಲ್ಲಿನ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗು ವುದು, ಸ್ವತ್ಛತೆಗೆ ಆದ್ಯತೆ ನೀಡಲಾಗುವುದು. ಮಧುಕರ್‌, ಪುರಸಭೆ ಮುಖ್ಯಾಧಿಕಾರಿ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.