Cleanliness Campaign: ಶಿಡ್ಲಘಟ್ಟ ನಗರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಅತಿಕ್ರಮಿಸಿರುವ ಫುಟಪಾತ್ ತೆರುಗೊಳಿಸಲು ಪೌರಾಯುಕ್ತರಿಗೆ ಸೂಚನೆ
Team Udayavani, Jul 25, 2023, 11:04 AM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸ್ವಚ್ಛ ಹಾಗೂ ಹಸಿರುಮಯ ಮಾಡಲು ಸಂಕಲ್ಪ ಮಾಡಿರುವ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಜು.25ರ ಮಂಗಳವಾರ ಬೆಳಂ ಬೆಳಗ್ಗೆ ರೇಷ್ಮೆ ನಗರಿ ಶಿಡ್ಲಘಟ್ಟಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಸ್ವತಃ ನೆರವೇರಿಸುವ ಮೂಲಕ ಗಮನ ಸೆಳೆದರು.
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕ್ಲೀನ್ ಅಂಡ್ ಗ್ರೀನ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಂ.ಸಿ. ಸುಧಾಕರ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಮೂರು ವಾರಗಳಿಂದ ಕಾರ್ಯಪ್ರವೃತರಾಗಿರುವ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಪ್ರತಿ ಮಂಗಳವಾರ ಒಂದೊಂದು ನಗರಕ್ಕೆ ಭೇಟಿ ನೀಡಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಜೊತೆಗೆ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದಾರೆ.
ಶಿಡ್ಲಘಟ್ಟ ನಗರದ ಸಾರಿಗೆ ಬಸ್ ನಿಲ್ದಾಣದಿಂದ ಕೋಟೆ ವೃತ್ತದ ವರೆಗೆ ಸ್ವತಃ ಜಿಲ್ಲಾಧಿಕಾರಿ ಸ್ವಚ್ಛತಾ ಕಾರ್ಯ ನಿರ್ವಹಿಸಿದರು. ಅದಕ್ಕೆ ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಸಾಥ್ ನೀಡಿದರು. ನಗರದ ಮುಖ್ಯ ರಸ್ತೆಯಾಗಿರುವ ಟಿಬಿ ರಸ್ತೆಯಲ್ಲಿ ಎಡ ಮತ್ತು ಬಲಭಾಗದಲ್ಲಿ ಪ್ರತಿಯೊಂದು ಮನೆಯ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ತಮ್ಮ ಮನೆಯಲ್ಲಿಒಣ ಮತ್ತು ಹಸಿ ಕಸವನ್ನು ಸಂಗ್ರಹಿಸಿಕೊಂಡು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಸಹಕರಿಸಬೇಕೆಂದು ನಾಗರಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ನಗರದ ದರ್ಶನ ಮಾಡುವ ವೇಳೆ ಕೆಲವರು ಅಕ್ರಮವಾಗಿ ಫುಟ್ ಪಾತ್ ಒತ್ತುವರಿ ಮಾಡಿಕೊಂಡಿರುವುದನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಸ್ವತಃ ಅವರೇ ತೆರವುಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಿ ಇಂದು ಸಂಜೆಯೊಳಗೆ ಫುಟ್ ಪಾತ್ ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪೌರಾಯುಕ್ತರಿಗೆ ತಾಕೀತು ಮಾಡಿದರು.
ನಗರದ ಕೋಟೆ ವೃತ್ತದಲ್ಲಿ ಸರ್ಕಾರಿ ಶಾಲೆಯ ಮುಂದೆ ಕಸವನ್ನು ಶೇಖರಣೆ ಮಾಡಿ ಬ್ಲಾಕ್ ಸ್ಪಾಟ್ ಮಾಡಿಕೊಂಡಿರುವುದನ್ನು ನೋಡಿ ಅಸಮಾಧಾನ ವ್ಯಕ್ತಪಡಿಸಿ ಶಾಲೆಯ ಸುತ್ತಮುತ್ತಲು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಆಯಾ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಬೇಕೆಂದು ತಹಶೀಲ್ದಾರ್ ಗೆ ಸೂಚಿಸಿದರು.
ಇದೇ ವೇಳೆ ಚಹಾ ಅಂಗಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿ ನೈರ್ಮಲ್ಯ ಹದಗೆಟ್ಟಿರುವುದನ್ನು ನೋಡಿ ಹೋಟೆಲ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಮಳೆಯಿಂದ ಈ ತರಹ ಆಗಿದೆ ಎಂದು ನಿರ್ಲಕ್ಷ ಭರಿತವಾಗಿ ಉತ್ತರಿಸಿದ್ದರಿಂದ ಕೆಂಡಮಂಡಲರಾದ ಜಿಲ್ಲಾಧಿಕಾರಿ, ಕೂಡಲೇ ಹೋಟೆಲ್ ಮಾಲೀಕನಿಗೆ ನೋಟಿಸ್ ನೀಡಿ ಹೋಟೆಲ್ ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಪೌರಾಯುಕ್ತರಿಗೆ ನಿರ್ದೇಶನ ಮಾಡಿದರು.
ನಂತರ ನಗರದ ಎರಡನೇ ಟಿಎಂಸಿ ಬಡಾವಣೆ ಎರಡನೇ ಕಾರ್ಮಿಕ ನಗರ ಪ್ರದೇಶಕ್ಕೆ ತೆರಳಿದ ಜಿಲ್ಲಾಧಿಕಾರಿ ಅಲ್ಲಿನ ರಸ್ತೆ ಚರಂಡಿಗಳು ಸಾಕ್ಷಾತ್ ದರ್ಶನ ಮಾಡಿದರು.
ಅಮೃತ ನಗರ ಯೋಜನೆಯಡಿ ನಗರದಲ್ಲಿ ಅಗತ್ಯವಾಗಿ ಬೇಕಾಗಿರುವ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ನಗರಸಭೆಯಲ್ಲಿ ಚರ್ಚಿಸಿ ಒಂದು ಪ್ರಸ್ತಾವನೆ ಸಲ್ಲಿಸಿದರೆ ಕೂಡಲೇ ಅದಕ್ಕೆ ಅನುಮೋದನೆ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.
ಕಳೆದ ವರ್ಷ ಮಳೆಯಿಂದ ಹಾನಿಯಾಗಿರುವ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿಗಾಗಿ ವಿಶೇಷ ನೆರವು ನೀಡಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆಶ್ವಾಸನೆ ನೀಡಿದರು.
ತಹಶೀಲ್ದಾರ್ ಬಿ.ಎನ್. ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ. ರೇಣುಕಾ, ಶಿಡ್ಲಘಟ್ಟ ನಗರಸಭೆಯ ಅಧ್ಯಕ್ಷ ಸುಮಿತ್ರ ರಮೇಶ್, ಪೌರಾಯುಕ್ತ ಆರ್. ಶ್ರೀಕಾಂತ್, ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ಜೆಡಿಎಸ್ ಮುಖಂಡರಾದ ತಾದೂರು ರಘು, ನಂದ್ ಕಿಶನ್, ಹನುಮಂತಪುರ ವಿಜಯಕುಮಾರ್, ಮದೀನಾ ಮಸೀದಿಯ ಅಧ್ಯಕ್ಷ ಎಚ್. ಎಸ್. ಫಯಾಝ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.